ಕುಮಾರಧಾರ ನದಿಯಲ್ಲಿ ಮೀನು ಹಿಡಿಯಲು ಹೋದ ಇಬ್ಬರು ಯುವಕರು ನಾಪತ್ತೆ

ಮಂಗಳೂರು, ನವೆಂಬರ್. 15:ನದಿಗೆ ಮೀನು ಹಿಡಿಯಲು ಹೋದ ಯುವಕರಿಬ್ಬರು ಕಣ್ಮರೆಯಾದ ಘಟನೆ ಶ್ರೀ ಕ್ಷೇತ್ರ ಸುಬ್ರಹ್ಮಣ್ಯ ಸಮೀಪದ ದೇವಚಳ್ಳ ಗ್ರಾಮದಲ್ಲಿ ಸಂಭವಿಸಿದೆ. ನಿನ್ನೆ ರಾತ್ರಿ (ನ.14) ಕುಮಾರಧಾರ ನದಿಯಲ್ಲಿ ಮೀನು ಹಿಡಿಯಲು ಯುವಕರ ತಂಡ ತೆರಳಿತ್ತು. ಈ ಪೈಕಿ ಇಬ್ಬರು ಯುವಕರು ನಾಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ.

ನಾಪತ್ತೆಯಾಗಿರುವ ಯುವಕರನ್ನು ದೇವಚಳ್ಳ ಗ್ರಾಮದ ದೇವ ಕಾಡು ಹೊನ್ನಪ್ಪರ ಪುತ್ರ ಲತೀಶ್ ಮತ್ತು ಎಲ್ಯಣ್ಣ ಎಂಬುವವರ ಪುತ್ರ ಲಕ್ಷಿತ್ ಎಂದು ಗುರುತಿಸಲಾಗಿದೆ.

Youth drowned while fishing near Sullia

ಒಟ್ಟು 5 ಮಂದಿ ಯುವಕರ ತಂಡ ಮೀನು ಹಿಡಿಯಲು ರಾತ್ರಿ ನದಿ ತೀರಕ್ಕೆ ತೆರಳಿತ್ತು. ಅದರಲ್ಲಿ ಉಳಿದ ಮೂವರು ಸುರಕ್ಷಿತರಾಗಿದ್ದಾರೆ ಎಂದು ತಿಳಿದು ಬಂದಿದ್ದು, ಘಟನೆಯ ಸ್ಪಷ್ಟ ಚಿತ್ರಣ ಇನ್ನಷ್ಟೇ ದೊರಕಬೇಕಿದೆ. ನಾಪತ್ತೆಯಾದ ಯುವಕರು ನೀರು ಪಾಲಾಗಿದ್ದಾರೆ ಎಂಬ ಸಂಶಯ ವ್ಯಕ್ತವಾಗಿದೆ.

Youth drowned while fishing near Sullia

ಈ ಕುರಿತು ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಇಂದು ಬೆಳಗ್ಗೆ 9 ಗಂಟೆಯಿಂದ ನದಿಯಲ್ಲಿ ಶೋಧ ಕಾರ್ಯ ಆರಂಭವಾಗಿದೆ. ಸ್ಥಳೀಯ ಈಜುಗಾರರರು ಕೂಡ ನದಿಯಲ್ಲಿ ಶೋಧ ಕಾರ್ಯದಲ್ಲಿ ಭಾಗವಹಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+