16620 ಕೇಸ್: ಮಹಾರಾಷ್ಟ್ರದಲ್ಲಿ ಕೊರೊನಾವೈರಸ್ "ಮಹಾ" ಭೀತಿ!
ಮುಂಬೈ, ಮಾರ್ಚ್ 14: ಮಹಾರಾಷ್ಟ್ರದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ದೇಶದ ಒಟ್ಟು ಹೊಸ ಪ್ರಕರಣಗಳ ಪೈಕಿ ಶೇ.80ಕ್ಕಿಂತ ಹೆಚ್ಚು ಪ್ರಕರಣಗಳು ಈ ರಾಜ್ಯದಲ್ಲಿಯೇ ವರದಿಯಾಗುತ್ತಿವೆ.
ಕಳೆದ 24 ಗಂಟೆಗಳಲ್ಲಿ 16,620 ಜನರಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ರಾಜ್ಯದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 23,14,413ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಕೊರೊನಾ ಅಂಟೀತು ಎಚ್ಚರ: ಮಹಾರಾಷ್ಟ್ರದಿಂದ ಎದುರಾಗುತ್ತಾ ಗಂಡಾಂತರ!?
ಒಂದು ದಿನದಲ್ಲಿ 8,861 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದು, ರಾಜ್ಯದಲ್ಲಿ ಈವರೆಗೂ 21,34,072 ಗುಣಮುಖ ಪ್ರಕರಣಗಳು ವರದಿಯಾಗಿವೆ. ಕಳೆದ 24 ಗಂಟೆಗಳಲ್ಲಿ ಮಹಾಮಾರಿಗೆ 50 ಜನರು ಪ್ರಾಣ ಬಿಟ್ಟಿದ್ದು, ಸಾವಿನ ಸಂಖ್ಯೆ 52,861ಕ್ಕೆ ಏರಿಕೆಯಾಗಿದೆ. ಇದರ ಹೊರತಾಗಿ ಮಹಾರಾಷ್ಟ್ರದಲ್ಲಿ 1,26,231 ಕೊರೊನಾವೈರಸ್ ಸಕ್ರಿಯ ಪ್ರಕರಣಗಳಿವೆ.

ಮಹಾರಾಷ್ಟ್ರದ ಲಾತೂರಿನಲ್ಲಿ ಲಾಕ್ ಡೌನ್:
ಮಹಾರಾಶ್ಟ್ರದಲ್ಲಿ ಕೊರೊನಾವೈರಸ್ ಸೋಂಕಿನ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಹಲವು ನಗರಗಳಲ್ಲಿ ಲಾಕ್ ಡೌನ್ ಘೋಷಿಸಲಾಗಿದೆ. ಅದೇ ರೀತಿ ಲಾತೂರಿನಲ್ಲಿ ವಾರಾಂತ್ಯದ ದಿನಗಳಲ್ಲಿ ಲಾಕ್ ಡೌನ್ ಜಾರಿಗೊಳಿಸಲಾಗಿದೆ. ರಾತ್ರಿ 8 ಗಂಟೆಯಿಂದ ಬೆಳಗ್ಗೆ 5 ಗಂಟೆವರೆಗೂ ನಿಷೇಧಾಜ್ಞೆ ಘೋಷಿಸಿದ್ದು, ಮಾರ್ಚ್ ತಿಂಗಳಾಂತ್ಯದವರೆಗೂ ಈ ನಿಯಮ ಜಾರಿಯಲ್ಲಿ ಇರಲಿದೆ.
ಇನ್ನೊಂದೆಡೆ ನಾಗ್ಪುರ್ ಜಿಲ್ಲೆಯಲ್ಲಿ ಕಳೆದ ಒಂದು ತಿಂಗಳಿನಿಂದ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಕ್ರಮೇಣ ಏರಿಕೆಯಾಗುತ್ತಿದೆ. ಈ ಹಿನ್ನೆಲೆ ಮಾರ್ಚ್.15 ರಿಂದ 21ರವರೆಗೂ ಲಾಕ್ ಡೌನ್ ಜಾರಿಗೊಳಿಸುವುದಾಗಿ ಜಿಲ್ಲೆಯ ರಕ್ಷಣಾ ಸಚಿವ ನಿತಿನ್ ರಾವತ್ ಘೋಷಿಸಿದ್ದಾರೆ.












Click it and Unblock the Notifications