Breaking: ಮಹಾರಾಷ್ಟ್ರ ಅಪ್ರಾಪ್ತೆ ಅತ್ಯಾಚಾರ ಪ್ರಕರಣ, 9 ಮಂದಿ ಬಂಧನ
ಮುಂಬೈ, ಜುಲೈ 29: ಮಹಾರಾಷ್ಟ್ರದ ನಾಗ್ಪುರ ನಗರದಲ್ಲಿ 11 ವರ್ಷದ ಬಾಲಕಿಯ ಮೇಲೆ ಒಂಬತ್ತು ಜನರು ಒಂದು ತಿಂಗಳ ಕಾಲ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಲಾಗಿದ್ದು, ಪ್ರಕರಣದ ಎಲ್ಲಾ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದರು.
ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಲ್ಲಿ ಒಬ್ಬನನ್ನು ಬಂಧಿಸಿದ ನಂತರ, ನಾಗ್ಪುರ ನಗರದಿಂದ ಸುಮಾರು 60 ಕಿಮೀ ದೂರದಲ್ಲಿರುವ ಉಮ್ರೆದ್ ಪಟ್ಟಣದಲ್ಲಿ ಜೂನ್ ತಿಂಗಳ ಮಧ್ಯ ಭಾಗದಿಂದ ಜುಲೈ ಮಧ್ಯಭಾಗದ ನಡುವೆ ನಡೆದಿದ್ದ ಸಾಮೂಹಿಕ ಅತ್ಯಾಚಾರವು ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದರು.
ಜುಲೈ 23 ಂದು ಕೊಲೆಯಾಗಿದ್ದ ಶುಭಂ ದಮ್ದು (25) ಎಂಬುವನ ಕೊಲೆ ಪ್ರಕರಣದಲ್ಲಿ ರೋಷನ್ ಕಾರ್ಗೋವಂಕರ್ (29) ಮತ್ತು ಅವನ ಸಹಚರ, ಬಾದಲ್ ಲೆಂಡೆ (24) ಅವರನ್ನು ಜುಲೈ 25 ರಂದು ಅಕೋಲಾ ರೈಲ್ವೆ ನಿಲ್ದಾಣದಲ್ಲಿ ಬಂಧಿಸಲಾಗಿತ್ತು. ಕೊಲೆ ಪ್ರಕರಣ ಮತ್ತು ಆತನ ಹಿಂದಿನ ಕ್ರಿಮಿನಲ್ ಚಟುವಟಿಕೆಗಳ ತನಿಖೆಯ ಸಮಯದಲ್ಲಿ ಪೊಲೀಸರಿಗೆ ಸಾಮೂಹಿಕ ಅತ್ಯಾಚಾರದ ಬಗ್ಗೆ ತಿಳಿಯಿತು ಎಂದು ನಾಗ್ಪುರ ಗ್ರಾಮಾಂತರ ಪೊಲೀಸರು ಹೇಳಿದರು.

'11 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರದ ಆರೋಪದ ಮೇಲೆ ಉಮ್ರೆಡ್ ಪಟ್ಟಣದಲ್ಲಿ ಒಂಬತ್ತು ಜನರನ್ನು ಬಂಧಿಸಲಾಗಿದೆ. ಕೊಲೆ ಪ್ರಕರಣದ ತನಿಖೆಯ ವೇಳೆ ಈ ಮಾಹಿತಿ ಬಹಿರಂಗವಾಗಿದೆ ಎಂದು ನಾಗ್ಪುರ ಗ್ರಾಮಾಂತರ ಪೊಲೀಸ್ ಠಾಣೆಯ ಎಸ್‌ಡಿಪಿಒ ಪೂಜಾ ಗಾಯಕ್ವಾಡ್ ಅವರನ್ನು ಉಲ್ಲೇಖಿಸಿ ಎಎನ್‌ಐ ವರದಿ ಮಾಡಿದೆ.
ಜೂನ್ 19 ರಂದು, ಅಪ್ರಾಪ್ತೆ ಮನೆಯ ಬಳಿ ವಾಸಿಸುವ ಕಾರ್ಗೋವಂಕರ್ ಬಾಲಕಿಯ ತಂದೆ ತಾಯಿ ಕೂಲಿ ಕೆಲಸಕ್ಕೆ ಹೋದ ಬಳಿಕ ಬಾಲಕಿಯನ್ನು ತನ್ನ ಮನೆಗೆ ಕರೆದುಕೊಂಡು ಹೋಗಿದ್ದಾನೆ. ಅಲ್ಲಿ ತನ್ನ ಸ್ನೇಹಿತ ಗಜಾನನ ಮುರ್ಸ್ಕರ್ (40) ಎಂಬಾತನ ಜೊತೆ ಸೇರಿ ಅಪ್ರಾಪ್ತೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಯಾರಿಗೂ ಹೇಳದಂತೆ ಬೆದರಿಕೆ ಹಾಕಿದ್ದಾರೆ. ಘಟನೆಯ ಬಗ್ಗೆ ತಮಗೆ ತಿಳಿದಿಲ್ಲ ಎಂದು ಬಾಲಕಿಯ ಪೋಷಕರು ಹೇಳಿದ್ದಾರೆ.
ನಂತರ ಉಳಿದ ಆರೋಪಿಗಳು ಆಕೆಯ ಮೇಲೆ ಅತ್ಯಾಚಾರ ಮಾಡಲು ಶುರು ಮಾಡಿಕೊಂಡಿದ್ದಾರೆ. ಇದು ಒಂದು ತಿಂಗಳು ಮುಂದುವರೆದಿದೆ. ಆಕೆಗೆ ಸ್ಪಲ್ಪ ಹಣ ಕೊಟ್ಟು ಬೆದರಿಕೆ ಹಾಕಿ ಸುಮ್ಮನಾಗಿಸಿದ್ದಾರೆ. ಬಾಲಕಿಯನ್ನು ನಾಗ್ಪುರದ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಪರೀಕ್ಷೆ ಮಾಡಿಸಲಾಗಿದ್ದು, ಆಕೆಯ ಮೇಲೆ ಪದೇ ಪದೇ ಸಾಮೂಹಿಕ ಅತ್ಯಾಚಾರ ನಡೆದಿರುವುದನ್ನು ವರದಿ ದೃಢಪಡಿಸಿದೆ ಎಂದು ಪೊಲೀಸರು ತಿಳಿಸಿದರು.

ಉಳಿದ ಆರೋಪಿಗಳನ್ನು ಪ್ರೇಮದಾಸ್ ಗತಿಬಂಧೆ (38), ರಾಕೇಶ್ ಮಹಾಕಲ್ಕರ್ (24), ಗೋವಿಂದ ನಾಟೆ (22), ಸೌರಭ್ ಅಲಿಯಾಸ್ ಕರಣ್ ರಿಥೆ (22), ನಿತೇಶ್ ಫುಕಾಟ್ (30), ಪ್ರದುಮ್ನ ಕರುತ್ಕರ್ (22) ಮತ್ತು ನಿಖಿಲ್ ಅಲಿಯಾಸ್ ಪಿಂಕು ನರುಲೆ (24) ಎಂದು ಗುರುತಿಸಲಾಗಿದೆ.
ಎಲ್ಲಾ ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 376 (ಡಿ) (ಗ್ಯಾಂಗ್‌ರೇಪ್), 376 (2) (ಎನ್) (ಪದೇ ಪದೇ ಅತ್ಯಾಚಾರ), 506 (ಕ್ರಿಮಿನಲ್ ಬೆದರಿಕೆ) ಜೊತೆಗೆ ಮಕ್ಕಳ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications