• search
  • Live TV
ಮುಂಬೈ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಮಹಾರಾಷ್ಟ್ರದಲ್ಲಿ ಮತ್ತೆ 24,645 ಕೊರೊನಾ ಸೋಂಕಿತರು ಪತ್ತೆ: ಲಾಕ್‌ಡೌನ್‌ಗೆ ಸಿದ್ಧತೆ

|

ಮುಂಬೈ, ಮಾರ್ಚ್ 23: ಮಹಾರಾಷ್ಟ್ರದಲ್ಲಿ ಕೋವಿಡ್ 2ನೇ ಅಲೆ ಪ್ರಾರಂಭವಾಗಿದ್ದು, ಹೊಸದಾಗಿ 24,645 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ.

ಆ ಮೂಲಕ ಮಹಾರಾಷ್ಟ್ರದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 25,04,327ಕ್ಕೆ ಏರಿಕೆಯಾಗಿದೆ. ಅಂತೆಯೇ ಕೋವಿಡ್-19 ಸೋಂಕಿಗೆ ಬಲಿಯಾದವರ ಸಂಖ್ಯೆ 53,457ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಗಳ ಅವಧಿಯಲ್ಲಿ ಮಹಾರಾಷ್ಟ್ರದಲ್ಲಿ 19,463 ಮಂದಿ ಸೋಂಕಿತರು ಗುಣಮುಖರಾಗಿದ್ದು, 22,34,330 ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ.

ಮಹಾರಾಷ್ಟ್ರದಲ್ಲಿ ಅತೀ ಹೆಚ್ಚು ಸೋಂಕಿತರು ಇರುವ ನಗರಗಳ ಪಟ್ಟಿಯಲ್ಲಿ ವಾಣಿಜ್ಯ ರಾಜಧಾನಿ ಮುಂಬೈ ಅಗ್ರ ಸ್ಥಾನದಲ್ಲಿದ್ದು, ಇಲ್ಲಿ ಇಂದು ಕೂಡ 3,262 ಹೊಸ ಸೋಂಕು ಪ್ರಕರಣಗಳು ವರದಿಯಾಗಿವೆ. ಆ ಮೂಲಕ ಮುಂಬೈನಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 3,65,937ಕ್ಕೆ ಏರಿಕೆಯಾಗಿದ್ದು, 11,596 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ಬಿಎಂಸಿ ಮಾಹಿತಿ ನೀಡಿದೆ.

ಮಹಾರಾಷ್ಟ್ರದಲ್ಲಿ ಒಂದೇ ದಿನ 30535 ಮಂದಿಗೆ ಕೊರೊನಾವೈರಸ್

ಮಹಾರಾಷ್ಟ್ರದಲ್ಲಿ ಸೋಂಕು ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿರುವ ಹಿನ್ನಲೆಯಲ್ಲಿ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ನಗರ ಪ್ರದೇಶಗಳಲ್ಲಿ ಲಾಕ್ ಡೌನ್ ಮಾಡಲು ಚಿಂತನೆ ನಡೆಸಿದ್ದಾರೆ.

ರಾಜ್ಯವು ಮತ್ತೊಂದು ಲಾಕ್ ಡೌನ್ ಅನ್ನು ತಪ್ಪಿಸಬೇಕಾದರೆ ಜನರು ಕೋವಿಡ್-19 ಸುರಕ್ಷತಾ ಪ್ರೋಟೋಕಾಲ್ಗಳನ್ನು ಅನುಸರಿಸಬೇಕು ಎಂದು ಆರೋಗ್ಯ ಸಚಿವ ರಾಜೇಶ್ ಟೊಪೆ ಸೋಮವಾರ ಹೇಳಿದ್ದಾರೆ.

English summary
A day after Maharashtra reported highest single-day spike since the outbreak of COVID-19, the state on Monday saw a drop in daily count, recording 24,645 new cases.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X