• search
  • Live TV
ಮುಂಬೈ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಮಹಾರಾಷ್ಟ್ರ ಎನ್‌ಕೌಂಟರ್: ಐವರು ನಕ್ಸಲರ ಹತ್ಯೆ

|

ಮುಂಬೈ, ಮಾರ್ಚ್ 29: ಮಹಾರಾಷ್ಟ್ರದಲ್ಲಿ ಸೋಮವಾರ ನಡೆದ ಎನ್‌ಕೌಂಟರ್‌ನಲ್ಲಿ ಐವರು ನಕ್ಸಲರನ್ನು ಪೊಲೀಸರು ಹತ್ಯೆಗೈದಿದ್ದಾರೆ.

ಮಹಾರಾಷ್ಟ್ರದ ಗಡ್‌ಚಿರೋಲಿಯ ಖೋಬ್ರಮೇಂಧ ಅರಣ್ಯ ಪ್ರದೇಶದಲ್ಲಿ ಘಟನೆ ನಡೆದಿದೆ. ಅರಣ್ಯ ಪ್ರದೇಶದಲ್ಲಿ ಪೊಲೀಸರು ನೋಡಿದ ಕೂಡಲೇ ನಕ್ಸಲರು ಮನಬಂದಂತೆ ಗುಂಡಿನ ದಾಳಿ ನಡೆಸಿದ್ದಾರೆ. ಇದಕ್ಕೆ ಪ್ರತಿಯಾಗಿ ಭದ್ರತಾ ಪಡೆಗಳು ಗುಂಡಿನ ದಾಳಿ ನಡೆಸಿದಾಗ ಅಲ್ಲಿಂದ ಅವರು ಕಾಲ್ಕಿತ್ತಿದ್ದಾರೆ.

ಛತ್ತೀಸ್‌ಗಢದಲ್ಲಿ ಪೊಲೀಸರಿಗೆ ಶರಣಾದ 6 ಮಂದಿ ನಕ್ಸಲರು

ಒಂದು ಗಂಟೆಯ ಕಾಲ ನಡೆದ ಎನ್ ಕೌಂಟರ್ ನಲ್ಲಿ ಐವರು ನಕ್ಸಲರನ್ನು ಹತ್ಯೆ ಮಾಡುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಎನ್ ಕೌಂಟರ್ ಮುಗಿದ ನಂತರ ಮದ್ದು ಗುಂಡುಗಳೊಂದಿಗೆ ಐವರು ನಕ್ಸಲೀಯರ ಮೃತದೇಹವನ್ನು ವಶಕ್ಕೆ ಪಡೆಯಲಾಗಿದೆ. ಆದರೆ, ಅವರ ಗುರುತು ಪತ್ತೆಯಾಗಿಲ್ಲ ಎಂದು ಪಾಟೀಲ್ ತಿಳಿಸಿದ್ದಾರೆ.

ಖುರ್ಖೇಡಾ ಪ್ರದೇಶದ ಖೋಬ್ರಮೇಧ ಅರಣ್ಯ ಪ್ರದೇಶದಲ್ಲಿ ನಕ್ಸಲೀಯರು ಹಾಗೂ ಪೊಲೀಸರ ನಡುವೆ ನಡೆದ ಎನ್ ಕೌಂಟರ್ ನಲ್ಲಿ ಐವರು ನಕ್ಸಲರನ್ನು ಹತ್ಯೆ ಮಾಡಲಾಗಿದೆ ಎಂದು ನಕ್ಸಲ್ ಶ್ರೇಣಿಯ ಡಿಐಜಿ ಸಂದೀಪ್ ಪಾಟೀಲ್ ತಿಳಿಸಿದ್ದಾರೆ.

English summary
Five Naxals were killed in an encounter with Maharashtra police in Kukheda's forest area on Monday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X