ಮಹಾರಾಷ್ಟ್ರದಲ್ಲಿ ಒಂದೇ ದಿನ 10576 ಮಂದಿ ಕೊರೊನಾವೈರಸ್

ಮುಂಬೈ, ಜುಲೈ.22: ಭಾರತದಲ್ಲಿ ಪ್ರತಿನಿತ್ಯ 40000ಕ್ಕಿಂತ ಹೆಚ್ಚು ಕೊರೊನಾವೈರಸ್ ಸೋಂಕಿತ ಪ್ರಕರಣಗಳು ಪತ್ತೆಯಾಗುತ್ತಿವೆ. ಈ ಪೈಕಿ ಅತಿಹೆಚ್ಚು ಸೋಂಕಿತ ಪ್ರಕರಣಗಳು ಮಹಾರಾಷ್ಟ್ರದಲ್ಲೇ ಪತ್ತೆಯಾಗುತ್ತಿರುವೆ.

ಬುಧವಾರದ ಅಂಕಿ-ಅಂಶಗಳು ಕೂಡಾ ಮಹಾರಾಷ್ಟ್ರದಲ್ಲಿ ಕೊರೊನಾವೈರಸ್ ಸೋಂಕಿನ ಮಹಾಸ್ಫೋಟ ಆಗಿರುವುದನ್ನು ಸಾಕ್ಷೀಕರಿಸುತ್ತಿದೆ. ಕಳೆದ 24 ಗಂಟೆಗಳಲ್ಲೇ ರಾಜ್ಯದಲ್ಲಿ ಬರೋಬ್ಬರಿ 10576 ಜನರಿಗೆ ಕೊವಿಡ್-19 ಸೋಂಕು ತಗಲಿರುವುದು ದೃಢಪಟ್ಟಿದೆ.

ಮಹಾರಾಷ್ಟ್ರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್ ರಾಜ್ಯದ ಜನರ ಎದೆಯಲ್ಲಿ ನಡುಕ ಹುಟ್ಟಿಸುವಂತಿದೆ. ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಅತಿಹೆಚ್ಚು ಸೋಂಕಿತ ಪ್ರಕರಣಗಳು ದಾಖಲಾಗಿವೆ.

 10576 New Coronavirus Cases Reported in Maharashtra Today, State Tally Rise to 337607

ಮಹಾರಾಷ್ಟ್ರದಲ್ಲಿ 337607 ಕೊವಿಡ್-19 ಪ್ರಕರಣ:

ಮಹಾರಾಷ್ಟ್ರದಲ್ಲಿ ಒಂದೇ ದಿನ ಕೊರೊನಾವೈರಸ್ ಸೋಂಕಿತ ಪ್ರಕರಣಗಳು ದಾಖಲೆ ಮಟ್ಟದಲ್ಲಿ ಏರಿಕೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆಯು 337607ಕ್ಕೆ ಏರಿಕೆಯಾಗಿದೆ. ಈ ಪೈಕಿ 187769 ಸೋಂಕಿತರ ಆರೋಗ್ಯದಲ್ಲಿ ಗುಣಮುಖರಾಗಿದ್ದು ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಂದೇ ದಿನ ಮಹಾಮಾರಿಗೆ 280 ಮಂದಿ ಬಲಿಯಾಗಿದ್ದು, ರಾಜ್ಯದಲ್ಲಿ ಒಟ್ಟು ಸಾವಿನ ಸಂಖ್ಯೆಯು 12556ಕ್ಕೆ ಏರಿಕೆಯಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+