ಗುದ್ದೋಡು ಪ್ರಕರಣ: ಸಾಕ್ಷಿಗಳ ಕೊರತೆ, ಸಲ್ಮಾನ್ ದೋಷಿಯಲ್ಲ: ಕೋರ್ಟ್
ಮುಂಬೈ, ಡಿ. 10: ಹಿಂದಿ ಚಿತ್ರರಂಗದ ವಿವಾದಿತ ನಟ ಸಲ್ಮಾನ್ ಖಾನ್ ಅವರ ವಿರುದ್ಧ ಪ್ರಾಸಿಕ್ಯೂಷನ್ ಸರಿಯಾದ ಸಾಕ್ಷಿ ಒದಗಿಸಲು ವಿಫಲವಾಗಿದ್ದು, ಈ ಪ್ರಕರಣದಲ್ಲಿ ಸಲ್ಮಾನ್ ಖಾನ್ ಅವರು ದೋಷಿ ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಬಾಂಬೆ ಹೈಕೋರ್ಟ್ ಅಭಿಪ್ರಾಯಪಟ್ಟಿದೆ.
ಘಟನೆ ನಡೆದ ದಿನ ಸಲ್ಮಾನ್ ಖಾನ್ ಅವರು ಕುಡಿದು ವಾಹನ ಚಲಾಯಿಸಿದ್ದಕ್ಕೆ ಸಾಕ್ಷಿಗಳಿಲ್ಲ. ಪ್ರಕರಣ ದಾಖಲಿಸಿಕೊಳ್ಳುವಾಗ, ಎಫ್ ಐಅರ್ ಹಾಕುವಾಗ ಹಾಗೂ ತನಿಖೆಯನ್ನು ಸೂಕ್ತವಾಗಿ ನಡೆಸುವಲ್ಲಿ ಮುಂಬೈ ಪೊಲೀಸರು ವಿಫಲರಾಗಿದ್ದಾರೆ. ಯಾವುದೇ ಸೆಕ್ಷನ್ ಅಡಿಯಲ್ಲಿ ಸಲ್ಮಾನ್ ಅವರನ್ನು ಅಪರಾಧಿ ಎಂದು ಪರಿಗಣಿಸಲಾಗುವುದು ಈ ಪ್ರಕರಣದಲ್ಲಿ ನಿರ್ದೋಷಿ ಎಂದು ಖುಲಾಸೆಗೊಳಿಸಲಾಗಿದೆ ಎಂದು ನ್ಯಾ. ಎಆರ್ ಜೋಶಿ ತಮ್ಮ ತೀರ್ಪು ನೀಡಿದ್ದಾರೆ.
2002ರ ಹಿಟ್ ಅಂಡ್ ರನ್ ಕೇಸಿನಲ್ಲಿ ಪ್ರಮುಖ ಸಾಕ್ಷಿಯಾಗಿದ್ದ ರವೀಂದ್ರ ಪಾಟೀಲ್ ಅವರ ಹೇಳಿಕೆ ಬಗ್ಗೆ ಸಂಪೂರ್ಣವಾಗಿ ನಂಬಲರ್ಹವಲ್ಲ ಎಂದು ಬಾಂಬೆ ಕೋರ್ಟ್ ಬುಧವಾರ ತನ್ನ ಆದೇಶದಲ್ಲಿ ಉಲ್ಲೇಖಿಸಿದ್ದನ್ನು ಇಲ್ಲಿ ಸ್ಮರಿಸಬಹುದು.[ಗುದ್ದೋಡು ಪ್ರಕರಣ: ಸಲ್ಮಾನ್ ಖಾನ್ ಗೆ ಸಕತ್ ರಿಲೀಫ್]
ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಮಾಜಿ ಬಾಡಿಗಾರ್ಡ್ ಆಗಿದ್ದ ರವೀಂದ್ರ ಪಾಟೀಲ್ ಅವರ ಸಾಕ್ಷಿಯಿಂದ ಸಲ್ಮಾನ್ ಅವರ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿತ್ತು. ಅದರೆ, ಪಾಟೀಲ್ ಹೇಳಿಕೆ ಬಗ್ಗೆ ಜಸ್ಟೀಸ್ ಎಆರ್ ಜೋಶಿ ಅವರು ಹೆಚ್ಚಿನ ಮಹತ್ವ ನೀಡಿಲ್ಲ. ಮಂಗಳವಾರದಿಂದ ಆರಂಭವಾದ ಆದೇಶದ ಉಕ್ತಲೇಖನ ಗುರುವಾರ ತನಕ ಮುಂದುವರೆದಿದ್ದು ಮಧ್ಯಾಹ್ನ ಅಂತಿಮ ತೀರ್ಪು ಹೊರಬಂದಿದೆ.

