ಮಂಜೇಶ್ವರ: ಕ್ರಿಕೆಟ್ ಆಡುವಾಗ ಕುಸಿದು ಬಿದ್ದು ಯುವಕ ಸಾವು

ಮಂಗಳೂರು, ಡಿಸೆಂಬರ್ 16: ಕ್ರಿಕೆಟ್ ಆಡುತ್ತಿದ್ದ ವೇಳೆ ಯುವಕನೊಬ್ಬ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶನಿವಾರ ಮಂಜೇಶ್ವರದಲ್ಲಿ ನಡೆದಿದೆ.

ಮೃತ ಯುವಕನನ್ನು ಉಪ್ಪಳ ಜೋಡುಕಲ್ಲು ಕಯ್ಯಾರು ನಿವಾಸಿಯಾದ ನಾರಾಯಣ ಎಂಬವರ ಪುತ್ರ ಪದ್ಮನಾಭ ಎಂದು ಗುರುತಿಸಲಾಗಿದೆ. ಮೀಯಪದವು ಶಾಲಾ ಮೈದಾನದಲ್ಲಿ ನಡೆಯುತ್ತಿದ್ದ ಕ್ರಿಕೆಟ್ ಪಂದ್ಯಾಟದಲ್ಲಿ ದೇರಂಬಲ ತಂಡದ ಪರ ಬೌಲಿಂಗ್ ಮಾಡುತ್ತಿದ್ದ ವೇಳೆ ಏಕಾಏಕಿ ಕುಸಿದು ಬಿದ್ದಿದ್ದಾನೆ.

Youth collapses and Dies While Playing cricket at Manjeshwara

ಕೂಡಲೇ ಸಹ ಆಟಗಾರರು ಪದ್ಮನಾಭನನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲು ಕೊಂಡೊಯ್ಯುವಷ್ಟರಲ್ಲಿ ದಾರಿ ಮಧ್ಯೆ ಕೊನೆಯುಸಿರೆಳೆದರು. ಪದ್ಮನಾಭ ತೀವ್ರ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ ಎಂದು ಹೇಳಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+