Breaking: ಮುಂಬೈನ 20 ಅಂತಸ್ತಿನ ಕಟ್ಟಡದಲ್ಲಿ ಅಗ್ನಿ ಅವಘಡ: ಇಬ್ಬರು ಸಾವು

ಮುಂಬೈ, ಜನವರಿ 22: ಮುಂಬೈನ 20 ಅಂತಸ್ತಿನ ಕಟ್ಟಡದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಇಬ್ಬರು ಮೃತಪಟ್ಟು, 15 ಮಂದಿ ಗಾಯಗೊಂಡಿದ್ದಾರೆ.

ಕಟ್ಟಡದ 3ನೇ ಹಂತದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಸ್ಥಳಕ್ಕೆ 13 ಅಗ್ನಿಶಾಮಕ ವಾಹನಗಳು ಧಾವಿಸಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಂಕಿ ಹೇಗೆ ಕಾಣಿಸಿಕೊಂಡಿದೆ ಎಂಬ ಕುರಿತಾದ ಮಾಹಿತಿ ಇನ್ನೂ ಲಭ್ಯವಾಗಿಲ್ಲ. ಈ ಕುರಿತು ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

2 Dead, 15 Injured In Major Mumbai Building Fire

ಮುಂಬೈನ ಭಾಟಿಯಾ ಆಸ್ಪತ್ರೆ ಬಳಿ ಇರುವ 20 ಅಂತಸ್ತಿನ ಕಮಲಾ ಅಪಾರ್ಟ್‌ಮೆಂಟ್‌ನಲ್ಲಿ ಭಾರಿ ಪ್ರಮಾಣದ ಬೆಂಕಿ ಕಾಣಿಸಿಕೊಂಡಿದೆ. ದುರಂತದಲ್ಲಿ ಇಬ್ಬರು ಸಾವನ್ನಪ್ಪಿದ್ದು, 15 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಬೆಂಕಿಯನ್ನು ನಿಯಂತ್ರಿಸಲು 13 ಅಗ್ನಿಶಾಮಕ ವಾಹನಗಳು ಮತ್ತು ಏಳು ಜಂಬೋ ಟ್ಯಾಂಕರ್‌ಗಳನ್ನು ನಿಯೋಜಿಸಲಾಗಿದೆ ಎಂದು ಇಲಾಖೆ ತಿಳಿಸಿದೆ. ಗಾಯಾಳುಗಳನ್ನು ಸಮೀಪದ ಭಾಟಿಯಾ ಮತ್ತು ನಾಯರ್ ಆಸ್ಪತ್ರೆಗಳಿಗೆ ರವಾನಿಸಲಾಗಿದೆ. ಪ್ರಸ್ತುತ ಘಟನಾ ಸ್ಥಳದಲ್ಲಿ 5 ಆಂಬುಲೆನ್ಸ್​​ ಸೇವೆ ಒದಗಿಸಲಾಗಿದೆ ಎಂದು ಎಎನ್​ಐ ತಿಳಿಸಿದೆ.

ನಗರದ ಟಾರ್ಡಿಯೊದಲ್ಲಿನ ನಾನಾ ಚೌಕ್‌ನಲ್ಲಿರುವ ಕಮಲಾ ಬಿಲ್ಡಿಂಗ್‌ನಲ್ಲಿ ಶನಿವಾರ ಬೆಳಗ್ಗೆ ಅಗ್ನಿ ಅವಘಡ ಸಂಭವಿಸಿದೆ. 20 ಅಂತಸ್ತಿನ ದೊಡ್ಡ ಕಟ್ಟಡದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡ ಪರಿಣಾಮ, ಆತಂಕದ ವಾತಾವರಣ ಸೃಷ್ಟಿಯಾಗಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಹಾಗೂ ಇತರ ಸಿಬ್ಬಂದಿಗಳು ಆಗಮಿಸಿ ಪರಿಹಾರ ಕಾರ್ಯಾಚರಣೆಯಲ್ಲಿ ನಿರತರಾಗಿದ್ದಾರೆ. ಘಟನೆಯಲ್ಲಿ ಪ್ರಸ್ತುತ ಲಭ್ಯವಾಗಿರುವ ಮಾಹಿತಿಯಂತೆ, ಇಬ್ಬರು ಮೃತಪಟ್ಟಿದ್ದಾರೆ.

Recommended Video

      ಇದಪ್ಪ ಕನ್ನಡಿಗನ ಅದೃಷ್ಟ ಅಂದ್ರೆ !! | Oneindia Kannada

      20 ಅಂತಸ್ತಿನ ಕಟ್ಟಡದ 18ನೇ ಮಹಡಿಯಲ್ಲಿ 3ನೇ ಹಂತದ ಬೆಂಕಿ ಅವಘಡ ಸಂಭವಿಸಿದೆ. ಅಗ್ನಿಶಾಮಕ ಇಲಾಖೆಯ ಪ್ರಕಾರ, 7.28 ಕ್ಕೆ ಘಟನೆ ವರದಿಯಾಗಿದೆ ಮತ್ತು 8.10 ಕ್ಕೆ 'ಹಂತ 3' ಎಂದು ಘೋಷಿಸಲಾಯಿತು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+