ಮಹಾರಾಷ್ಟ್ರದಲ್ಲಿ 24 ಗಂಟೆಗಳಲ್ಲೇ 10,320 ಮಂದಿಗೆ ಕೊವಿಡ್-19
ಮುಂಬೈ, ಜುಲೈ.31: ನೊವೆಲ್ ಕೊರೊನಾವೈರಸ್ ಸೋಂಕು ಮಹಾರಾಷ್ಟ್ರಕ್ಕೆ ಹೊಡೆತದ ಮೇಲೆ ಹೊಡತ ಕೊಡುತ್ತಿದೆ. ಪ್ರತಿನಿತ್ಯ ರಾಜ್ಯದಲ್ಲಿ 10,000ಕ್ಕೂ ಹೆಚ್ಚು ಕೊವಿಡ್-19 ಸೋಂಕಿತ ಪ್ರಕರಣಗಳು ವರದಿಯಾಗುತ್ತಿದೆ.
ಮಹಾರಾಷ್ಟ್ರದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಅಂಕಿ-ಸಂಖ್ಯೆಗಳಿಗೆ ಸಂಬಂಧಿಸಿದಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಕಳೆದ 24 ಗಂಟೆಗಳಲ್ಲೇ 10320 ಮಂದಿಗೆ ಕೊರೊನಾವೈರಸ್ ಸೋಂಕು ತಗಲಿರುವುದು ಖಾತ್ರಿಯಾಗಿದೆ. ಒಟ್ಟು 422118 ಮಂದಿಗೆ ಕೊವಿಡ್-19 ಸೋಂಕು ಪತ್ತೆಯಾಗಿದೆ.
ರಾಜ್ಯದಲ್ಲಿ ಒಂದೇ ದಿನ 7543 ಕೊರೊನಾವೈರಸ್ ಸೋಂಕಿತರು ಗುಣಮುಖರಾಗಿದ್ದು, ಇದುವರೆಗೂ 256158 ಮಂದಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ಉಳಿದಂತೆ 1,50,662 ಸೋಂಕಿತರಿಗೆ ರಾಜ್ಯದ ನಿಗದಿತ ಕೊವಿಡ್-19 ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆ ಒಳಪಡಿಸಲಾಗಿದೆ.

ಭಾರತದಲ್ಲಿ ಹೇಗಿದೆ ಕೊರೊನಾವೈರಸ್ ಕಂಡೀಷನ್?:
ಭಾರತದಲ್ಲಿ ಕೊರೊನಾವೈರಸ್ ಸೋಂಕಿತರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ. ಕಳೆದ 24 ಗಂಟೆಗಳಲ್ಲೇ ಒಟ್ಟು ಸೋಂಕಿತರ ಸಂಖ್ಯೆ 54529 ಮಂದಿಗೆ ಸೋಂಕು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆಯು 16,93,879ಕ್ಕೆ ಏರಿಕೆಯಾಗಿದೆ. ಒಂದೇ ದಿನ ಮಹಾಮಾರಿಗೆ 762 ಜನರು ಪ್ರಾಣ ಬಿಟ್ಟಿದ್ದು, ಸಾವಿನ ಸಂಖ್ಯೆ 36548ಕ್ಕೆ ಏರಿಕೆಯಾಗಿದೆ. ಇನ್ನು, ದೇಶಾದ್ಯಂತ ಈವರೆಗೂ 1091747 ಸೋಂಕಿತರು ಗುಣಮುಖರಾಗಿದ್ದರೆ, ಬಾಕಿ ಉಳಿದ 563584 ಸೋಂಕಿತರಿಗೆ ಚಿಕಿತ್ಸೆ ಮುಂದುವರಿಸಲಾಗುತ್ತಿದೆ.












Click it and Unblock the Notifications