ಗುಡುಗು ಸಹಿತ ಮಳೆ; ರಾಜ್ಯದ 8 ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್

ಮಂಗಳೂರು, ಮೇ 31: ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮೇ 31 ಮತ್ತು ಜೂನ್ 1ರಂದು ವೇಗವಾಗಿ ಗಾಳಿ ಬೀಸಲಿದ್ದು, ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇರುವುದಾಗಿ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಈ ಭಾಗಗಳ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಜೂ.1ರವರೆಗೆ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡಿನಲ್ಲಿ ಜೂ.2 ರಂದು ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮುಂದಿನ ಮೂರು ದಿನಗಳ ಕಾಲ ರಾಜ್ಯದ ಹಲವು ಭಾಗಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ದೊರೆತಿದ್ದು, ಜೂನ್ 1 ಕ್ಕೆ ಮುಂಗಾರು ಕೇರಳವನ್ನು ಪ್ರವೇಶಿಸಲಿರುವುದಾಗಿ ತಿಳಿದುಬಂದಿದೆ. ಉತ್ತಮ ಮುಂಗಾರು ನಿರೀಕ್ಷಿಸಲಾಗಿದೆ.

Yello Alert Issued 8 Districts Of Karnataka Forecasting Heavy Rain

ಮೇ 29 ಹಾಗೂ 30 ರಂದೂ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದ 8 ಜಿಲ್ಲೆಗಳಲ್ಲಿ ''ಯೆಲ್ಲೊ ಅಲರ್ಟ್'' ಘೋಷಣೆ ಮಾಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+