ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಹಾರಾಷ್ಟ್ರದಲ್ಲಿ 2 ವಾರದವರೆಗೆ ಸಂಪೂರ್ಣ ಲಾಕ್‌ಡೌನ್ ವಿಸ್ತರಣೆ?

|
Google Oneindia Kannada News

ಮುಂಬೈ, ಮೇ 12: ಮಹಾರಾಷ್ಟ್ರದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಎರಡನೇ ಅಲೆಗೆ ಕಡಿವಾಣ ಹಾಕಬೇಕಿದೆ. ಕೊವಿಡ್-19 ನಿಯಂತ್ರಿಸುವ ಉದ್ದೇಶದಿಂದ ಮುಂದಿನ ಎರಡು ವಾರಗಳವರೆಗೆ ಸಂಪೂರ್ಣ ಲಾಕ್‌ಡೌನ್ ಅವಧಿಯನ್ನು ವಿಸ್ತರಿಸುವಂತೆ ಆಗ್ರಹ ಕೇಳಿ ಬಂದಿದೆ.

ಬುಧವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಸಂಪೂರ್ಣ ಲಾಕ್‌ಡೌನ್ ಅವಧಿ ವಿಸ್ತರಣೆ ಬಗ್ಗೆ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಆರೋಗ್ಯ ಸಚಿವ ರಾಜೇಶ್ ತೊಪೆ ತಿಳಿಸಿದ್ದಾರೆ. ರಾಜ್ಯದಲ್ಲಿ ಕೊರೊನಾವೈರಸ್ ಸ್ಥಿತಿಗತಿಗಳ ಬಗ್ಗೆ ಚರ್ಚಿಸಿ ಲಾಕ್‌ಡೌನ್ ವಿಸ್ತರಿಸಬೇಕೇ ಬೇಡವೇ ಎನ್ನುವುದರ ಬಗ್ಗೆ ತೀರ್ಮಾನಿಸಲಾಗುವುದು ಎಂದಿದ್ದಾರೆ.

ರಾಜ್ಯದಲ್ಲಿ ಹೊಸ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಇಳಿಕೆ: ಇದೇನಾ ಕಾರಣ?ರಾಜ್ಯದಲ್ಲಿ ಹೊಸ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಇಳಿಕೆ: ಇದೇನಾ ಕಾರಣ?

ರಾಜ್ಯದಲ್ಲಿ ಕೊರೊನಾವೈರಸ್ ಹರಡುವಿಕೆಯ ಸರಪಳಿಯನ್ನು ತುಂಡರಿಸುವುದಕ್ಕಾಗಿ ಈಗಾಗಲೇ ಸಂಪೂರ್ಣ ಲಾಕ್‌ಡೌನ್ ಘೋಷಿಸಲಾಗಿದೆ. ಮೇ 15ರ ಬೆಳಗ್ಗೆ 7 ಗಂಟೆವರೆಗೂ ಲಾಕ್‌ಡೌನ್ ನಿಯಮ ಜಾರಿಯಲ್ಲಿರಲಿದ್ದು, ಅದೇ ರೀತಿ ಮತ್ತೆರೆಡು ವಾರ ಸಂಪೂರ್ಣ ಲಾಕ್‌ಡೌನ್ ಜಾರಿಗೊಳಿಸುವಂತೆ ಆಗ್ರಹಿಸಲಾಗುತ್ತಿದೆ.

2 Week Complete Lockdown Extende in Maharashtra; Today Cabinet Meet Decide On This

ಮಹಾರಾಷ್ಟ್ರದಲ್ಲಿ ಕೊರೊನಾ ಕಡಿವಾಣಕ್ಕೆ 3 ಮಂತ್ರ:

ಕೊರೊನಾವೈರಸ್ ಸೋಂಕಿನ ಹರಡುವಿಕೆಯನ್ನು ತಡೆಯಲು ಹಾಗೂ ಸಾವಿನ ಪ್ರಮಾಣವನ್ನು ತಗ್ಗಿಸುವ ನಿಟ್ಟಿನಲ್ಲಿ ಮೂರು ಕಾರ್ಯತಂತ್ರಗಳನ್ನು ರೂಪಿಸಲಾಗಿದೆ. ಸರ್ಕಾರ ಹುಡುಕುವುದು(Tracking), ಪತ್ತೆ ಮಾಡುವುದು(Tracing ) ಹಾಗೂ ಚಿಕಿತ್ಸೆ ನೀಡುವುದು(Treating) ಎಂಬ ನಿಯಮವನ್ನು ಪಾಲಿಸಲಾಗುತ್ತಿದೆ.

ಮಹಾರಾಷ್ಟ್ರದಲ್ಲಿ ಒಂದೇ ದಿನ 40,956 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಒಂದೇ ದಿನ 793 ಮಂದಿ ಪ್ರಾಣ ಬಿಟ್ಟಿದ್ದು, 71,966 ಸೋಂಕಿತರು ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ ಒಟ್ಟು 51,79,929 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ವರದಿಯಾಗಿವೆ. ಈವರೆಗೂ 45,41,391 ಸೋಂಕಿತರು ಗುಣಮುಖರಾಗಿದ್ದು, ಮಹಾಮಾರಿಗೆ 77,191 ಜನರು ಪ್ರಾಣ ಬಿಟ್ಟಿದ್ದಾರೆ. ಉಳಿದಂತೆ 5,58,996 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

English summary
2 Week Complete Lockdown Extende in Maharashtra; Today Cabinet Meet Decide On This.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X