Puttur: ಮತದಾನ ಮಾಡುವ ಫೋಟೋ ಕ್ಲಿಕ್ಕಿಸಿ ಗ್ರೂಪ್‌ಗೆ ಶೇರ್ ಮಾಡಿದ ಯುವಕ

ಮಂಗಳೂರು, ಏಪ್ರಿಲ್‌ 26: 2024ರ ಲೋಕಸಭಾ ಚುನಾವಣಾ ಎರಡನೇ ಹಂತದ ಮತದಾನ ಭರದಿಂದ ಸಾಗುತ್ತಿದ್ದು, ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ನಡೆಯುತ್ತಿದೆ. ಯಶಸ್ವಿ ಮತದಾನ ನಡೆಸಲು ಅಧಿಕಾರಿಗಳು ಸಕಲ ಸಿದ್ಧತೆ ಮಾಡಿಕೊಂಡರೂ ಸಹ ಅಲ್ಲಲ್ಲಿ ಇವಿಎಂ ಯಂತ್ರಗಳಲ್ಲಿ ದೋಷ ಕಂಡು ಬರುತ್ತಿದೆ. ಹಾಗೂ ಕಾನೂನು ಉಲ್ಲಂಘನೆಯಾಗುತ್ತಿದೆ. ಅದೇ ರೀತಿಯ ಘಟನೆ ದಕ್ಷಿಣ ಕನ್ನಡದಲ್ಲಿ ನಡೆದಿದೆ.

ಮತಕೇಂದ್ರದ ಮತಗಟ್ಟೆಯೊಳಗೆ ಮೊಬೈಲ್‌ ನಿರ್ಬಂಧ ವಿಧಿಸಿದ್ದರೂ ಕೂಡ ದಕ್ಷಿಣ ಕನ್ನಡದ ಪುತ್ತೂರಿನ ಮತಗಟ್ಟೆಯೊಂದರಲ್ಲಿ ಕಾನೂನು ಉಲ್ಲಂಘನೆಯಾಗಿದೆ. ಪುತ್ತೂರಿನ ಮತಗಟ್ಟೆಯಲ್ಲಿ ಮತದಾನ ಮಾಡುವ ಫೋಟೋ ಕ್ಲಿಕ್ಕಿಸಿದ ಯುವಕ ಮತದಾನ ಮಾಡುತ್ತಿದ್ದ ಫೋಟೋವನ್ನು ವಾಟ್ಸಪ್‌ ಗ್ರೂಪ್‌ನಲ್ಲಿ ಶೇರ್‌ ಮಾಡಿದ್ದಾನೆ.

Young Voter Clicked A Photo Of Voting And Shared It In The Whatsapp Group At Puttur

ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕುವ ಫೋಟೋವನ್ನು ತೆಗೆದ ಯುವಕ, ಪುತ್ತೂರಿನ ಕೋಟಿ-ಚೆನ್ನಯ ಕಂಬಳ ಗ್ರೂಪ್‌ಗೆ ಮತದಾನ ಮಾಡುವ ಫೋಟೊ ಶೇರ್ ಮಾಡಿದ್ದಾನೆ. ಈ ಫೋಟೋ ಸದ್ಯ ಎಲ್ಲೆಡೆ ವೈರಲ್ ಆಗುತ್ತಿದ್ದು, ಮತಗಟ್ಟೆಯ ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಆಕ್ರೋಶ ಕೇಳಿಬರುತ್ತಿದೆ.

ಇನ್ನು ಇಂದು ಕರ್ನಾಟಕ ಮಾತ್ರವಲ್ಲದೇ ಒಟ್ಟು 13 ರಾಜ್ಯದ 88 ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಕೇರಳ 20, ಮಧ್ಯಪ್ರದೇಶ 06, ಮಹಾರಾಷ್ಟ್ರ 08, ರಾಜಸ್ಥಾನ 13, ಉತ್ತರ ಪ್ರದೇಶದ 8 ಕ್ಷೇತ್ರ ಸೇರಿ ಒಟ್ಟು 88 ಲೋಕಸಭಾ ಕ್ಷೇತ್ರಗಳಲ್ಲಿ ಎರಡನೇ ಹಂತದ ಲೋಕಸಭಾ ಚುನಾವಣೆಯ ಮತದಾನ ನಡೆಯುತ್ತಿದೆ.

ಕರ್ನಾಟಕದ ಉಡುಪಿ-ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ , ಚಿತ್ರದುರ್ಗ, ತುಮಕೂರು ಮಂಡ್ಯ , ಮೈಸೂರು-ಕೊಡಗು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+