ಮುಂಬೈ; ಧಾರಾವಿಯಲ್ಲಿ ಮತ್ತೆ 11 ಕೊರೊನಾ ಪ್ರಕರಣ ಪತ್ತೆ

ಮುಂಬೈ, ಏಪ್ರಿಲ್ 16 : ಮುಂಬೈನ ಧಾರಾವಿ ಕೊಳಗೇರಿ ಪ್ರದೇಶದಲ್ಲಿ 11 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿವೆ. ಈ ಪ್ರದೇಶದಲ್ಲಿ ಕೊರೊನಾ ಹರಡದಂತೆ ತಡೆಯಲು ಹಲವು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.

ಧಾರಾವಿಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 71ಕ್ಕೆ ಏರಿಕೆಯಾಗಿದೆ ಎಂದು ಮುಂಬೈ ಮಹಾನಗರ ಪಾಲಿಕೆ ಹೇಳಿದೆ. ಒಟ್ಟು 8 ಜನರು ಇದುವರೆಗೂ ಮಾರಕ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ.

ಕೇಂದ್ರ ಆರೋಗ್ಯ ಇಲಾಖೆಯ ಮಾಹಿತಿಯಂತೆ ಮಹಾರಾಷ್ಟ್ರದಲ್ಲಿ ಇದುವರೆಗೂ 3081 ಕೊರೊನಾ ಪ್ರಕರಣಗಳು ದಾಖಲಾಗಿವೆ. ಇವುಗಳಲ್ಲಿ ಮುಂಬೈ ನಗರದಲ್ಲಿಯೇ 1683 ಪ್ರಕರಣಗಳಿವೆ.

11 New COVID 19 Cases Reported In Dharavi

ಧಾರಾವಿ ಸ್ಲಂ ಮುಂಬೈನಲ್ಲಿನ ಅತಿ ಜನದಟ್ಟಣೆಯ ಪ್ರದೇಶವಾಗಿದೆ. ಏಷ್ಯಾದ ಅತಿದೊಡ್ಡ ಸ್ಲಂ ಎನಿಸಿರುವ ಧಾರಾವಿಯಲ್ಲಿ ಜನದಟ್ಟಣೆಯ ಕಾರಣಕ್ಕೆ ಸೋಂಕು ಹಬ್ಬುತ್ತಿದೆ.

ಸ್ಲಂನಲ್ಲಿ ಕೊರೊನಾ ನಿಯಂತ್ರಣಕ್ಕೆ ತರುವುದು ಮಹಾರಾಷ್ಟ್ರ ಸರ್ಕಾರಕ್ಕೆ ಸವಾಲಾಗಿದೆ. ಮೊದಲು ಒಬ್ಬ ವೃದ್ಧನಿಗೆ ಈ ಸ್ಲಂನಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು. ಈಗ 71 ಜನರಿಗೆ ಸೋಂಕು ತಗುಲಿದೆ.

ಧಾರಾವಿಯಲ್ಲಿ ಸುಮಾರು 7 ಲಕ್ಷ ಜನರು ವಾಸವಾಗಿದ್ದಾರೆ ಎಂದು ಅಂದಾಜಿಸಲಾಗಿದೆ. ಇಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳವಂತೆ ಮಾಡುವುದು ಸಾಧ್ಯವಿಲ್ಲದ ಮಾತು. ಮುಂದಿನ ವಾರದದಿಂದ ಕೊಳಗೇರಿಯಲ್ಲಿ ವಾಸಿಸುವ ಪ್ರತಿಯೊಬ್ಬರಿಗೂ ಪರೀಕ್ಷೆ ಮಾಡಲು ಮಹಾನಗರ ಪಾಲಿಕೆ ತೀರ್ಮಾನಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+