ಮಹಾರಾಷ್ಟ್ರದ ರಾಸಾಯನಿಕ ಫ್ಯಾಕ್ಟರಿಯಲ್ಲಿ ಸ್ಫೋಟ: ಇಬ್ಬರು ಸಾವು, ಮಂದಿಗೆ ಗಾಯ

ಮುಂಬೈ, ನವೆಂಬರ್ 05: ಮಹಾರಾಷ್ಟ್ರದಲ್ಲಿ ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಭಾರಿ ಸ್ಫೋಟ ಸಂಭವಿಸಿದ್ದು ಘಟನೆಯನ್ನು ಇಬ್ಬರು ಮೃತಪಟ್ಟಿದ್ದು ಆರು ಮಂದಿ ಗಾಯಗೊಂಡಿದ್ದಾರೆ.

ಮಹಾರಾಷ್ಟ್ರದ ರಾಯ್ ಗಾಡ್ ಜಿಲ್ಲೆಯಲ್ಲಿ ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಗುರುವಾರ ಈ ಘಟನೆ ಸಂಭವಿಸಿದೆ.

ಮೃತಪಟ್ಟವರಲ್ಲಿ ಒಬ್ಬ ಮಹಿಳೆ ಕೂಡ ಸೇರಿದ್ದಾರೆ. ಇತರ ಆರು ಮಂದಿಗೆ ಗಾಯವಾಗಿದೆ. ಘಟನೆ ನಡೆದ ತಕ್ಷಣವೇ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಂದಿಸುವ ಕಾರ್ಯದಲ್ಲಿ ಮತ್ತು ಕಾರ್ಮಿಕರನ್ನು ರಕ್ಷಿಸುವ ಕಾರ್ಯದಲ್ಲಿ ನಿರತರಾದರು ಎಂದು ಖೊಪೊಲಿ ಪೊಲೀಸ್ ಠಾಣೆಯ ಅಧಿಕಾರಿಗಳು ತಿಳಿಸಿದ್ದಾರೆ.

2 Killed, 6 Injured In Explosion At Chemical Factory In Maharashtra

ಇಂದು ಮಧ್ಯರಾತ್ರಿ 2.30ರ ಸುಮಾರಿಗೆ ಈ ಸ್ಫೋಟ ಸಂಭವಿಸಿದ್ದು ರಾಯ್ ಗಾಡ್ ಜಿಲ್ಲೆಯ ಖೊಪೊಲಿ ಪಟ್ಟಣದ ಸಜ್ಗೌನ್ ಕೈಗಾರಿಕಾ ಪ್ರದೇಶದಲ್ಲಿರುವ ರಾಸಾಯನಿಕ ಫ್ಯಾಕ್ಟರಿಯಲ್ಲಿ ಈ ಸ್ಪೋಟ ಸಂಭವಿಸಿದ್ದು ನಂತರ ಫ್ಯಾಕ್ಟರಿಯ ಆವರಣದಲ್ಲಿ ಬೆಂಕಿ ಕಾಣಿಸಿಕೊಂಡಿತು.

ಗಾಯಗೊಂಡವರನ್ನು ಕೂಡಲೇ ಖೊಪೊಲಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಬುಧವಾರವಷ್ಟೇ ರಾಸಾಯನಿಗಳಿದ್ದ ಉಗ್ರಾಣದಲ್ಲಿ ಉಂಟಾದ ಭಾರಿ ಸ್ಫೋಟದಲ್ಲಿ ಭಾಗವೊಂದು ಕುಸಿದ ಪರಿಣಾಮ ಉಂಟಾದ ಅಗ್ನಿ ಅವಘಡದಲ್ಲಿ ಒಂಬತ್ತು ಮಂದಿ ದಹನವಾಗಿದ್ದಾರೆ. ಕನಿಷ್ಠ ಮೂರು ಮಂದಿ ಬೆಂಕಿಯಿಂದ ಸುಟ್ಟ ಗಾಯಗಳಿಗೆ ಒಳಗಾಗಿದ್ದಾರೆ. ಗುಜರಾತ್‌ನ ಅಹಮದಾಬಾದ್‌ನ ಪಿಪ್ಲಜ್ ರಸ್ತೆಯಲ್ಲಿ ಈ ದುರ್ಘಟನೆ ನಡೆದಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+