ಮಹಾರಾಷ್ಟ್ರದಲ್ಲಿ ಕೊರೊನಾಗೆ ಒಂದೇ ದಿನ 102 ಮಂದಿ ಸಾವು
ಮುಂಬೈ, ಮಾರ್ಚ್ 29: ಕೊರೊನಾವೈರಸ್ ಸೋಂಕಿತ ಎರಡನೇ ಅಲೆಗೆ ಮಹಾರಾಷ್ಟ್ರ ತತ್ತರಿಸಿ ಹೋಗಿದೆ. ದೇಶದಲ್ಲೇ ಪ್ರತಿನಿತ್ಯ ಅತಿಹೆಚ್ಚು ಕೊವಿಡ್-19 ಸೋಂಕಿತ ಪ್ರಕರಣಗಳು ಮಹಾರಾಷ್ಟ್ರ ರಾಜ್ಯವೊಂದರಲ್ಲೇ ಪತ್ತೆಯಾಗುತ್ತಿವೆ.
ಸೋಮವಾರ ಒಂದೇ ದಿನ 31643 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ರಾಜ್ಯದಲ್ಲಿ ಒಟ್ಟು ಸೋಂಕಿತ ಪ್ರಕರಣ ಸಂಖ್ಯೆ 27,45,518ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಮಹಾರಾಷ್ಟ್ರದಲ್ಲಿ 3,36,584 ಕೊರೊನಾವೈರಸ್ ಸಕ್ರಿಯ ಪ್ರಕರಣಗಳು ವರದಿಯಾಗಿವೆ. ರಾಜ್ಯದಲ್ಲಿ ಒಂದೇ ದಿನ ಮಹಾಮಾರಿ ಕೊವಿಡ್-19 ಸೋಂಕಿಗೆ 102 ಮಂದಿ ಪ್ರಾಣ ಬಿಟ್ಟಿದ್ದು, ಒಟ್ಟು ಸಾವಿನ ಸಂಖ್ಯೆ 54,283ಕ್ಕೆ ಏರಿಕೆಯಾಗಿದೆ. 24 ಗಂಟೆಗಳಲ್ಲಿ 20,854 ಸೋಂಕಿತರು ಗುಣಮುಖರಾಗಿದ್ದು, ಒಟ್ಟು ಗುಣಮುಖ ಪ್ರಕರಣಗಳ ಸಂಖ್ಯೆ 23,53,307ಕ್ಕೆ ಏರಿಕೆಯಾಗಿದೆ.

ನಾಗ್ಪುರ್ ಜಿಲ್ಲೆಯಲ್ಲೇ 3177 ಮಂದಿಗೆ ಸೋಂಕು:
ಮಹಾರಾಷ್ಟ್ರದ ನಾಗ್ಪುರ್ ಜಿಲ್ಲೆಯೊಂದರಲ್ಲೇ ಕಳೆದ 24 ಗಂಟೆಗಳಲ್ಲಿ 3177 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದ್ದು, ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 2,21,997ಕ್ಕೆ ಏರಿಕೆಯಾಗಿದೆ. ಒಂದು ದಿನದಲ್ಲಿ 55 ಮಂದಿ ಪ್ರಾಣ ಬಿಟ್ಟಿದ್ದು, ಒಟ್ಟು ಸಾವಿನ ಸಂಖ್ಯೆ 4986ಕ್ಕೆ ಏರಿಕೆಯಾಗಿದೆ. ಈ ಹಿನ್ನೆಲೆ ಮುನ್ನೆಚ್ಚರಿಕೆ ವಹಿಸಲಾಗಿದ್ದು, ಮಾರ್ಚ್ 28ರಿಂದ ಮುಂಬೈನಲ್ಲಿ ರಾತ್ರಿ ಕರ್ಫ್ಯೂ ಜಾರಿಗೊಳಿಸಲಾಗುವುದು.












Click it and Unblock the Notifications