ಇನ್ನೂ ಹತ್ತು ಶಾಸಕರು ರಾಜೀನಾಮೆ ಕೊಡ್ತಾರೆ: ಬಿಸಿ ಪಾಟೀಲ್

ಬೆಂಗಳೂರು, ಜುಲೈ 07: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಮುಂಬೈ ಖಾಸಗಿ ಹೊಟೆಲ್‌ನಲ್ಲಿ ತಂಗಿರುವ ಹಿರೇಕೇರೂರು ಶಾಸಕ ಬಿ.ಸಿ.ಪಾಟೀಲ್ ಅವರು ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ.

ಇನ್ನೂ ಹತ್ತು ಶಾಸಕರು ರಾಜೀನಾಮೆ ಕೊಡಲಿದ್ದಾರೆ ಎಂದು ಬಿ.ಸಿ.ಪಾಟೀಲ್ ಹೇಳಿದ್ದು, ನಮಗೆ ಸರ್ಕಾರದ ಬಗ್ಗೆ ಅತೃಪ್ತಿ, ಅಸಮಾಧಾನ ಇದೆ ಹಾಗಾಗಿ ರಾಜೀನಾಮೆ ನೀಡಿದ್ದೇವೆ, ಬಿಜೆಪಿ ಸೇರುವ ವಿಚಾರ ಸದ್ಯಕ್ಕಿಲ್ಲ ಎಂದು ತಿಳಿಸಿದ್ದಾರೆ.

ಹಿರೇಕೇರೂರಿನಲ್ಲಿ ಕಾಂಗ್ರೆಸ್ ಕಟ್ಟಿದ್ದೇನೆ, ಮೂರು ಬಾರಿ ಶಾಸಕನಾಗಿ ಆಯ್ಕೆ ಆಗಿದ್ದೇನೆ ಆದರೆ ಸಚಿವ ಸ್ಥಾನಕ್ಕೆ ನನ್ನನ್ನು ನಿರ್ಲಕ್ಷಿಸಿದ್ದಾರೆ, ಸಿಕ್ಕವರಿಗೆ ಮತ್ತೆ-ಮತ್ತೆ ಅವಕಾಶಗಳು ಸಿಗುತ್ತಿವೆ ಎಂದು ಅವರು ಅತೃಪ್ತಿ ಹೊರಹಾಕಿದ್ದಾರೆ.

ಜಿಲ್ಲೆಯಲ್ಲಿ ನಾನೊಬ್ಬನೇ ಕೈ ಶಾಸಕ: ಬಿಸಿ ಪಾಟೀಲ್

ಜಿಲ್ಲೆಯಲ್ಲಿ ನಾನೊಬ್ಬನೇ ಕೈ ಶಾಸಕ: ಬಿಸಿ ಪಾಟೀಲ್

ಹಾವೇರಿ ಜಿಲ್ಲೆಗೆ ನ್ಯಾಯ ನೀಡಿಲ್ಲ, ಜಿಲ್ಲೆಯಲ್ಲಿ ನಾನೊಬ್ಬನೇ ಕಾಂಗ್ರೆಸ್ ಶಾಸಕ, ನಾನು ಸಾಧು-ವೀರಶೈವ ಲಿಂಗಾಯಿತ ಸಮುದಾಯಕ್ಕೆ ಸೇರಿದವನು, ನಮ್ಮ ಸಮುದಾಯದ ಒಬ್ಬರಿಗೂ ಮಂತ್ರಿ ಸ್ಥಾನ ನೀಡಿಲ್ಲ, ಲಿಂಗಾಯತರನ್ನು ಕಡೆಗಣಿಸಿದ್ದಾರೆ.

'ಉತ್ತರ ಕರ್ನಾಟಕದಲ್ಲಿ ಸರ್ಕಾರವೇ ಇಲ್ಲ'

'ಉತ್ತರ ಕರ್ನಾಟಕದಲ್ಲಿ ಸರ್ಕಾರವೇ ಇಲ್ಲ'

ಉತ್ತರ ಕರ್ನಾಟಕದಲ್ಲಿ ಸರ್ಕಾರವೇ ಇಲ್ಲ, ಹಾವೇರಿ ಜಿಲ್ಲೆಯನ್ನು ಸಂಪೂರ್ಣವಾಗಿ ಕಡೆಗಣಿಸಿದ್ದಾರೆ. ಈಗ ನಿರ್ಧಾರ ಮಾಡಿಯೇ ರಾಜೀನಾಮೆ ನೀಡಿದ್ದೇನೆ, ವಾಪಸ್ ಪಡೆಯುವ ಪ್ರಶ್ನೆಯೇ ಇಲ್ಲ ಎಂದು ಬಿ.ಸಿ.ಪಾಟೀಲ್ ಹೇಳಿದರು.

ಪಕ್ಷೇತರರಿಗೆ ಸಚಿವ ಸ್ಥಾನ ನೀಡಿದ್ದಕ್ಕೆ ಅಸಮಾಧಾನ

ಪಕ್ಷೇತರರಿಗೆ ಸಚಿವ ಸ್ಥಾನ ನೀಡಿದ್ದಕ್ಕೆ ಅಸಮಾಧಾನ

ಕಾಂಗ್ರೆಸ್‌ಗೆ ಶಕ್ತಿ ನೀಡಿದ್ದೆವು, ಜಿಲ್ಲೆಯ ಏಕೈಕ ಕಾಂಗ್ರೆಸ್‌ ಅನ್ನು ನಿರ್ಲಕ್ಷಿಸಿ, ಪಕ್ಷೇತರರಿಗೆ ಸಚಿವ ಸ್ಥಾನ ನೀಡಿದ್ದು ನನಗೆ, ನನ್ನ ಮತದಾರಿಗೆ ಮಾಡಿದ ಅನ್ಯಾಯ ಎಂದು ಅವರು ಹೇಳಿದರು. ಅಷ್ಟೆ ಅಲ್ಲದೆ, ನನ್ನ ಈ ರಾಜೀನಾಮೆ ನಿರ್ಧಾರವನ್ನು ನನ್ನ ಕ್ಷೇತ್ರದ ಎಲ್ಲ ಜನ ಬೆಂಬಲಿಸುತ್ತಾರೆ ಎಂದರು.

ಸಚಿವ ಸ್ಥಾನ ಆಕಾಂಕ್ಷಿ ಆಗಿದ್ದ ಬಿಸಿ ಪಾಟೀಲ್

ಸಚಿವ ಸ್ಥಾನ ಆಕಾಂಕ್ಷಿ ಆಗಿದ್ದ ಬಿಸಿ ಪಾಟೀಲ್

ಬಿಸಿ ಪಾಟೀಲ್ ಅವರು ಸಚಿವ ಸ್ಥಾನ ಆಕಾಂಕ್ಷಿ ಆಗಿದ್ದರು. ಈ ಮುಂಚೆಯೂ ಕಾಂಗ್ರೆಸ್‌ ಮೇಲೆ ಅಸಮಾಧಾನ ಹೊರ ಹಾಕಿದ್ದರು. ಕಳೆದ ಬಾರಿ ಸಂಪುಟ ವಿಸ್ತರಣೆಯಲ್ಲಿ ಅವರಿಗೆ ಅವಕಾಶ ನಿರಾಕರಿಸಿದಾಗ, ಸೂಕ್ತ ಸಮಯದಲ್ಲಿ ಸೂಕ್ತ ನಿರ್ಣಯ ತೆಗೆದುಕೊಳ್ಳುವುದಾಗಿ ಹೇಳಿದ್ದರು. ಈಗ ಅವರ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+