ಮಹಾರಾಷ್ಟ್ರದಲ್ಲಿ ಕೊರೊನಾದಿಂದ ಒಂದೇ ದಿನ 297 ಮಂದಿ ಸಾವು
ಮುಂಬೈ, ಏಪ್ರಿಲ್ 06: ಮಹಾರಾಷ್ಟ್ರದಲ್ಲಿ ಮತ್ತೊಮ್ಮೆ ಕೊರೊನಾವೈರಸ್ ಮಹಾಸ್ಫೋಟ ಸಂಭವಿಸಿದೆ. ಒಂದೇ ದಿನದಲ್ಲಿ 55469 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ.
ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 297 ಮಂದಿ ಕೊರೊನಾವೈರಸ್ ಸೋಂಕಿನಿಂದ ಪ್ರಾಣ ಬಿಟ್ಟಿದ್ದರೆ, 34,256 ಸೋಂಕಿತರು ಗುಣಮುಖರಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಮಹಾರಾಷ್ಟ್ರದಲ್ಲಿ ಒಟ್ಟು 31,13,354 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ವರದಿಯಾಗಿವೆ. ಈ ಪೈಕಿ 25,83,331 ಸೋಂಕಿತರು ಗುಣಮುಖರಾಗಿದ್ದು, 56,330 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಇದರ ಹೊರತಾಗಿ ರಾಜ್ಯದಲ್ಲಿ 4,72,283 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ತಿಳಿದು ಬಂದಿದೆ.

ಮುಂಬೈನಲ್ಲೇ 10,030 ಮಂದಿಗೆ ಕೊರೊನಾವೈರಸ್:
ಮಹಾರಾಷ್ಟ್ರದ ಮುಂಬೈನಲ್ಲಿ ಮತ್ತೊಮ್ಮೆ ಕೊವಿಡ್-19 ಸೋಂಕಿನ ಸ್ಫೋಟ ಸಂಭವಿಸಿದೆ. ಕಳೆದ 24 ಗಂಟೆಗಳಲ್ಲಿ 10,030 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದ್ದು, ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ4,72,332ಕ್ಕೆ ಏರಿಕೆಯಾಗಿದೆ. ಒಂದು ದಿನದಲ್ಲಿ 31 ಮಂದಿ ಕೊವಿಡ್-19 ಸೋಂಕಿನಿಂದ ಪ್ರಾಣ ಬಿಟ್ಟಿದ್ದು, ಸಾವಿನ ಸಂಖ್ಯೆ 11,828ಕ್ಕೆ ಏರಿಕೆಯಾಗಿದೆ.












Click it and Unblock the Notifications