ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕುವೈತ್ ನಲ್ಲಿ ಸಂಕಷ್ಟಕ್ಕೆ ಸಿಲುಕಿದ 35 ಯುವಕರು: ಸದಾನಂದ ಗೌಡ ಭರವಸೆ

|
Google Oneindia Kannada News

ಮಂಗಳೂರು ಮೇ 25: ಮಂಗಳೂರಿನ ಸಂಸ್ಥೆಯೊಂದು 35 ಮಂದಿ ಯುವಕರನ್ನು ವಿದೇಶಕ್ಕೆ ಕರೆದೊಯ್ದು ಸೂಕ್ತ ಉದ್ಯೋಗ ಕಲ್ಪಿಸದೆ ವಂಚಿಸಿದ ಘಟನೆ ಬೆಳಕಿಗೆ ಬಂದಿದೆ. ನಗರದ ಮಾಣಿಕ್ಯ ಅಸೋಸಿಯೇಟ್ಸ್ ಪ್ಲೇಸ್ ‌ಮೆಂಟ್ ಎನ್ನುವ ಕಂಪೆನಿಯಿಂದ ವಂಚನೆಗೊಳಗಾದ 35 ಮಂದಿ ಮಂಗಳೂರಿಗರು ಕಳೆದ 6 ತಿಂಗಳಿನಿಂದ ಕುವೈತ್ ನಲ್ಲಿ ಸಂಕಷ್ಟದ ಜೀವನ ನಡೆಸುತ್ತಿದ್ದಾರೆ.

ಉಚಿತ ಕ್ಷೌರ ಮಾಡಿ ಮೋದಿ ಅಭಿಮಾನ ಮೆರೆದ ಪುತ್ತೂರಿನ ಕ್ಷೌರಿಕಉಚಿತ ಕ್ಷೌರ ಮಾಡಿ ಮೋದಿ ಅಭಿಮಾನ ಮೆರೆದ ಪುತ್ತೂರಿನ ಕ್ಷೌರಿಕ

ಕುವೈಟ್‌ನಲ್ಲಿ ಕೆಲಸ‌ ಕೊಡಿಸುವುದಾಗಿ ನಂಬಿಸಿದ್ದ ಮಾಣಿಕ್ಯ ಅಸೋಸಿಯೇಟ್ಸ್ ಪ್ಲೇಸ್ ‌ಮೆಂಟ್ ಕಂಪೆನಿಯ ಪ್ರಸಾದ್ ಶೆಟ್ಟಿ ಎಂಬಾತ ಪ್ರತಿಯೊಬ್ಬರಿಂದ 65 ಸಾವಿರ ರೂಪಾಯಿ ವಸೂಲಿ ಮಾಡಿದ್ದಾನೆ. ಆದರೆ, ಇದನ್ನು ನಂಬಿ ಕುವೈತ್ ಗೆ ತೆರಳಿದ್ದ ಯುವಕರು ಮಾತ್ರ ಸರಿಯಾದ ಕೆಲಸ‌ ದೊರೆಯದೆ ಕಳೆದ 6 ತಿಂಗಳಿಂದ ಪರದಾಟ ನಡೆಸಿದ್ದಾರೆ.‌‌

 ಮಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ದಾಖಲೆ ರಹಿತ 1 ಕೋಟಿ ರೂ.ವಶ ಮಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ದಾಖಲೆ ರಹಿತ 1 ಕೋಟಿ ರೂ.ವಶ

