ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಲಾಕ್‌ಡೌನ್‌ ಉಲ್ಲಂಘಿಸಿ ನಮಾಜ್‌, ಪೊಲೀಸರ ಮೇಲೆ ಕಲ್ಲು ತೂರಾಟ

|
Google Oneindia Kannada News

ಮುಂಬೈ, ಏಪ್ರಿಲ್ 28: ಲಾಕ್‌ಡೌನ್‌ ಜಾರಿಯಲ್ಲಿರುವ ಕಾರಣ ಮಸೀದಿಗಳಲ್ಲಿ ಸಾಮೂಹಿಕ ಪ್ರಾರ್ಥನೆ ಮಾಡಬಾರದು ಎಂದು ಕೇಂದ್ರ ಸರ್ಕಾರ ಆದೇಶಿಸಿದೆ. ಆಯಾ ರಾಜ್ಯ ಸರ್ಕಾರ ಹಾಗೂ ವಕ್ಫ್ ಮಂಡಳಿಗಳು ಕೂಡ ಈ ಕುರಿತು ಮುಸ್ಲಿಂ ಸಮುದಾಯಕ್ಕೆ ವಿನಂತಿ ಮಾಡಿದ್ದವು.

Recommended Video

ಪತ್ರಕರ್ತರ ಮೇಲೆ ಹಲ್ಲೆ ಮಾಡಿದ ಶಾಸಕ ಶ್ರೀಕಂಠೇಗೌಡ ಮತ್ತು ಅವರ ಪುತ್ರ,ದೂರು ದಾಖಲು

ಆದರೂ ಇದೆಲ್ಲವನ್ನು ಗಾಳಿಗೆ ತೂರಿ ಮಹಾರಾಷ್ಟ್ರದ ಔರಂಗಬಾದ್‌ನಲ್ಲಿ ಸಾಮೂಹಿಕವಾಗಿ ಪ್ರಾರ್ಥನೆ ಸಲ್ಲಿಸಿರುವ ಘಟನೆ ನಡೆದಿದೆ. ಈ ಬಗ್ಗೆ ಖಚಿತ ಮಾಹಿತಿ ಸಿಕ್ಕ ಪೊಲೀಸರು, ಸ್ಥಳಕ್ಕೆ ಹೋಗಿ ಅಲ್ಲಿದ್ದ ಕೆಲವರು ಠಾಣೆಗೆ ಕರೆದುಕೊಂಡು ಬರುವ ಪ್ರಯತ್ನ ಮಾಡಿದ್ದಾರೆ. ಆದರೆ, ಇದಕ್ಕೆ ವಿರೋಧ ವ್ಯಕ್ತಪಡಿಸಿದ ಸ್ಥಳೀಯರು ಪೊಲೀಸರ ಮೇಲೆ ಕಲ್ಲು ತೂರಾಟ ಮಾಡಿದ್ದಾರೆ.

31 People Arrested By Aurangabad Police For Violation Of Lockdown

ಲಾಕ್‌ಡೌನ್‌ ಮಧ್ಯೆ ಕೆಲಸ: ಆಕ್ರೋಶಗೊಂಡ ಕಾರ್ಮಿಕರಿಂದ ಕಲ್ಲು ತೂರಾಟಲಾಕ್‌ಡೌನ್‌ ಮಧ್ಯೆ ಕೆಲಸ: ಆಕ್ರೋಶಗೊಂಡ ಕಾರ್ಮಿಕರಿಂದ ಕಲ್ಲು ತೂರಾಟ

''ನಮಾಜ್ ಮಾಡಲು 40 ಜನರು ಸೇರಿದ್ದಾರೆ ಎಂಬ ಮಾಹಿತಿ ಸಿಕ್ಕಿತ್ತು. ಅವರಲ್ಲಿ ಕೆಲವರನ್ನು ಠಾಣೆಗೆ ಕರೆತಂದಾಗ, ಅಲ್ಲಿನ ಸ್ಥಳೀಯರು ಪೊಲೀಸರ ಮೇಲೆ ಕಲ್ಲು ತೂರಾಟ ಮಾಡಿದ್ದಾರೆ. ಇದರಿಂದ ಮೂರು ಪೊಲೀಸರು ಗಾಯಗೊಂಡಿದ್ದಾರೆ'' ಎಂದು ಔರಂಗಬಾದ್ ಎಸ್‌ಪಿ ತಿಳಿಸಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ 31 ಜನರನ್ನು ಬಂಧಿಸಲಾಗಿದೆ. ಉಳಿದವರನ್ನು ಶೀಘ್ರದಲ್ಲಿ ವಶಕ್ಕೆ ಪಡೆಯುತ್ತೇವೆ ಎಂದು ಪೊಲೀಸ್ ಹಿರಿಯ ಅಧಿಕಾರಿ ಮಾಹಿತಿ ನೀಡಿದ್ದಾರೆ.

English summary
40 people had gathered to offer namaz. Police got information and they brought to police station, locals pelted stones at police injuring 3 personnel at Aurangabad.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X