* ಆರೋಪಿ ಸಲ್ಮಾನ್ ಖಾನ್ ಹಾಗೂ ಅವರ ತಂಗಿ ಆಳ್ವೀರಾ, ಗೆಳತಿ ಲುಲಿಯಾ ಸೇರಿದಂತೆ ಅನೇಕ ಮಂದಿ ಬಾಂಬೆ ಹೈಕೋರ್ಟ್ ಗೆ ಆಗಮಿಸಿದ್ದಾರೆ.
* ಮೇ 6, 2015ರಂದು ಮುಂಬೈ ಸೆಷನ್ಸ್ ಕೋರ್ಟ್ ನಿಂದ ಸಲ್ಮಾನ್ ಖಾನ್ ಗೆ ಐದು ವರ್ಷ ಶಿಕ್ಷೆ ಪ್ರಕಟವಾಗಿದೆ. ಇದನ್ನು ಪ್ರಶ್ನಿಸಿ ಸಲ್ಮಾನ್ ಖಾನ್ ಅವರು ಮೇಲ್ಮನವಿ ಸಲ್ಲಿಸಿದ್ದು, ಇದರ ಅಂತಿಮ ತೀರ್ಪು ಹೊರ ಬೀಳಬೇಕಿದೆ.
* ಸೆಪ್ಟೆಂಬರ್ 28, 2002ರಂದು ಘಟನೆ ನಡೆದ ಕೆಲ ಹೊತ್ತಿನಲ್ಲೇ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಎಫ್ ಐಆರ್ ಹಾಕಿದ್ದಾರೆ. ಆದರೆ, ಎಫ್ ಐಆರ್ ನಲ್ಲಿ ಎಲ್ಲೂ ಕೂಡಾ ಸಲ್ಮಾನ್ ಅವರೇ ಕಾರು ಚಲಾಯಿಸುತ್ತಿದ್ದರು ಎಂದು ಉಲ್ಲೇಖಿಸಿಲ್ಲ.
Hit and run case: Order of the sessions court set aside, Bombay HC acquits Salman Khan
— ANI (@ANI_news) December 10, 2015 * ಅಕ್ಟೋಬರ್ 01, 2002ರಂದು ಸಲ್ಲಿಸಲಾಗಿರುವ ರಕ್ತಪರೀಕ್ಷೆ ವರದಿ ಪ್ರಕಾರ ಸಲ್ಮಾನ್ ಅವರ ರಕ್ತದಲ್ಲಿ ಆಲ್ಕೋಹಾಲ್ ಅಂಶ ಅಗತ್ಯಕ್ಕಿಂತ ಹೆಚ್ಚಿರುವುದು ಪತ್ತೆಯಾಗಿತ್ತು.
* 2002ರ ಈ ರಸ್ತೆ ಅಪಘಾತಕ್ಕೆ ಸಂಬಂಧಿಸಿದ ಫೈಲ್ಸ್ ಎಲ್ಲಾ ಮುಂಬೈನಲ್ಲಿ 2012ರಲ್ಲಿ ನಡೆದ ಅಗ್ನಿ ದುರಂತದಲ್ಲಿ ನಾಶವಾಗಿದೆ ಎಂಬ ಸುದ್ದಿ ಬಂದಿತ್ತು.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications