ಮಹಾರಾಷ್ಟ್ರದಲ್ಲಿ ಭಯ ಹುಟ್ಟಿಸಿದ ಕೊರೊನಾವೈರಸ್ ಅಂಕಿ-ಸಂಖ್ಯೆ
ಮುಂಬೈ, ಏಪ್ರಿಲ್ 05: ಮಹಾರಾಷ್ಟ್ರದಲ್ಲಿ ಪ್ರತಿನಿತ್ಯ ಕೊರೊನಾವೈರಸ್ ಸೋಂಕಿತ ಪ್ರಕರಣಗಳು ಸಾರ್ವಜನಿಕರಲ್ಲಿ ಭಯ ಹುಟ್ಟಿಸುತ್ತಿದೆ. ಕಳೆದ 24 ಗಂಟೆಗಳಲ್ಲೇ 47288 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ.
ರಾಜ್ಯದಲ್ಲಿ ಒಂದೇ ದಿನ 155 ಮಂದಿ ಕೊರೊನಾವೈರಸ್ ಸೋಂಕಿನಿಂದ ಪ್ರಾಣ ಬಿಟ್ಟಿದ್ದರೆ, 26,252 ಸೋಂಕಿತರು ಗುಣಮುಖರಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಸೋಮವಾರದ ಅಂಕಿ-ಅಂಶಗಳ ಪ್ರಕಾರ, ಮಹಾರಾಷ್ಟ್ರದಲ್ಲಿ ಒಟ್ಟು 30,57,885 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ವರದಿಯಾಗಿವೆ. ಈ ಪೈಕಿ 25,49,075 ಸೋಂಕಿತರು ಗುಣಮುಖರಾಗಿದ್ದು, 56,033 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಇದರ ಹೊರತಾಗಿ ರಾಜ್ಯದಲ್ಲಿ 4,51,375 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ತಿಳಿದು ಬಂದಿದೆ.

ಮುಂಬೈನಲ್ಲೇ 9,857 ಮಂದಿಗೆ ಕೊರೊನಾ:
ಮಹಾರಾಷ್ಟ್ರದ ಮುಂಬೈನಲ್ಲೇ 24 ಗಂಟೆಗಳಲ್ಲಿ 9,857 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದ್ದು, ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 4,62,302ಕ್ಕೆ ಏರಿಕೆಯಾಗಿದೆ. ಒಂದು ದಿನದಲ್ಲಿ 21 ಮಂದಿ ಕೊವಿಡ್-19 ಸೋಂಕಿನಿಂದ ಪ್ರಾಣ ಬಿಟ್ಟಿದ್ದು, ಸಾವಿನ ಸಂಖ್ಯೆ 11,797ಕ್ಕೆ ಏರಿಕೆಯಾಗಿದೆ. ಒಂದು ದಿನದಲ್ಲಿ 3357 ಸೋಂಕಿತರು ಗುಣಮುಖರಾಗಿದ್ದು, ಒಟ್ಟು ಗುಣಮುಖರ ಸಂಖ್ಯೆ 3,71,628ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ 74,522 ಕೊರೊನಾವೈರಸ್ ಸಕ್ರಿಯ ಪ್ರಕರಣಗಳಿವೆ.












Click it and Unblock the Notifications