ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನಾಸಿಕ್ ಆಸ್ಪತ್ರೆಯಲ್ಲಿ ಆಮ್ಲಜನಕ ಸೋರಿಕೆ; ಮೃತರ ಸಂಖ್ಯೆ 24ಕ್ಕೆ ಏರಿಕೆ

|
Google Oneindia Kannada News

ನಾಸಿಕ್, ಏಪ್ರಿಲ್ 21: ಮಹಾರಾಷ್ಟ್ರದ ನಾಸಿಕ್‌ನಲ್ಲಿನ ಆಸ್ಪತ್ರೆಯಲ್ಲಿ ಆಕ್ಸಿಜನ್ ಟ್ಯಾಂಕರ್ ಸೋರಿಕೆಯಿಂದ ಮೃತಪಟ್ಟವರ ಸಂಖ್ಯೆ 24ಕ್ಕೆ ಏರಿಕೆಯಾಗಿದೆ.

ನಾಸಿಕ್‌ನ ಡಾ. ಜಾಕಿರ್ ಹುಸೇನ್ ಆಸ್ಪತ್ರೆಯಲ್ಲಿ ಬುಧವಾರ ಆಮ್ಲಜನಕ ಪೂರೈಕೆ ವೇಳೆ ಅವಘಡ ಸಂಭವಿಸಿದ್ದು, ಸಿಬ್ಬಂದಿ ಎಷ್ಟೇ ಪ್ರಯತ್ನ ಪಟ್ಟರೂ ಸಿಲಿಂಡರ್ ಸೋರಿಕೆ ನಿಲ್ಲದೇ ಕೊರೊನಾ ರೋಗಿಗಳು ಸಾವನ್ನಪ್ಪಿದ್ದರು.

ಆಸ್ಪತ್ರೆಯಲ್ಲಿ ಆಕ್ಸಿಜನ್ ಟ್ಯಾಂಕರ್ ಸೋರಿಕೆ, 22 ಕೋವಿಡ್ ರೋಗಿಗಳ ಸಾವು ಆಸ್ಪತ್ರೆಯಲ್ಲಿ ಆಕ್ಸಿಜನ್ ಟ್ಯಾಂಕರ್ ಸೋರಿಕೆ, 22 ಕೋವಿಡ್ ರೋಗಿಗಳ ಸಾವು

ಮೊದಲು ಹನ್ನೊಂದು ಮಂದಿ ಮೃತಪಟ್ಟಿದ್ದಾಗಿ ತಿಳಿದುಬಂದಿತ್ತು. ನಂತರ ಆ ಸಂಖ್ಯೆ 22ಕ್ಕೆ ತಲುಪಿದ್ದು, ಇದೀಗ ಒಟ್ಟು 24 ಮೃತಪಟ್ಟಿರುವುದಾಗಿ ಡಿಸಿ ಸೂರಜ್ ಮಂದಾರೆ ಮಾಹಿತಿ ನೀಡಿದ್ದಾರೆ.

24 Covid Patients Dead As Oxygen Tanker Leak In Nashik Hospital

ಘಟನೆಯಲ್ಲಿ ಮೃತಪಟ್ಟ ರೋಗಿಗಳೆಲ್ಲರೂ ವೆಂಟಿಲೇಟರ್‌ ವ್ಯವಸ್ಥೆಯಲ್ಲಿದ್ದವರು. ಆಸ್ಪತ್ರೆಯಲ್ಲಿ ಸದ್ಯಕ್ಕೆ 150 ಕೊರೊನಾ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಅವಘಡದ ಕುರಿತು ತನಿಖೆ ನಡೆಸುವುದಾಗಿ ರಾಜ್ಯ ಆರೋಗ್ಯ ಸಚಿವ ರಾಜೇಶ್ ಟೋಪ್ ಮಾಹಿತಿ ನೀಡಿದ್ದಾರೆ.

ಆಮ್ಲಜನಕ ಸೋರಿಕೆಯನ್ನು ತಡೆಯಲು ಎಷ್ಟೇ ಪ್ರಯತ್ನಿಸಿದರೂ ಆಗಿಲ್ಲ. ಸುಮಾರು 30 ನಿಮಿಷಗಳ ಕಾಲ ಆಮ್ಲಜನಕ ಸೋರಿಕೆಯಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿಯೂ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. 80 ರೋಗಿಗಳಲ್ಲಿ 31 ರೋಗಿಗಳನ್ನು ಮತ್ತೊಂದು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

ಘಟನೆಯಲ್ಲಿ ಮೃತಪಟ್ಟವರಿಗೆ ಪ್ರಧಾನಿ ಮೋದಿ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ. ರಾಜ್ಯ ಸರ್ಕಾರ ಮೃತಪಟ್ಟ ರೋಗಿಗಳ ಕುಟುಂಬಕ್ಕೆ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ.

English summary
24 COVID-19 patients died in Maharashtra's Nashik today after an oxygen tanker leaked outside a hospital,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X