ಪ್ರಸ್ತುತ, ಊಟಕ್ಕೂ ಗತಿಯಿಲ್ಲದೇ ತೀರಾ ಸಂಕಷ್ಟ ಎದುರಿಸುತ್ತಿದ್ದಾರೆ. ಭಾರತೀಯ ರಾಯಭಾರ ಕಚೇರಿಯನ್ನು ಸಂಪರ್ಕಿಸಿದ್ದರೂ ಯಾವುದೇ ಪ್ರಯೋಜನವಾಗದ ಹಿನ್ನೆಲೆಯಲ್ಲಿ ಸಂತ್ರಸ್ತರು ಮಂಗಳೂರಿನ ಶಾಸಕರು ಸೇರಿದಂತೆ ಜನತೆ ಸಹಾಯ ಮಾಡಬೇಕೆಂದು ವಿಡಿಯೋ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಮನವಿ ಮಾಡಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Youth from Mangaluru trapped in Kuwait reacts sadananda gowda

ಈ ಘಟನೆಗೆ ಸಂಬಂಧಿಸಿದಂತೆ ಸಂಸದ ಡಿ.ವಿ.ಸದಾನಂದ ಗೌಡ ಪ್ರತಿಕ್ರಿಯಿಸಿದ್ದು, ಕುವೈತ್‌ನಲ್ಲಿ ಸಂಕಷ್ಟಕ್ಕೆ ಸಿಲುಕಿದ ಭಾರತೀಯರ ಬಗ್ಗೆ ವಿದೇಶಾಂಗ ಸಚಿವಾಲಯದ ಅಧಿಕಾರಿಗಳ ಜೊತೆಗೆ ಮಾತುಕತೆ ನಡೆಸಲಾಗಿದ್ದು, ಸಮಸ್ಯೆಯನ್ನು ಬಗೆಹರಿಸುವ ಬಗ್ಗೆ ಕ್ರಮ ತೆಗೆದುಕೊಳ್ಳಲಾಗುತ್ತದೆ. ಈ ಬಗ್ಗೆ ಮಂಗಳೂರು ಶಾಸಕ ವೇದವ್ಯಾಸ ಕಾಮತ್ ಅವರಿಗೂ ತಿಳಿಸಲಾಗಿದೆ ಎಂದು ಪ್ರತಿಕ್ರಿಯಿಸಿದ್ದಾರೆ.

ವಿಡಿಯೋ : 4 ಕೋಟಿ ಹಣ ವಶಕ್ಕೆ, ಕಾರಿನ ಸ್ಟೆಪ್ನಿಯಲ್ಲಿತ್ತು 2 ಕೋಟಿ!ವಿಡಿಯೋ : 4 ಕೋಟಿ ಹಣ ವಶಕ್ಕೆ, ಕಾರಿನ ಸ್ಟೆಪ್ನಿಯಲ್ಲಿತ್ತು 2 ಕೋಟಿ!

ಶಾಸಕ ವೇದವ್ಯಾಸ ಕಾಮತ್ ಅವರು ಕುವೈತ್ ನಲ್ಲಿರುವ ತನ್ನ ಗೆಳೆಯರನ್ನು ಸಂಪರ್ಕಿಸಿ ಸಂತ್ರಸ್ತರಿಗೆ ಸೂಕ್ತ ವ್ಯವಸ್ಥೆ ಮಾಡುವ ಬಗ್ಗೆ ಮಾತುಕತೆ ನಡೆಸಿದ್ದಾರೆ. ಅಲ್ಲದೇ, ಕೇಂದ್ರ ಸಚಿವಾಲಯದ ಮೂಲಕ ಇಂಡಿಯನ್ ಎಂಬೆಸಿಯನ್ನು ಸಂಪರ್ಕಿಸಿ ಸಂತ್ರಸ್ತರನ್ನು ಹಿಂದಕ್ಕೆ ಕರೆಸಿಕೊಳ್ಳುವ ವ್ಯವಸ್ಥೆಯ ಬಗ್ಗೆಯೂ ಕ್ರಮ ಕೈಗೊಳ್ಳುವ ಆಶ್ವಾಸನೆ ನೀಡಿದ್ದಾರೆ.

English summary
35 youth from different parts of Mangaluru trapped in Kuwait .these youths alleged employment fraud from mangaluru based company. Now Mangaluru south constituency MLA Vedavyas kamath assured help.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X