ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಹಾರಾಷ್ಟ್ರದಲ್ಲಿ ಒಂದೇ ದಿನ 57640 ಮಂದಿಗೆ ಕೊರೊನಾವೈರಸ್

|
Google Oneindia Kannada News

ಮುಂಬೈ, ಮೇ 05: ಭಾರತದಲ್ಲಿ ಕೊರೊನಾವೈರಸ್ ಎರಡನೇ ಅಲೆಯು ಎಲ್ಲರ ಎದೆಯಲ್ಲಿ ನಡುಕ ಹುಟ್ಟಿಸುತ್ತಿದೆ. ಪ್ರತಿಯೊಂದು ರಾಜ್ಯಗಳಲ್ಲೂ ಕೊವಿಡ್-19 ಸೋಂಕಿತ ಪ್ರಕರಣಗಳು ಹೊಸ ದಾಖಲೆ ಬರೆಯುತ್ತಿವೆ. ಮಹಾರಾಷ್ಟ್ರ ಕೂಡ ಈ ಪಟ್ಟಿಯಿಂದ ಹೊರತಾಗಿಲ್ಲ.

ಮಹಾರಾಷ್ಟ್ರದಲ್ಲಿ ಒಂದೇ ದಿನ 57640 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಒಂದೇ ದಿನ 920 ಮಂದಿ ಪ್ರಾಣ ಬಿಟ್ಟಿದ್ದು,57,006 ಸೋಂಕಿತರು ಗುಣಮುಖರಾಗಿದ್ದಾರೆ.

ಎಚ್ಚರ ತಪ್ಪದಿರಿ: ಭಾರತದಲ್ಲಿ ಕೊರೊನಾ ಕಡಿಮೆಯಾಗಲು ಇದೇ ಕಾರಣ!?ಎಚ್ಚರ ತಪ್ಪದಿರಿ: ಭಾರತದಲ್ಲಿ ಕೊರೊನಾ ಕಡಿಮೆಯಾಗಲು ಇದೇ ಕಾರಣ!?

ಬುಧವಾರದ ಅಂಕಿ-ಅಂಶಗಳ ಪ್ರಕಾರ, ರಾಜ್ಯದಲ್ಲಿ ಒಟ್ಟು 48,80,542 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ವರದಿಯಾಗಿವೆ. ಈವರೆಗೂ 41,64,098 ಸೋಂಕಿತರು ಗುಣಮುಖರಾಗಿದ್ದು, ಮಹಾಮಾರಿಗೆ 72,662 ಜನರು ಪ್ರಾಣ ಬಿಟ್ಟಿದ್ದಾರೆ. ಉಳಿದಂತೆ 6,41,596 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

57640 New Coronavirus Cases Reported in Maharashtra in the Last 24 Hours

ಮುಂಬೈನಲ್ಲೇ 3,879 ಮಂದಿಗೆ ಕೊರೊನಾವೈರಸ್:

ಮಹಾರಾಷ್ಟ್ರದ ಮುಂಬೈನಲ್ಲಿ ಕೊವಿಡ್-19 ಸೋಂಕಿತ ಪ್ರಕರಣಗಳ ಸಂಖ್ಯೆ ಮಂಗಳವಾರಕ್ಕೆ ಹೋಲಿಸಿದರೆ ಬುಧವಾರ ಮತ್ತಷ್ಟು ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 3,879 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದ್ದು, ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 6,65,299ಕ್ಕೆ ಏರಿಕೆಯಾಗಿದೆ. ಒಂದು ದಿನದಲ್ಲಿ 77 ಮಂದಿ ಕೊವಿಡ್-19 ಸೋಂಕಿನಿಂದ ಪ್ರಾಣ ಬಿಟ್ಟಿದ್ದು, ಸಾವಿನ ಸಂಖ್ಯೆ 13,547ಕ್ಕೆ ಏರಿಕೆಯಾಗಿದೆ. ಮುಂಬೈನಲ್ಲಿ 51,472 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ.

English summary
57640 New Coronavirus Cases Reported in Maharashtra in the Last 24 Hours.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X