ಬಂಟ್ವಾಳದಲ್ಲಿ ಯುವಕರಿಗೆ ಚಾಕುವಿನಿಂದ ಇರಿದ ದುಷ್ಕರ್ಮಿಗಳು

ಮಂಗಳೂರು, ಡಿಸೆಂಬರ್ 12: ಕಾರಿನಲ್ಲಿ ಬಂದ ದುಷ್ಕರ್ಮಿಗಳ ತಂಡ ಯುವಕರ ಮೇಲೆ ಹಲ್ಲೆ ನಡೆಸಿ, ಚಾಕುವಿನಿಂದ ಇರಿದು ಪರಾರಿಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ನಡೆದಿದೆ.

ಬಂಟ್ವಾಳದ ಕೈಕಂಬದಲ್ಲಿ ನಿನ್ನೆ ರಾತ್ರಿ ಈ ಘಟನೆ ನಡೆದಿದ್ದು, ದುಷ್ಕರ್ಮಿಗಳ ತಂಡ ಮೂರು ಮಂದಿ ಯುವಕರಿಗೆ ಚೂರಿಯಿಂದ ಇರಿದು ಪರಾರಿಯಾಗಿದೆ. ಘಟನೆಯಲ್ಲಿ ಅನ್ಸಾರ್ (23) ಸಫ್ವಾನ್ (23) ಫಯಾಝ್ (23) ಎಂಬುವವರು ಗಾಯಗೊಂಡಿದ್ದಾರೆ.

youngsters were stabbed by miscreant in Bantwal

ನಿನ್ನೆ ಮಂಗಳವಾರ ರಾತ್ರಿ (ಡಿಸೆಂಬರ್ 11)ಕಾರಿನಲ್ಲಿ ಬಂದ 5 ಮಂದಿ ದುಷ್ಕರ್ಮಿಗಳ ತಂಡ ಈ ಕೃತ್ಯ ಎಸಗಿದೆ. ಕಾರಿನಲ್ಲಿ ಬಂದ ದುಷ್ಕರ್ಮಿಗಳು ಕೈಕಂಬ ಬಳಿ ನಿಂತಿದ್ದ ಅಸ್ಸಾರ್ , ಸಫ್ವಾನ್ ಹಾಗು ಫಯಾಝ್ ಅವರ ಮೇಲೆ ಏಕಾಏಕಿ ಹಲ್ಲೆ ನಡೆಸಿದ್ದಾರೆ. ನಂತರ ಮೂವರಿಗೂ ಚೂರಿಯಿಂದ ಇರಿದು ಪರಾರಿಯಾಗಿದ್ದಾರೆ.

youngsters were stabbed by miscreant in Bantwal

ಘಟನೆಯಲ್ಲಿ ಗಾಯಗಂಡ ಈ ಮೂವರನ್ನು ಸ್ಥಳೀಯರು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಘಟನಾ ಸ್ಥಳಕ್ಕೆ ಬಂಟ್ವಾಳ ಪೊಲೀಸರು ತೆರಳಿ ಪರಿಶೀಲನೆ ನಡೆಸಿ ತನಿಖೆ ಆರಂಭಿಸಿದ್ದಾರೆ. ಬಂಟ್ವಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+