• search
  • Live TV
ಮುಂಬೈ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಮತ್ತೆ 10 ಸಾವಿರ ಗಡಿ ದಾಟಿತು ಮಹಾರಾಷ್ಟ್ರದ ದೈನಂದಿನ ಕೋವಿಡ್ ಸಂಖ್ಯೆ

|

ಮುಂಬೈ, ಮಾರ್ಚ್ 5: ಮಹಾರಾಷ್ಟ್ರದಲ್ಲಿ ಕೋವಿಡ್ ಸನ್ನಿವೇಶ ಮತ್ತೆ ತನ್ನ ಹಿಂದಿನ ಕರಾಳ ಸಮಯಕ್ಕೆ ಹಿಂದಿರುವ ಭೀತಿ ಉಂಟಾಗಿದೆ. ಕಳೆದ 24 ಗಂಟೆಗಳಲ್ಲಿ ಮಹಾರಾಷ್ಟ್ರದಲ್ಲಿ 10,216 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. ಈ ಹೊಸ ಪ್ರಕರಣಗಳ ಸೇರ್ಪಡೆಯಿಂದ ಇಲ್ಲಿನ ಸಕ್ರಿಯ ಪ್ರಕರಣಗಳ ಸಂಖ್ಯೆ 88,838ಕ್ಕೆ ಏರಿಕೆಯಾಗಿದೆ.

ಈಗಾಗಲೇ ರಾಜ್ಯದ ಹಲವು ಕಡೆಗಳಲ್ಲಿ ಜನರು ಗುಂಪು ಸೇರದಂತೆ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಆದರೆ ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವುದು ಮತ್ತಷ್ಟು ಕಠಿಣ ನಿರ್ಬಂಧಗಳನ್ನು ತೆಗೆದುಕೊಳ್ಳುವ ಅನಿವಾರ್ಯತೆ ಸೃಷ್ಟಿಸುವ ಸಾಧ್ಯತೆ ಇದೆ.

ಸಂತಾನಕ್ಕೂ ಕುತ್ತು ತಂದ 'ಕೊರೊನಾ', ಜನಸಂಖ್ಯೆ ಏರಿಕೆಯಲ್ಲಿ ಭಾರಿ ಇಳಿಕೆ..!

ರಾಜ್ಯದ ಕೋವಿಡ್ ಹಾಟ್‌ಸ್ಪಾಟ್ ಆಗಿರುವ ಮುಂಬೈನಲ್ಲಿ ಒಂದೇ ದಿನ 1173 ಪ್ರಕರಣಗಳು ದಾಖಲಾಗಿವೆ. ರಾಜ್ಯದಲ್ಲಿ ಒಂದೇ ದಿನ 53 ಮಂದಿ ಸೋಂಕಿತರು ಬಲಿಯಾಗಿದ್ದಾರೆ. ಇಲ್ಲಿ ಕೋವಿಡ್ ಮರಣ ಪ್ರಮಾಣ ಶೇ 2.38ರಷ್ಟಿದೆ.

ರಾಜ್ಯದಲ್ಲಿ ಇದುವರೆಗೂ 1,66,86,880 ಲ್ಯಾಬ್ ಮಾದರಿಗಳನ್ನು ಪರಿಶೀಲಿಸಿದ್ದು, 21,98,399 ಮಾದರಿಗಳಲ್ಲಿ ಪಾಸಿಟಿವ್ ಕಂಡುಬಂದಿದೆ. ಪ್ರಸ್ತುತ 4,10,411 ಮಂದಿ ಹೋಮ್ ಕ್ವಾರೆಂಟೈನ್‌ನಲ್ಲಿದ್ದಾರೆ. 4,203 ಮಂದಿ ಸಾಂಸ್ಥಿಕ ಕ್ವಾರೆಂಟೈನ್‌ನಲ್ಲಿದ್ದಾರೆ. ಕಳೆದ 24 ಗಂಟೆಗಳಲ್ಲಿ 6467 ಮಂದಿ ಸೋಂಕಿತರು ಚೇತರಿಸಿಕೊಂಡಿದ್ದಾರೆ. ಇದರಿಂದ ಗುಣಮುಖ ಸಂಖ್ಯೆ 20,55,951ಕ್ಕೇರಿದೆ. ಚೇತರಿಕೆ ಪ್ರಮಾಣ ಶೇ 93.52ರಷ್ಟಿದೆ.

ಮತ್ತೆ ಮುಂಬೈನ ಕೊರೊನಾ ಹಾಟ್‌ಸ್ಪಾಟ್ ಆಗುತ್ತಿದೆ ಧಾರಾವಿ, ಬಿಎಂಸಿ ಎಚ್ಚರ

ಮಹಾರಾಷ್ಟ್ರ, ಕೇರಳ, ಪಂಜಾಬ್, ತಮಿಳುನಾಡು, ಗುಜರಾತ್ ಮತ್ತು ಕರ್ನಾಟಕ ರಾಜ್ಯಗಳು ದೇಶದ ಒಟ್ಟು ಹೊಸ ಪ್ರಕರಣಗಳ ಪೈಕಿ ಶೇ 85ರಷ್ಟು ಪಾಲನ್ನು ಹೊಂದಿವೆ ಎಂದು ಗುರುವಾರ ಆರೋಗ್ಯ ಸಚಿವಾಲಯ ತಿಳಿಸಿತ್ತು.

English summary
With 10,216 fresh Covid-19 cases, Maharashtra's total active cases tally reached to 88,838. 53 Deaths Reported In last 24 hours.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X