ಮಹಾರಾಷ್ಟ್ರ: 23,179 ಮಂದಿಗೆ ಕೊರೊನಾ ಸೋಂಕು, 84 ಸಾವು

ಮುಂಬೈ, ಮಾರ್ಚ್ 17: ಮಹಾರಾಷ್ಟ್ರದಲ್ಲಿ ಬರೋಬ್ಬರಿ 23,179 ಮಂದಿಗೆ ಕೊರೊನಾ ಸೋಂಕು ತಗುಲಿದೆ. ಮುಂಬೈನಲ್ಲಿ 2377 ಮಂದಿಗೆ ಸೋಂಕು ತಗುಲಿದೆ. ಮಹಾರಾಷ್ಟ್ರದಲ್ಲಿ ಕಳೆದ 24 ಗಂಟೆಗಳಲ್ಲಿ 84 ಮಂದಿ ಸಾವನ್ನಪ್ಪಿದ್ದಾರೆ.

ದೇಶದಲ್ಲಿ 1.14 ಕೋಟಿ ಮಂದಿಗೆ ಸೋಂಕು ತಗುಲಿದೆ. ಇದೀಗ ದೇಶದಲ್ಲೂ ಕೂಡ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೆ ಹೆಚ್ಚಾಗುತ್ತಿದೆ. ಕರ್ನಾಟಕ, ಕೇರಳ, ಪಂಜಾಬ್, ದೆಹಲಿ ಸೇರಿದಂತೆ ಹಲವು ರಾಜ್ಯಗಳಲ್ಲಿ ಮತ್ತೆ ಸೋಂಕಿನಲ್ಲಿ ಏರಿಕೆಯಾಗುತ್ತಿದೆ.

ಫೆಬ್ರವರಿ ಆರಂಭದಲ್ಲಿ 9 ಸಾವಿರಕ್ಕೂ ಕಡಿಮೆ ಪ್ರಕರಣಗಳು ಪತ್ತೆಯಾಗುತ್ತಿತ್ತು. ಇದೀಗ ಬುಧವಾರ 28 ಸಾವಿರಕ್ಕೆ ತಲುಪಿದೆ. ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 28,903 ಹೊಸ ಕೇಸ್ ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 1,14,38,734ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

23,179 New Coronavirus Cases, 84 Deaths In Maharashtra In 24 Hours

ಇನ್ನು ಒಂದೇ ದಿನ ವೈರಸ್ 188 ಮಂದಿಯನ್ನು ಬಲಿಪಡೆದುಕೊಂಡಿದ್ದು, ಸಾವಿನ ಸಂಖ್ಯೆ 1,59,044ಕ್ಕೆ ಏರಿಕೆಯಾಗಿದೆ.

ಈ ನಡುವೆ ಒಟ್ಟಾರೆ 1,14,38,734 ಮಂದಿ ಸೋಂಕಿತರ ಪೈಕಿ ನಿನ್ನೆ ಒಂದೇ ದಿನ 17,741 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದು, ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 1,10,45,284ಕ್ಕೆ ಏರಿಕೆಯಾಗಿದೆ. ಪ್ರಸ್ತುತ ದೇಶದಲ್ಲಿ 2,34,406 ಸಕ್ರಿಯ ಪ್ರಕರಣಗಳು ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆಂದು ತಿಳಿದುಬಂದಿದೆ.

ದೇಶದಲ್ಲಿ ಕೊರೊನಾ ಹೆಚ್ಚಾಗುತ್ತಿರುವುದರಿಂದ ವಿಡಿಯೋ ಕಾನ್ಫೆರನ್ಸ್ ಮೂಲಕ ಸಿಎಂಗಳ ಜೊತೆ ಮಾತನಾಡಿದ ಪ್ರಧಾನಿ ಮೋದಿ ಅವರು, ಮಾಸ್ಕ್ ಕಡ್ಡಾಯ ಮಾಡಬೇಕು. ಅಂತರ ಕಾಯ್ದುಕೊಳ್ಳುವ ವ್ಯವಸ್ಥೆ ಮಾಡಬೇಕು. ಅಲ್ಲದೆ ಕ್ಲಿನಿಕಲ್ ಸೌಲಭ್ಯ ಹೆಚ್ಚು ಮಾಡುವಂತೆ ಮುಖ್ಯಮಂತ್ರಿಗಳಿಗೆ ಸೂಚನೆ ನೀಡಿದ್ದಾರೆ.

ಮಾಸ್ಕ್ ಧರಿಸುವ ವಿಚಾರದಲ್ಲಿ ಕಠಿಣ ಕ್ರಮ ಅನಿವಾರ್ಯ, ಮಾಸ್ಕ್ ಧರಿಸುವುದನ್ನು ಜನರು ಗಂಭೀರವಾಗಿ ಪರಿಗಣಿಸಿಲ್ಲ. ಇದು ಸ್ಥಳೀಯ ಜಿಲ್ಲಾಡಳಿತದ ವೈಫಲ್ಯವಾಗಿದೆ. ರಾಜ್ಯಗಳಲ್ಲಿ ಮೈಕ್ರೋ ಕಂಟೈನ್ಮೆಂಟ್ ಅಗತ್ಯವಾಗಿದ್ದು ಹಳ್ಳಿಗಳಿಗೆ ಸೋಂಕು ವ್ಯಾಪಿಸಿದರೆ ಕಷ್ಟ. ಹೀಗಾಗಿ ಚಿಕ್ಕ ಚಿಕ್ಕ ಪಟ್ಟಣಗಳಲ್ಲೂ ಪರೀಕ್ಷೆಗಳನ್ನು ಹೆಚ್ಚಿಸಿ ಎಂದು ಸಲಹೆ ನೀಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+