ನೇತ್ರಾವತಿ ಸೇತುವೆಗೆ ಬೈಕ್ ಡಿಕ್ಕಿ: ಸವಾರ ಸ್ಥಳದಲ್ಲಿಯೇ ಸಾವು

ಮಂಗಳೂರು, ಜನವರಿ 23: ಉಳ್ಳಾಲ ನಗರದ ನೇತ್ರಾವತಿ ಸೇತುವೆಯಲ್ಲಿ ಮಂಗಳವಾರ ತಡರಾತ್ರಿ ಸಂಭವಿಸಿರುವ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಡೆದಿದೆ.

ಬಾಗಲಕೋಟೆ ಜಿಲ್ಲೆ ಮೂಲದ ಕಳೆದ ಹಲವಾರು ವರ್ಷಗಳಿಂದ ಉಳ್ಳಾಲದ ಕಲ್ಲಾಪು, ಪಟ್ಲ ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸ್ತವ್ಯವಿದ್ದ ಸುರೇಶ್ (32) ಅಪಘಾತಕ್ಕೆ ಬಲಿಯಾದ ಯುವಕ ಎಂದು ಗುರುತಿಸಲಾಗಿದೆ.

Youth Died In Bike Accident At Near Netravathi River

ಸುರೇಶ್ ಅವರು ದ್ವಿಚಕ್ರ ವಾಹನಗಳ ಮೆಕ್ಯಾನಿಕ್ ಆಗಿದ್ದರು. ಈ ಮೊದಲು ಮಂಗಳೂರಿನ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಇವರು ಇತ್ತೀಚಿಗೆ ಸ್ವಂತ ಮೆಕ್ಯಾನಿಕ್ ಅಂಗಡಿ ತೆರೆದಿದ್ದರು. ಅವಿವಾಹಿತರಾಗಿದ್ದ ಸುರೇಶ್ ಹಲವು ವರುಷಗಳಿಂದ ತಂದೆ, ತಾಯಿ, ಸಹೋದರಿ ಜತೆ ಕಲ್ಲಾಪಿನಲ್ಲಿ ನೆಲೆಸಿದ್ದರು.

ಮಂಗಳವಾರ ತಡರಾತ್ರಿ ಮಂಗಳೂರಿನಿಂದ ಕಲ್ಲಾಪಿಗೆ ಸುರೇಶ್ ಬೈಕ್ ನಲ್ಲಿ ಬರುತ್ತಿದ್ದರು. ಈ ಸಂದರ್ಭ ಅವರು ನೇತ್ರಾವತಿ ಸೇತುವೆಯ ಬರುತ್ತಿದ್ದಂತೆ ಬೈಕ್ ಅಪಘಾತಕ್ಕೊಳಗಾಗಿದೆ. ಪರಿಣಾಮ ಆವರಣ ಗೋಡೆಗೆ ಸುರೇಶ್ ಅವರ ತಲೆ ಬಡಿದ ಪರಿಣಾಮ ವಿಪರೀತ ರಕ್ತಸ್ರಾವವಾಗಿ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮಂಗಳೂರು ದಕ್ಷಿಣ ಸಂಚಾರಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಬೈಕ್​ನಲ್ಲಿದ್ದ ಹಣ ಕದ್ದ ಖದೀಮ: ರೈತ ಕಂಗಾಲು

ವಿಜಯನಗರ: ಬೈಕ್​ನಲ್ಲಿದ್ದ ಲಕ್ಷಾಂತರ ರೂಪಾಯಿ ಹಣವನ್ನು ಖದೀಮನೊಬ್ಬ ಕಳ್ಳತನ ಮಾಡಿರುವ ಘಟನೆ ವಿಜಯನಗರ ಜಿಲ್ಲೆಯ ಹೂವಿನಹಡಗಲಿಯಲ್ಲಿ ನಡೆದಿದೆ.

ರೈತ ಮಹಾಂತೇಶ್‌ ಗೌಡ ಎನ್ನುವವರು ಟ್ರ್ಯಾಕ್ಟರ್ ಸಾಲ ಕಟ್ಟಲು ಬ್ಯಾಂಕ್​ನಿಂದ 1.50 ಲಕ್ಷ ಹಣವನ್ನು ತರುವುದನ್ನು ಗಮನಿಸಿದ ಖದೀಮ, ಬ್ಯಾಂಕ್​ನಿಂದ ಮಹಾಂತೇಶ್‌ ಗೌಡನನ್ನ ಹಿಂಬಾಲಿಸಿದ್ದಾನೆ. ಈ ವೇಳೆ ಬೈಕ್ ನಿಲ್ಲಿಸಿ ಅಂಗಡಿಗೆ ಹೋದಾಗ ಕಳ್ಳ ತನ್ನ ಕೈಚಳಕ ತೋರಿಸಿದ್ದು, ಕ್ಷಣ ಮಾತ್ರದಲ್ಲಿ ಹಣ ಕದ್ದು ಪರಾರಿಯಾಗಿದ್ದಾನೆ. ಕಳ್ಳ ಹಣ ಕದ್ದು ಪರಾರಿಯಾಗಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಘಟನೆ ಸಂಬಂಧ ಹೂವಿನಹಡಗಲಿ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+