Breaking: ಮಹಾರಾಷ್ಟ್ರದ ಕೋವಿಡ್ ಆಸ್ಪತ್ರೆಯಲ್ಲಿ ಅಗ್ನಿ ಅವಘಡ: 13 ಮಂದಿ ಸಾವು
ಮುಂಬೈ, ಏಪ್ರಿಲ್ 23: ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯಲ್ಲಿ ವಸಾಯಿಯಲ್ಲಿರುವ ಕೋವಿಡ್ ಆಸ್ಪತ್ರೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, 13 ಮಂದಿ ರೋಗಿಗಳು ಸಜೀವದಹನವಾಗಿದ್ದಾರೆ.
ಈಗಾಗಲೇ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ, ರೋಗಿಗಳನ್ನು ಸಮೀಪದ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಎನ್‌ಐಎ ಟ್ವೀಟ್ ಮಾಡಿದೆ.

ಬೆಂಕಿ ಅವಘಡದಲ್ಲಿ ಗಾಯಗೊಂಡಿರುವ ಮತ್ತು ಇತರ ಸುರಕ್ಷಿತ ರೋಗಿಗಳನ್ನು ಹತ್ತಿರದ ಆಸ್ಪತ್ರೆಗಳಿಗೆ ದಾಖಲಿಸುವ ಕೆಲಸ ಮುಂದುವರಿದಿದೆ.
ವಸಾಯಿ ನಗರ ಪಾಲಿಕೆಯಿಂದ ಅಗ್ನಿಶಾಮಕ ಸಿಬ್ಬಂದಿಯನ್ನು ಕರೆಸಿ ಒಂದು ಗಂಟೆಯಲ್ಲಿ ಬೆಂಕಿ ನಂದಿಸುವ ಕಾರ್ಯವನ್ನು ಮಾಡಲಾಯಿತು.
ಇಂದು ಬೆಳಗಿನ ಜಾವ 3 ಗಂಟೆ ಸುಮಾರಿಗೆ ಆಸ್ಪತ್ರೆಯ ಐಸಿಯು ವಿಭಾಗದಲ್ಲಿ ಈ ದುರಂತ ಸಂಭವಿಸಿದೆ.
ಕೋವಿಡ್ ಆಸ್ಪತ್ರೆಯ ತೀವ್ರ ನಿಗಾ ಘಟಕದ ಎಸಿ ಘಟಕದಲ್ಲಿ ಸ್ಫೋಟ ಸಂಭವಿಸಿದ ನಂತರ ಬೆಂಕಿ ಕಾಣಿಸಿಕೊಂಡಿದೆ ಎಂದು ಜಿಲ್ಲಾ ವಿಪತ್ತು ನಿಯಂತ್ರಣ ಕೋಶದ ಮುಖ್ಯಸ್ಥ ವಿವೇಕಾನಂದ್ ಕದಮ್ ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ. ಆಸ್ಪತ್ರೆಯಲ್ಲಿ ಒಟ್ಟು 16 ಮಂದಿ ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದರು












Click it and Unblock the Notifications