ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಹಾರಾಷ್ಟ್ರದಲ್ಲಿ ಮತ್ತೆ 3 ಕೊರೊನಾ ಪ್ರಕರಣ ದೃಢ: ಸೋಂಕಿತರ ಸಂಖ್ಯೆ 52ಕ್ಕೆ ಏರಿಕೆ

|
Google Oneindia Kannada News

ಮುಂಬೈ, ಮಾರ್ಚ್ 20: ಮಹಾರಾಷ್ಟ್ರದಲ್ಲಿ ಕೊರೊನಾ ವೈರಸ್ ಹೊಸ ಮೂರು ಪ್ರಕರಣಗಳು ದೃಢಪಟ್ಟಿವೆ.

ಚಿಂಚವಾಡದ ಪಿಂಪ್ರಿ, ಪುಣೆ ಹಾಗೂ ಮುಂಬೈನಲ್ಲಿ ಒಂದೊಂದು ಪ್ರಕರಣಗಳು ದಾಖಲಾಗಿವೆ. ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 49ರಿಂದ 52ಕ್ಕೆ ಏರಿಕೆಯಾಗಿದೆ ಎಂದು ಮಹಾರಾಷ್ಟ್ರ ಆರೋಗ್ಯ ಸಚಿವ ರಾಜೇಶ್ ತಿಳಿಸಿದ್ದಾರೆ.

ಕೊರೊನಾ: ರಸ್ತೆಯಲ್ಲಿ ಸೀನಿದ ವ್ಯಕ್ತಿಗೆ ಸಾರ್ವಜನಿಕರಿಂದ ಥಳಿತಕೊರೊನಾ: ರಸ್ತೆಯಲ್ಲಿ ಸೀನಿದ ವ್ಯಕ್ತಿಗೆ ಸಾರ್ವಜನಿಕರಿಂದ ಥಳಿತ

ಮಹಾರಾಷ್ಟ್ರದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪೀಡಿತರ ಸಂಖ್ಯೆ ಹೆಚ್ಚಾಗುತ್ತಿದೆ. ದೇಶದಲ್ಲಿ ಇದುವರೆಗೆ 195 ಮಂದಿ ಕೊರೊನಾಗೆ ತುತ್ತಾಗಿದ್ದಾರೆ. 4 ಮಂದಿ ಮೃತಪಟ್ಟಿದ್ದಾರೆ. ವಿಶ್ವಾದ್ಯಂತ ಕೊರೊನಾದಿಂದ 10,048ಮಂದಿ ಸಾವಿಗೀಡಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಭಾನುವಾರ ಜನತಾ ಕರ್ಫ್ಯೂಗೆ ಕರೆ ಕೊಟ್ಟಿದ್ದಾರೆ.

3 People Have Tested Positive For Coronavirus

ಮಹಾರಾಷ್ಟ್ರದ ರಸ್ತೆಯಲ್ಲಿ ಕರ್ಚಿಫ್ ಮುಖಕ್ಕೆ ಅಡ್ಡಹಿಡಿಯದೇ ಸೀನಿದ ಎನ್ನುವ ಕಾರಣಕ್ಕೆ ಸಾರ್ವಜನಿಕರು ಥಳಿಸಿರುವ ಘಟನೆಯೂ ವರದಿಯಾಗಿದೆ.

ಸೀನುವಾಗ ಮುಖಕ್ಕೆ ಅಡ್ಡಲಾಗಿ ಏನಾದರೂ ಇಟ್ಟುಕೊಳ್ಳಬೇಕು ಎನ್ನುವ ಸಾಮಾನ್ಯ ಜ್ಞಾನವೂ ಇಲ್ಲವೇ? ನಿಮ್ಮಂಥವರಿಂದಲೇ ಕೊರೋನಾ ವೈರಸ್ ಹೆಚ್ಚು ಹರಡುತ್ತಿದೆ,' ಎಂದು ಬೈಕ್​ ತಡೆದವರು ಸೀನಿದವನಿಗೆ ಬುದ್ಧಿವಾದ ಹೇಳಿದ್ದಾರೆ. ಅದು ಕೊನೆಗೆ ಜಗಳವಾಗಿ ಅಂತ್ಯಕಂಡಿತ್ತು.

English summary
3 people have tested positive for Coronavirus - one each from Pimpri-Chinchwad, Pune And Mumbai. The total number of cases in the state now rises to 52.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X