ಕೋವಿಡ್ ಆಸ್ಪತ್ರೆಯಲ್ಲಿ ಬೆಂಕಿ ಅವಘಡ: 10 ರೋಗಿಗಳ ಸಾವು

ಮುಂಬೈ, ಮಾರ್ಚ್ 26: ಮಹಾರಾಷ್ಟ್ರದ ಮುಂಬೈನಲ್ಲಿರುವ ಕೋವಿಡ್-19 ಆಸ್ಪತ್ರೆಯಿರುವ ಮಾಲ್ ಒಂದರಲ್ಲಿ ಗುರುವಾರ ರಾತ್ರಿ ಸಂಭವಿಸಿದ ಬೆಂಕಿ ಆಕಸ್ಮಿಕದಲ್ಲಿ ಇದುವರೆಗೂ 10 ಮಂದಿ ಜೀವ ಕಳೆದುಕೊಂಡಿದ್ದಾರೆ. ಆದರೆ ಘಟನೆಯಲ್ಲಿ ಬಲಿಯಾದವರು ಕೋವಿಡ್‌ನಿಂದ ಸತ್ತಿದ್ದಾರೆಯೇ ವಿನಾ, ಬೆಂಕಿ ಅವಘಡದಿಂದ ಅಲ್ಲ ಎಂದು ಸನ್‌ರೈಸ್ ಆಸ್ಪತ್ರೆ ಹೇಳಿದೆ.

4 ಮಹಡಿಯ ಮಾಲ್‌ನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಸುಮಾರು 23 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿ, ಶುಕ್ರವಾರ ಬೆಳಗಿನವರೆಗೂ ಬೆಂಕಿ ನಂದಿಸುವ ಕಾರ್ಯ ನಡೆಸಿದವು. ಡ್ರೀಮ್ಸ್‌ಮಾಲ್‌ನ ಮೊದಲ ಮಹಡಿಯಲ್ಲಿ ಬೆಂಕಿ ಹೊತ್ತಿಕೊಂಡಿತ್ತು. ಅದರ ಹೊಗೆ ನಾಲ್ಕನೆಯ ಮಹಡಿಯಲ್ಲಿರುವ ಸನ್‌ರೈಸ್ ಆಸ್ಪತ್ರೆಗೆ ಹರಡಿತ್ತು. ಒಟ್ಟು 76 ರೋಗಿಗಳು ಆಸ್ಪತ್ರೆಯಲ್ಲಿದ್ದರು. ಅವರಲ್ಲಿ 73 ಮಂದಿ ಕೋವಿಡ್ ರೋಗಿಗಳಾಗಿದ್ದರು.

10 Killed In Massive Blaze At Maharashtra Covid-19 Hospital On Thursday Midnight

ಹತ್ತು ಮಂದಿ ಮೃತಪಟ್ಟಿದ್ದು, ಉಳಿದ ರೋಗಿಗಳನ್ನು ಸುರಕ್ಷಿತವಾಗಿ ಬೇರೆ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. 'ಅಗ್ನಿಶಾಮಕ ದಳದ ಸಿಬ್ಬಂದಿ ಉತ್ತಮ ಕಾರ್ಯ ನಿರ್ವಹಿಸಿದ್ದಾರೆ. ಆದರೆ ವೆಂಟಿಲೇಟರ್‌ನಲ್ಲಿದ್ದ ಕೆಲವರನ್ನು ರಕ್ಷಿಸಲು ಸಾಧ್ಯವಾಗಲಿಲ್ಲ. ಅದಕ್ಕಾಗಿ ಅವರ ಕುಟುಂಬದವರ ಕ್ಷಮೆ ಕೋರುತ್ತೇನೆ' ಎಂದು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿದರು. ಘಟನೆಯಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ ಐದು ಲಕ್ಷ ರೂಪಾಯಿ ಘೋಷಿಸಿದರು.

ಎರಡು ದಿನಗಳ ಬಾಂಗ್ಲಾದೇಶ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಈ ಘಟನೆ ಬಗ್ಗೆ ಟ್ವಿಟ್ಟರ್‌ನಲ್ಲಿ ಸಂತಾಪ ವ್ಯಕ್ತಪಡಿಸಿದ್ದಾರೆ. 'ಮುಂಬೈನ ಆಸ್ಪತ್ರೆಯೊಂದರಲ್ಲಿ ಅಗ್ನಿ ಆಕಸ್ಮಿಕದಿಂದ ಜೀವ ನಷ್ಟವಾಗಿರುವುದು ನೋವು ತಂದಿದೆ. ಗಾಯಾಳುಗಳು ಶೀಘ್ರವೇ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ' ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+