ಯುವತಿಗೆ ಅಶ್ಲೀಲ ವಿಡಿಯೋ ತೋರಿಸಿದ ಯುವಕನ ಬಂಧನ
ಮಂಗಳೂರು, ಜುಲೈ 11: ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಅಶ್ಲೀಲ ವಿಡಿಯೋ ತೋರಿಸಲು ಮುಂದಾದ ಯುವಕನೊಬ್ಬನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ನಗರದ ಯೆಯ್ಯಾಡಿ ಎಂಬಲ್ಲಿ ಈ ಘಟನೆ ನಡೆದಿದೆ. ಬಂಧಿತನನ್ನು ಬೆಂದೂರ್ ವೆಲ್ ನಿವಾಸಿ ಡೆವಿನ್ ಪಿಂಟೋ (29) ಎಂದು ಗುರುತಿಸಲಾಗಿದೆ.
ನಿನ್ನೆ ಸಂಜೆ ಇಲ್ಲಿಯ ಶರ್ಬತ್ ಕಟ್ಟೆ ಬಳಿ ಮನೆಗೆ ತೆರಳುತ್ತಿದ್ದ ಯುವತಿಯನ್ನು ಡೆವಿನ್ ಪಿಂಟೋ ಹಿಂಬಾಲಿಸಿ ಬಂದಿದ್ದಾನೆ. ಈ ಸಂದರ್ಭದಲ್ಲಿ ಯುವತಿಯನ್ನು ಅಡ್ಡಗಟ್ಟಿ ತನ್ನ ಮೋಬೈಲ್ ನಲ್ಲಿದ್ದ ಅಶ್ಲೀಲ ವೀಡಿಯೊ ತೋರಿಸಿದ್ದಾನೆ ಎಂದು ಆರೋಪಿಸಲಾಗಿದೆ.

ಈ ಸಂದರ್ಭದಲ್ಲಿ ಯುವತಿ ಕಿರುಚಿಕೊಂಡಿದ್ದಾಳೆ. ಸ್ಥಳದಿಂದ ಪರಾರಿಯಾಗಲು ಯತ್ನಿಸಿದ ಯುವಕನನ್ನು ಸ್ಥಳೀಯರು ಹಿಡಿದು ವಿಚಾರಿಸಿದ್ದಾರೆ. ನಂತರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಈತನನ್ನು ಬಂಧಿಸಿದ್ದು, ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.












Click it and Unblock the Notifications