• search
  • Live TV
ಮುಂಬೈ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಮಹಾರಾಷ್ಟ್ರದಲ್ಲಿ ಒಂದೇ ದಿನ 35726 ಮಂದಿಗೆ ಕೊರೊನಾವೈರಸ್

|

ಮುಂಬೈ, ಮಾರ್ಚ್ 27: ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಎರಡನೇ ಅಲೆ ಜೋರಾಗಿದೆ. ದೇಶದಲ್ಲಿ ಪತ್ತೆಯಾಗುತ್ತಿರುವ ಹೊಸ ಕೊವಿಡ್-19 ಸೋಂಕಿತ ಪ್ರಕರಣಗಳಲ್ಲಿ ಶೇ.60ಕ್ಕಿಂತ ಹೆಚ್ಚು ಸೋಂಕಿತ ಪ್ರಕರಣಗಳು ಮಹಾರಾಷ್ಟ್ರ ರಾಜ್ಯವೊಂದರಲ್ಲೇ ವರದಿಯಾಗುತ್ತಿವೆ.

ಮಹಾರಾಷ್ಟ್ರದಲ್ಲಿ ಕಳೆದ 24 ಗಂಟೆಗಳಲ್ಲಿ 35726 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ರಾಜ್ಯದಲ್ಲಿ ಒಟ್ಟು ಸೋಂಕಿತ ಪ್ರಕರಣ ಸಂಖ್ಯೆ 26,73,461ಕ್ಕೆ ಏರಿಕೆಯಾಗಿದೆ. ಮಹಾರಾಷ್ಟ್ರದಲ್ಲಿ 3,03,475 ಕೊರೊನಾವೈರಸ್ ಸಕ್ರಿಯ ಪ್ರಕರಣಗಳು ವರದಿಯಾಗಿವೆ.

ಮಾ.28ರಿಂದ ರಾತ್ರಿ ಕರ್ಫ್ಯೂ ಜಾರಿಗೊಳಿಸಲು 'ಮಹಾ' ಸಿಎಂ ಆದೇಶ

ರಾಜ್ಯದಲ್ಲಿ ಒಂದೇ ದಿನ ಮಹಾಮಾರಿ ಕೊವಿಡ್-19 ಸೋಂಕಿಗೆ 166 ಮಂದಿ ಪ್ರಾಣ ಬಿಟ್ಟಿದ್ದು, ಒಟ್ಟು ಸಾವಿನ ಸಂಖ್ಯೆ 54,073ಕ್ಕೆ ಏರಿಕೆಯಾಗಿದೆ. 24 ಗಂಟೆಗಳಲ್ಲಿ 14523 ಸೋಂಕಿತರು ಗುಣಮುಖರಾಗಿದ್ದು, ಒಟ್ಟು ಗುಣಮುಖ ಪ್ರಕರಣಗಳ ಸಂಖ್ಯೆ 23,14,579ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಮುಂಬೈನಲ್ಲೇ 3775 ಮಂದಿಗೆ ಕೊರೊನಾವೈರಸ್:

ಮಹಾರಾಷ್ಟ್ರದ ಮುಂಬೈನಲ್ಲೇ 24 ಗಂಟೆಗಳಲ್ಲಿ 6123 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದ್ದು, ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 3,91,751ಕ್ಕೆ ಏರಿಕೆಯಾಗಿದೆ. ಈ ಹಿನ್ನೆಲೆ ಮುನ್ನೆಚ್ಚರಿಕೆ ವಹಿಸಲಾಗಿದ್ದು, ಮಾರ್ಚ್ 28ರಿಂದ ಮುಂಬೈನಲ್ಲಿ ರಾತ್ರಿ ಕರ್ಫ್ಯೂ ಜಾರಿಗೊಳಿಸಲಾಗುವುದು. ರಾತ್ರಿ 10 ಅಥವಾ 11 ಗಂಟೆಯಿಂದ ಕರ್ಫ್ಯೂ ಜಾರಿಗೊಳಿಸಲಾಗುವುದು ಎಂದು ಮುಂಬೈ ಮಹಾನಗರ ಪಾಲಿಕೆ ಮೇಯರ್ ಕಿಶೋರಿ ಪೆಡ್ನೇಕರ್ ತಿಳಿಸಿದ್ದಾರೆ. ಅಲ್ಲದೇ, ರಾತ್ರಿ 8 ಗಂಟೆಯಿಂದ ಬೆಳಗ್ಗೆ 7 ಗಂಟೆವರೆಗೂ ಶಾಪಿಂಗ್ ಮಾಲ್ ಸೇರಿದಂತೆ ಎಲ್ಲ ಅಂಗಡಿ-ಮುಂಗಟ್ಟುಗಳನ್ನು ಬಂದ್ ಮಾಡುವುದಕ್ಕೆ ಸೂಚನೆ ನೀಡಲಾಗಿದೆ.

English summary
35726 New Coronavirus Cases Reported in Maharashtra in the Last 24 Hours
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X