ಮಹಾರಾಷ್ಟ್ರದಲ್ಲಿ ಒಂದೇ ದಿನ 30535 ಮಂದಿಗೆ ಕೊರೊನಾವೈರಸ್

ಮುಂಬೈ, ಮಾರ್ಚ್ 21: ಕೊರೊನಾವೈರಸ್ 2ನೇ ಅಲೆಗೆ ಮಹಾರಾಷ್ಟ್ರ ತತ್ತರಿಸಿ ಹೋಗಿದೆ. ಕೊವಿಡ್-19 ಎರಡನೇ ಅಲೆಯ ಹರಡುವಿಕೆ ವೇಗ ಮೊದಲಿಗಿಂತಲೂ ಹೆಚ್ಚಾಗಿರುತ್ತದೆ ಎಂದ ಸಾಂಕ್ರಾಮಿಕ ರೋಗ ಶಾಸ್ತ್ರಜ್ಞರ ಎಚ್ಚರಿಕೆಯನ್ನು ಅಂಕಿ-ಅಂಶಗಳು ಸಾಬೀತುಪಡಿಸುತ್ತಿವೆ.
ಮಹಾರಾಷ್ಟ್ರದಲ್ಲಿ ಒಂದೇ ದಿನ 30535 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. 11,314 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದು, 99 ಮಂದಿ ಮಹಾಮಾರಿಯಿಂದ ಪ್ರಾಣ ಬಿಟ್ಟಿದ್ದಾರೆ.

ಮಹಾರಾಷ್ಟ್ರದಲ್ಲಿ ಕೊರೊನಾ 2ನೇ ಅಲೆ ಹೆಚ್ಚಾಗುವುದರ ಹಿಂದಿನ ಗುಟ್ಟು
ಭಾನುವಾರದ ಅಂಕಿ-ಅಂಶಗಳ ಪ್ರಕಾರ, ಮಹಾರಾಷ್ಟ್ರದಲ್ಲಿ ಒಟ್ಟು ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ 24,79,682ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಈವರೆಗೂ 22,14,867 ಸೋಂಕಿತರು ಗುಣಮುಖರಾಗಿದ್ದು, ಮಹಾಮಾರಿಗೆ ಬಲಿಯಾದವರ ಸಂಖ್ಯೆ 53,399ಕ್ಕೆ ಏರಿಕೆಯಾಗಿದೆ. ಇದರ ಹೊರತಾಗಿ 2,10,120 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

30535 New Coronavirus Cases Reported in Maharashtra in the Last 24 Hours

ಮುಂಬೈನಲ್ಲೇ 3775 ಮಂದಿಗೆ ಕೊರೊನಾವೈರಸ್:
ಮಹಾರಾಷ್ಟ್ರದ ಮುಂಬೈನಲ್ಲೇ 24 ಗಂಟೆಗಳಲ್ಲಿ 3775 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದ್ದು, ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 3,62,654ಕ್ಕೆ ಏರಿಕೆಯಾಗಿದೆ. ಒಂದೇ ದಿನ 10 ಮಂದಿ ಮಹಾಮಾರಿಗೆ ಬಲಿಯಾಗಿದ್ದು, ಸಾವಿನ ಸಂಖ್ಯೆ 11,582ಕ್ಕೆ ಏರಿಕೆಯಾಗಿದೆ. ಮುಂಬೈನಲ್ಲೇ 23448 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ಅಂಕಿ-ಅಂಶಗಳಲ್ಲಿ ಸ್ಪಷ್ಟವಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+