ಹೊಸ ದಾಖಲೆ: ಮಹಾರಾಷ್ಟ್ರದಲ್ಲಿ ಒಂದೇ ದಿನ 57074 ಮಂದಿಗೆ ಕೊರೊನಾವೈರಸ್!

ಮುಂಬೈ, ಏಪ್ರಿಲ್ 04: ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಎರಡನೇ ಅಲೆಗೆ ಮಹಾರಾಷ್ಟ್ರ ತತ್ತರಿಸಿ ಹೋಗಿದೆ. ಭಾರತದಲ್ಲಿ ಪತ್ತೆಯಾಗುವ ಒಟ್ಟು ಕೊವಿಡ್-19 ಪ್ರಕರಣಗಳ ಪೈಕಿ ಶೇ.50ಕ್ಕಿಂತ ಹೆಚ್ಚು ಹೊಸ ಪ್ರಕರಣಗಳು ಮಹಾರಾಷ್ಟ್ರವೊಂದರಲ್ಲೇ ದೃಢಪಡುತ್ತಿವೆ.
ಮಹಾರಾಷ್ಟ್ರದಲ್ಲಿ ಕಳೆದ 24 ಗಂಟೆಗಳಲ್ಲೇ 57074 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಒಂದು ದಿನದಲ್ಲಿ ಮಹಾಮಾರಿಗೆ 222 ಮಂದಿ ಪ್ರಾಣ ಬಿಟ್ಟಿದ್ದು, 27,508 ಸೋಂಕಿತರು ಗುಣಮುಖರಾಗಿದ್ದಾರೆ.

ಮಹಾರಾಷ್ಟ್ರದಲ್ಲಿ ವಾರಾಂತ್ಯದ ಲಾಕ್‌ಡೌನ್: ನಿಯಮಗಳನ್ನು ಓದಿ
ಭಾನುವಾರದ ಅಂಕಿ-ಅಂಶಗಳ ಪ್ರಕಾರ, ಮಹಾರಾಷ್ಟ್ರದಲ್ಲಿ ಒಟ್ಟು 30,10,597 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ವರದಿಯಾಗಿವೆ. ಈ ಪೈಕಿ 25,22,823 ಸೋಂಕಿತರು ಗುಣಮುಖರಾಗಿದ್ದು, 55,878 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಇದರ ಹೊರತಾಗಿ ರಾಜ್ಯದಲ್ಲಿ 4,30,503 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

57074 New Coronavirus Cases Reported in Maharashtra in the Last 24 Hours

ಮುಂಬೈನಲ್ಲೇ 11000ಕ್ಕೂ ಹೆಚ್ಚು ಮಂದಿಗೆ ಕೊರೊನಾ:
ಮಹಾರಾಷ್ಟ್ರದ ಮುಂಬೈನಲ್ಲೇ 24 ಗಂಟೆಗಳಲ್ಲಿ 11,163 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದ್ದು, ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 4,52,445ಕ್ಕೆ ಏರಿಕೆಯಾಗಿದೆ. ಒಂದು ದಿನದಲ್ಲಿ 25 ಮಂದಿ ಕೊವಿಡ್-19 ಸೋಂಕಿನಿಂದ ಪ್ರಾಣ ಬಿಟ್ಟಿದ್ದು, ಸಾವಿನ ಸಂಖ್ಯೆ 11,776ಕ್ಕೆ ಏರಿಕೆಯಾಗಿದೆ. ಮುಂಬೈನಲ್ಲಿ ಈವರೆಗೂ 3,71,628 ಸೋಂಕಿತರು ಗುಣಮುಖರಾಗಿದ್ದು, 68,052 ಸಕ್ರಿಯ ಪ್ರಕರಣಗಳಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+