ಮಹಾರಾಷ್ಟ್ರದಲ್ಲಿ ರಾತ್ರಿ ಕರ್ಫ್ಯೂನಿಂದ ಕೊರೊನಾಗೆ ಕಡಿವಾಣ!?

ಮುಂಬೈ, ಮಾರ್ಚ್ 30: ಮಹಾರಾಷ್ಟ್ರದಲ್ಲಿ ರಾತ್ರಿ ಕರ್ಫ್ಯೂ ಜಾರಿಗೊಳಿಸಿದ ನಂತರದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯಲ್ಲಿ ಕೊಂಚ ಇಳಿಮುಖವಾಗಿದೆ. ಅದಾಗ್ಯೂ, ಕಳೆದ 24 ಗಂಟೆಗಳಲ್ಲಿ 27918 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ.

ರಾಜ್ಯದಲ್ಲಿ ಕೊರೊನಾವೈರಸ್ ಸೋಂಕಿನಿಂದ ಪ್ರಾಣ ಬಿಟ್ಟವರ ಸಂಖ್ಯೆಯು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಒಂದೇ ದಿನದಲ್ಲಿ 139 ಮಂದಿ ಕೊವಿಡ್-19 ಸೋಂಕಿನಿಂದಲೇ ಪ್ರಾಣ ಬಿಟ್ಟಿದ್ದು, ಒಟ್ಟು ಸಾವಿನ ಸಂಖ್ಯೆಯು 54,422ಕ್ಕೆ ಏರಿಕೆಯಾಗಿದೆ.

ಮಂಗಳವಾರದ ಅಂಕಿ-ಅಂಶಗಳ ಪ್ರಕಾರ, ಮಹಾರಾಷ್ಟ್ರದಲ್ಲಿ ಒಟ್ಟು ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ 27,73,436ಕ್ಕೆ ಏರಿಕೆಯಾಗಿದೆ. ಒಂದು ದಿನದಲ್ಲಿ 23,820 ಸೋಂಕಿತರು ಗುಣಮುಖರಾಗಿದ್ದು, ಈವರೆಗೂ 23,77,127 ಜನರು ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರ ಹೊರತಾಗಿ ರಾಜ್ಯದಲ್ಲಿ 3,40,542 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

27918 New Coronavirus Cases Reported in Maharashtra in the Last 24 Hours

ಕೊರೊನಾ ಸೋಂಕಿನ ಟಾಪ್-10 ಜಿಲ್ಲೆಗಳು:

ದೇಶದಲ್ಲಿ ಅತಿಹೆಚ್ಚು ಕೊರೊನಾವೈರಸ್ ಸೋಂಕಿತ ಪ್ರಕರಣಗಳನ್ನು ಹೊಂದಿರುವ ಅಪಾಯಕಾರಿ ಜಿಲ್ಲೆಗಳ ಬಗ್ಗೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಪಟ್ಟಿ ಮಾಡಿದೆ. ಕೇಂದ್ರದ ಪಟ್ಟಿಯಲ್ಲಿ ಮುಂಬೈ, ದೆಹಲಿ ಜೊತೆಗೆ ಬೆಂಗಳೂರು ಕೂಡ ಸೇರಿದೆ. ಪುಣೆ, ಮುಂಬೈ, ನಾಗ್ಪುರ, ಥಾಣೆ, ನಾಸಿಕ್, ಔರಂಗಾಬಾದ್, ಬೆಂಗಳೂರು ನಗರ, ನಾಂದೆಡ್, ದೆಹಲಿ ಮತ್ತು ಅಹಮದಾಬಾದ್ ಜಿಲ್ಲೆಗಳಲ್ಲೇ ಹೆಚ್ಚಿನ ಕೊರೊನಾವೈರಸ್ ಸಕ್ರಿಯ ಪ್ರಕರಣಗಳಿವೆ ವರದಿಯಲ್ಲಿ ಉಲ್ಲೇಖಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+