ಒಂದೇ ದಿನ ಕೊರೊನಾವೈರಸ್ ಮಹಾಸ್ಫೋಟಕ್ಕೆ ತತ್ತರಿಸಿದ ಮಹಾರಾಷ್ಟ್ರ

ಮುಂಬೈ, ಜುಲೈ.30: ಕೊರೊನಾವೈರಸ್ ಸೋಂಕಿನ ಅಟ್ಟಹಾಸಕ್ಕೆ ಮಹಾರಾಷ್ಟ್ರ ನಲುಗಿ ಹೋಗಿದೆ. ಕಳೆದ 24 ಗಂಟೆಗಳಲ್ಲೇ ಪತ್ತೆಯಾದ ಒಟ್ಟು ಸೋಂಕಿತರ ಸಂಖ್ಯೆಯು ಹೊಸ ದಾಖಲೆಯನ್ನು ಬರೆದಿದ್ದು, ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆಯು 4 ಲಕ್ಷದ ಗಡಿಯನ್ನೂ ಮೀರಿ ಹೋಗಿದೆ.

ಗುರುವಾರ ಮಹಾರಾಷ್ಟ್ರದಲ್ಲಿ ಒಂದೇ ದಿನ ಬರೋಬ್ಬರಿ 11147 ಮಂದಿಗೆ ಕೊರೊನಾವೈರಸ್ ಸೋಂಕು ತಗಲಿರುವುದು ವೈದ್ಯಕೀಯ ತಪಾಸಣೆ ಸಂದರ್ಭದಲ್ಲಿ ದೃಢಪಟ್ಟಿದೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆಯು 411798ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಗಳಲ್ಲಿ 266 ಮಂದಿ ಕೊರೊನಾವೈರಸ್ ಸೋಂಕಿನಿಂದ ಪ್ರಾಣ ಬಿಟ್ಟಿದ್ದಾರೆ. ರಾಜ್ಯದಲ್ಲಿ ಮಹಾಮಾರಿಯಿಂದಾಗಿ 14,729 ಮಂದಿ ಉಸಿರು ಚೆಲ್ಲಿದ್ದಾರೆ ಎನ್ನುವುದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್ ನಿಂದ ತಿಳಿದು ಬಂದಿದೆ.

11147 New Coronavirus Cases Reported in Maharastra Today, State Tally Rise to 411798

ಒಂದೇ ದಿನ 8860 ಸೋಂಕಿತರು ಗುಣಮುಖ:

ಮಹಾರಾಷ್ಟ್ರದಲ್ಲಿ 11147 ಮಂದಿಗೆ ಕೊರೊನಾವೈರಸ್ ಸೋಂಕು ಪತ್ತೆಯಾಗಿದ್ದು ಆಘಾತವನ್ನು ಉಂಟು ಮಾಡುತ್ತಿದೆ. ಇದರ ನಡುವೆ ಒಂದೇ ದಿನ 8860 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರಿಂದಾಗಿ ರಾಜ್ಯದಲ್ಲಿ ಗುಣಮುಖರಾದ ಪ್ರಕರಣಗಳ ಸಂಖ್ಯೆ 248615ಕ್ಕೆ ಏರಿಕೆಯಾಗಿದ್ದು, ಉಳಿದಂತೆ 148150 ಸಕ್ರಿಯ ಪ್ರಕರಣಗಳಿವೆ. ರಾಜ್ಯದಲ್ಲಿ ಇದುವರೆಗೂ 20,70,128 ಜನರ ರಕ್ತ ಮತ್ತು ಗಂಟಲು ಮಾದರಿಯನ್ನು ತಪಾಸಣೆಗೆ ಒಳಪಡಿಸಲಾಗಿದೆ. 9,04,141 ಜನರನ್ನು ಹೋಮ್ ಕ್ವಾರೆಂಟೈನ್ ನಲ್ಲಿ ಇರಿಸಲಾಗಿದ್ದು, 40,546 ಜನರನ್ನು ಸಾಂಸ್ಥಿಕ ಕ್ವಾರೆಂಟೈನ್ ನಲ್ಲಟ್ಟು ಚಿಕಿತ್ಸೆ ನೀಡಲಾಗುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+