ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮುಂಬೈನಲ್ಲಿ ಲಸಿಕೆ ಪಡೆದ 29 ವಿದ್ಯಾರ್ಥಿಗಳಲ್ಲೇ ಕೊರೊನಾವೈರಸ್ ಸೋಂಕು!

|
Google Oneindia Kannada News

ಮುಂಬೈ, ಸಪ್ಟೆಂಬರ್ 30: ಕೊರೊನಾ ವೈರಸ್ ಲಸಿಕೆ ಹಾಕಿಸಿಕೊಂಡ ವಿದ್ಯಾರ್ಥಿಗಳಲ್ಲೇ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿರುವ ಘಟನೆ ಮುಂಬೈನ ಮೆಡಿಕಲ್ ಕಾಲೇಜೊಂದರಲ್ಲಿ ವರದಿಯಾಗಿದೆ.

ಮುಂಬೈನ ಕಿಂಗ್ ಎಡ್ವರ್ಡ್ ಮೆಮೋರಿಯನ್(ಕೆಇಎಂ) ಮೆಡಿಕಲ್ ಕಾಲೇಜಿನಲ್ಲಿ ಒಟ್ಟು 29 ವಿದ್ಯಾರ್ಥಿಗಳ ಪೈಕಿ ಕೊರೊನಾ ವೈರಸ್ ಲಸಿಕೆಯ ಎರಡೂ ಡೋಸ್ ಪಡೆದ 27 ವಿದ್ಯಾರ್ಥಿಗಳಿಗೆ ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ.

ಕೊರೊನಾ ವೈರಸ್ ಸೋಂಕು ದೃಢಪಟ್ಟ 27 ವಿದ್ಯಾರ್ಥಿಗಳ ಪೈಕಿ 23 ವಿದ್ಯಾರ್ಥಿಗಳು ಎಂಬಿಬಿಎಸ್ ಪದವಿಯ ಎರಡನೇ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದು, ಉಳಿದ ನಾಲ್ಕು ವಿದ್ಯಾರ್ಥಿಗಳು ಮೊದಲ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ.

27 fully vaccinated students in Mumbais KEM Medical College test positive for COVID-19

ಇಬ್ಬರ ಹೊರತು ಉಳಿದ ವಿದ್ಯಾರ್ಥಿಗಳಿಗೆ ಕ್ವಾರೆಂಟೈನ್:

ಕೊರೊನಾವೈರಸ್ ಸೋಂಕು ತಗುಲಿದ ಕೆಇಎಂ ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳ ಪೈಕಿ ಇಬ್ಬರನ್ನು ಸೆವೆನ್ ಹಿಲ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬಾಕಿ ಉಳಿದ ವಿದ್ಯಾರ್ಥಿಗಳಿಗೆ ಕ್ವಾರೆಂಟೈನ್ ನಲ್ಲಿ ಇರಿಸಲಾಗಿದೆ.

1,100 ವಿದ್ಯಾರ್ಥಿಗಳನ್ನು ಹೊಂದಿರುವ ಕಾಲೇಜು:

"ಮುಂಬೈನ ಕಿಂಗ್ ಎಡ್ವರ್ಡ್ ಮೆಮೋರಿಯನ್(ಕೆಇಎಂ) ಮೆಡಿಕಲ್ ಕಾಲೇಜಿನಲ್ಲಿ ಒಟ್ಟು 1,100 ವಿದ್ಯಾರ್ಥಿಗಳು ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದಾರೆ. ಕೊರೊನಾವೈರಸ್ ಸೋಂಕು ಪತ್ತೆಯಾದ 27 ವಿದ್ಯಾರ್ಥಿಗಳೂ ಸಹ ಲಸಿಕೆ ಪಡೆದುಕೊಂಡವರೇ ಆಗಿದ್ದಾರೆ," ಎಂದು ಕೆಇಎಂ ಆಸ್ಪತ್ರೆ ಡೀನ್ ಡಾ. ಹೇಮಂತ್ ದೇಶಮುಖ್ ಹೇಳಿದ್ದಾರೆ.

ಭಾರತದಲ್ಲಿ ಕೊರೊನಾ ವೈರಸ್ ಸೋಂಕಿತ ಪ್ರಕರಣ:

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 23,529 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 311 ಮಂದಿ ಮಹಾಮಾರಿಗೆ ಬಲಿಯಾಗಿದ್ದರೆ, 28,718 ಸೋಂಕಿತರು ಗುಣಮುಖರಾಗಿದ್ದಾರೆ. ಗುರುವಾರದ ಅಂಕಿ-ಅಂಶಗಳ ಪ್ರಕಾರ, ಭಾರತದಲ್ಲಿ ಕೊರೊನಾ ವೈರಸ್ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 3,37,39,980ಕ್ಕೆ ಏರಿಕೆಯಾಗಿದೆ. ಇದುವರೆಗೂ 3,30,14,898 ಸೋಂಕಿತರು ಗುಣಮುಖರಾಗಿದ್ದು, 4,48,062 ಜನರು ಸೋಂಕಿನಿಂದ ಮೃತಪಟ್ಟಿದ್ದಾರೆ. ಇದರ ಹೊರತಾಗಿ ದೇಶದಲ್ಲಿ 2,77,020 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

88.34 ಕೋಟಿ ಫಲಾನುಭವಿಗಳಿಗೆ ಕೊವಿಡ್-19 ಲಸಿಕೆ:

ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಭೀತಿಯಲ್ಲಿ ಲಸಿಕೆ ವಿತರಣೆ ಅಭಿಯಾನವನ್ನು ಸಮರೋಪಾದಿಯಲ್ಲಿ ನಡೆಸಲಾಗುತ್ತಿದೆ. ದೇಶದಲ್ಲಿ 88.34 ಕೋಟಿಗೂ ಅಧಿಕ ಮಂದಿಗೆ ಕೊವಿಡ್-19 ಲಸಿಕೆ ನೀಡಲಾಗಿದೆ. ದೇಶದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ ಅಭಿಯಾನ ಆರಂಭಿಸಿ 257 ದಿನಗಳಾಗಿದೆ. ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 65,34,306 ಮಂದಿಗೆ ಕೊರೊನಾವೈರಸ್ ಲಸಿಕೆ ವಿತರಿಸಲಾಗಿದ್ದು, ಈವರೆಗೂ 88,34,70,578 ಫಲಾನುಭವಿಗಳಿಗೆ ಲಸಿಕೆ ನೀಡಲಾಗಿದೆ. ಕೇಂದ್ರ ಸರ್ಕಾರದಿಂದ ದೇಶದ ವಿವಿಧ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಈವರೆಗೂ 86,51,52,695 ಡೋಸ್ ಲಸಿಕೆ ಪೂರೈಕೆ ಮಾಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

English summary
27 fully vaccinated students in Mumbai's KEM Medical College test positive for COVID-19.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X