ಮಹಾರಾಷ್ಟ್ರ: 10483 ಮಂದಿಗೆ ಕೊವಿಡ್-19 ಸೋಂಕು, 10906 ಮಂದಿ ಗುಣಮುಖ

ಮುಂಬೈ, ಆಗಸ್ಟ್.07: ಮಹಾರಾಷ್ಟ್ರದಲ್ಲಿ ಕೊರೊನಾವೈರಸ್ ಸೋಂಕಿತರ ಸಂಖ್ಯೆಯು ಪ್ರತಿನಿತ್ಯ 10,000ದ ಗಡಿ ದಾಟುತ್ತಿದೆ. ಕಳೆದ 24 ಗಂಟೆಗಳಲ್ಲೇ ರಾಜ್ಯದಲ್ಲಿ 10483 ಜನರಿಗೆ ಮಹಾಮಾರಿಯು ಅಂಟಿಕೊಂಡಿರುವುದು ವೈದ್ಯಕೀಯ ತಪಾಸಣೆ ವೇಳೆ ದೃಢಪಟ್ಟಿದೆ.

Recommended Video

      Mysore Zooನಲ್ಲಿ ತಾನೇ ಸಾಕಿದ್ದ ಆನೆಯಿಂದ ವ್ಯಕ್ತಿ ಸಾವು | Oneindia Kannada

      ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಕುರಿತು ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ. ಒಟ್ಟು ಕೊರೊನಾವೈರಸ್ ಸೋಂಕಿತರ ಸಂಖ್ಯೆಯು 490262ಕ್ಕೆ ಏರಿಕೆಯಾಗಿದೆ.

      ಮಹಾರಾಷ್ಟ್ರದಲ್ಲಿ ಒಂದೇ ದಿನ ಕೊವಿಡ್-19 ಸೋಂಕಿಗೆ 300 ಮಂದಿ ಪ್ರಾಣ ಬಿಟ್ಟು ಸಾವಿನ ಮನೆ ಸೇರಿದ್ದಾರೆ. ಇದರಿಂದ ರಾಜ್ಯದಲ್ಲಿ ಕೊರೊನಾವೈರಸ್ ಸೋಂಕಿನಿಂದ ಮೃತಪಟ್ಟವರ ಸಂಖ್ಯೆಯು 17,092ಕ್ಕೆ ಏರಿಕೆಯಾಗಿದೆ.

      10483 New Coronavirus Cases Reported in maharashtra Today, State Tally Rise to 490262

      ಸೋಂಕಿತ ಪ್ರಕರಣಕ್ಕಿಂತ ಗುಣಮುಖರೇ ಹೆಚ್ಚು:

      ಕಳೆದ 24 ಗಂಟೆಗಳಲ್ಲೇ ರಾಜ್ಯದಲ್ಲಿ 10906 ಕೊರೊನಾವೈರಸ್ ಸೋಂಕಿತರು ಗುಣಮುಖರಾಗಿದ್ದು, ಒಟ್ಟು 1,45,582 ಮಂದಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ಮಹಾರಾಷ್ಟ್ರದಲ್ಲಿ ಇದರಿಂದ 3,27,281 ಸಕ್ರಿಯ ಪ್ರಕರಣಗಳಿರುವುದು ಪತ್ತೆಯಾಗಿದೆ.

      ಭಾರತವು ಕೊರೊನಾವೈರಸ್ ಸೋಂಕಿನ ತಪಾಸಣೆಯಲ್ಲಿ ತೀರಾ ಹಿಂದೆ ಬಿದ್ದಿದೆ ಎಂದು ಈಗಾಗಲೇ ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ ನೀಡಿದೆ. ಶುಕ್ರವಾರದ ಅಂಕಿ-ಸಂಖ್ಯೆಗಳ ಪ್ರಕಾರ ಭಾರತದಲ್ಲಿ 2030001 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ಪತ್ತೆಯಾಗಿದ್ದು, ಇದುವರೆಗೂ 41673 ಜನರು ಸಾವಿನ್ನಪ್ಪಿದ್ದಾರೆ. 13,78,642 ಸೋಂಕಿತರು ಗುಣಮುಖರಾಗಿದ್ದು, 6,09,686 ಸಕ್ರಿಯ ಪ್ರಕರಣಗಳು ಪತ್ತೆಯಾಗಿವೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+