ಮಹಾರಾಷ್ಟ್ರದಲ್ಲಿ ಒಂದೇ ದಿನ 56286 ಮಂದಿಗೆ ಕೊರೊನಾವೈರಸ್!

ಮುಂಬೈ, ಏಪ್ರಿಲ್ 08: ಮಹಾರಾಷ್ಟ್ರದಲ್ಲಿ ಕೊರೊನಾವೈರಸ್ ಪಾಸಿಟಿವಿಟಿ ಪ್ರಮಾಣ ಯಥಾವತ್ತಾಗಿ ಮುಂದುವರಿದಿದೆ. ಕಳೆದ 24 ಗಂಟೆಗಳಲ್ಲಿ 56286 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ.

ರಾಜ್ಯದಲ್ಲಿ ಒಂದೇ ದಿನ 376 ಜನರು ಕೊರೊನಾವೈರಸ್ ಸೋಂಕಿನಿಂದ ಪ್ರಾಣ ಬಿಟ್ಟಿದ್ದಾರೆ. ಅದೇ ಅವಧಿಯಲ್ಲಿ 36,130 ಸೋಂಕಿತರು ಗುಣಮುಖರಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಗುರುವಾರದ ಅಂಕಿ-ಅಂಶಗಳ ಪ್ರಕಾರ, ಮಹಾರಾಷ್ಟ್ರದಲ್ಲಿ ಒಟ್ಟು 32,29,547 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ವರದಿಯಾಗಿವೆ. ಈ ಪೈಕಿ 26,49,757 ಸೋಂಕಿತರು ಗುಣಮುಖರಾಗಿದ್ದು, 57,028 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಇದರ ಹೊರತಾಗಿ 5,21,317 ಸಕ್ರಿಯ ಪ್ರಕರಣಗಳಿವೆ.

56286 New Coronavirus Cases Reported in Maharashtra in the Last 24 Hours

ಮುಂಬೈನಲ್ಲೇ 8,938 ಮಂದಿಗೆ ಕೊರೊನಾವೈರಸ್:

ಮಹಾರಾಷ್ಟ್ರದ ಮುಂಬೈನಲ್ಲಿ ಮತ್ತೊಮ್ಮೆ ಕೊವಿಡ್-19 ಸೋಂಕಿನ ಸ್ಫೋಟ ಸಂಭವಿಸಿದೆ. ಕಳೆದ 24 ಗಂಟೆಗಳಲ್ಲಿ 8,938 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದ್ದು, ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 4,91,698 ಕ್ಕೆ ಏರಿಕೆಯಾಗಿದೆ. ಒಂದು ದಿನದಲ್ಲಿ 23 ಮಂದಿ ಕೊವಿಡ್-19 ಸೋಂಕಿನಿಂದ ಪ್ರಾಣ ಬಿಟ್ಟಿದ್ದು, ಸಾವಿನ ಸಂಖ್ಯೆ 11,874ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 4,503 ಕೊರೊನಾವೈರಸ್ ಸೋಂಕಿತರು ಗುಣಮುಖರಾಗಿದ್ದು, ಒಟ್ಟು ಸಂಖ್ಯೆ 3,92,514ಕ್ಕೆ ಏರಿಕೆಯಾಗಿದೆ. ಉಳಿದಂತೆ ಮುಂಬೈನಲ್ಲಿ 86,279 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+