ಮಹಾರಾಷ್ಟ್ರ: 24 ಗಂಟೆಗಳಲ್ಲೇ 11514 ಮಂದಿಗೆ ಕೊರೊನಾವೈರಸ್ ಸೋಂಕು
ಮುಂಬೈ, ಆಗಸ್ಟ್.06: ಕೊರೊನಾವೈರಸ್ ಸೋಂಕಿತರ ಸಂಖ್ಯೆಯು ಮಹಾರಾಷ್ಟ್ರದಲ್ಲಿ ದಿನ ಬಿಟ್ಟು ದಿನ ಏರಿಕೆಯಾಗುತ್ತಿದೆ. ರಾಜ್ಯದಲ್ಲಿ ಹಿಂದೆಂದೂ ಕಂಡಿರದ ರೀತಿ ದಾಖಲೆ ಮಟ್ಟದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ.
ಕಳೆದ 24 ಗಂಟೆಗಳಲ್ಲೇ 11514 ಮಂದಿಗೆ ಕೊರೊನಾವೈರಸ್ ಸೋಂಕು ಅಂಟಿಕೊಂಡಿರುವುದು ವೈದ್ಯಕೀಯ ತಪಾಸಣೆ ವೇಳೆ ದೃಢಪಟ್ಟಿದೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆಯು ಈಗಾಗಲೇ 479779ಕ್ಕೆ ಏರಿಕೆಯಾಗಿದೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಕುರಿತು ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ. ಮಹಾರಾಷ್ಟ್ರದಲ್ಲಿ ಪತ್ತೆಯಾಗಿರುವ 479779 ಸೋಂಕಿತ ಪ್ರಕರಣಗಳ ಪೈಕಿ 3,16,375 ಸೋಂಕಿತರು ಗುಣಮುಖರಾಗಿದ್ದಾರೆ.

ಮಹಾರಾಷ್ಟ್ರದಲ್ಲಿ ಕೊವಿಡ್-19 ಮರಣ ಮೃದಂಗ:
ಕಳೆದ 24 ಗಂಟೆಗಳಲ್ಲೇ ರಾಜ್ಯದಲ್ಲಿ 316 ಮಂದಿ ಮಹಾಮಾರಿ ಸುಳಿಗೆ ಸಿಕ್ಕು ಉಸಿರು ಚೆಲ್ಲಿದ್ದಾರೆ. ಮಹಾರಾಷ್ಟ್ರದಲ್ಲಿ ಇದುವರೆಗೂ 16792 ಸೋಂಕಿತರು ಚಿಕಿತ್ಸೆ ಫಲಕಾರಿಯಾಗದೇ ಪ್ರಾಣ ಬಿಟ್ಟಿದ್ದಾರೆ. ಉಳಿದಂತೆ 1,46,305 ಸಕ್ರಿಯ ಪ್ರಕರಣಗಳಿವೆ.
ಮುಂಬೈನ ಧಾರವಿಯಲ್ಲಿ 8 ಹೊಸ ಕೊರೊನಾವೈರಸ್ ಸೋಂಕಿತ ಪ್ರಕರಣಗಳು ಪತ್ತೆಯಾಗಿದ್ದು, ಈ ಪ್ರದೇಶದಲ್ಲಿ ಸಕ್ರಿಯ ಪ್ರಕರಣಗಳ ಪ್ರಮಾಣ ಇದೀಗ ಶೇ.82 ರಷ್ಟಿದ್ದರೆ, 2,257 ಜನರನ್ನು ಡಿಸ್ಚಾರ್ಜ್ ಮಾಡಲಾಗಿದೆ. ಧಾರವಿಯಲ್ಲಿ ಒಟ್ಟು ಪಾಸಿಟಿವ್ ಪ್ರಕರಣಗಳ ಸಂಖ್ಯೆ 2,597ಕ್ಕೆ ಏರಿಕೆಯಾಗಿದೆ.












Click it and Unblock the Notifications