ಮಹಾರಾಷ್ಟ್ರದಲ್ಲಿ ಒಂದೇ ದಿನ 58952 ಮಂದಿಗೆ ಕೊರೊನಾವೈರಸ್!
ಮುಂಬೈ, ಏಪ್ರಿಲ್ 14: ಮಹಾರಾಷ್ಟ್ರದಲ್ಲಿ ಕೊರೊನಾವೈರಸ್ ಸೋಂಕಿನ ಹರಡುವಿಕೆಗೆ ಕಡಿವಾಣವೇ ಇಲ್ಲದಂತಾಗಿದೆ. ರಾಜ್ಯದಲ್ಲಿ ಒಂದೇ ದಿನ 58952 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ.
ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 39,624 ಕೊರೊನಾವೈರಸ್ ಸೋಂಕಿತರು ಗುಣಮುಖರಾಗಿದ್ದು, ಮಹಾಮಾರಿಗೆ ಒಂದೇ ದಿನ 278 ಮಂದಿ ಪ್ರಾಣ ಬಿಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
Explained: ಭಾರತದಲ್ಲಿ ಭಯ ಹುಟ್ಟಿಸುತ್ತಿರುವುದೇಕೆ ಕೊರೊನಾವೈರಸ್?
ಬುಧವಾರದ ಅಂಕಿ-ಅಂಶಗಳ ಪ್ರಕಾರ, ಮಹಾರಾಷ್ಟ್ರದಲ್ಲಿ ಒಟ್ಟು ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ 35,78,160ಕ್ಕೆ ಏರಿಕೆಯಾಗಿದೆ. ಈವರೆಗೂ 29,05,721 ಸೋಂಕಿತರು ಗುಣಮುಖರಾಗಿದ್ದು, ಮಹಾಮಾರಿಗೆ ಒಟ್ಟು 58,804 ಮಂದಿ ಪ್ರಾಣ ಬಿಟ್ಟಿದ್ದಾರೆ. ಉಳಿದಂತೆ ರಾಜ್ಯದಲ್ಲಿ 6,12,070 ಸಕ್ರಿಯ ಪ್ರಕರಣಗಳಿವೆ.
ಮುಂಬೈನಲ್ಲೇ 9,925 ಮಂದಿಗೆ ಕೊರೊನಾ:
ಮಹಾರಾಷ್ಟ್ರದ ಮುಂಬೈನಲ್ಲಿ ಕೊವಿಡ್-19 ಸೋಂಕಿನ ಸ್ಫೋಟ ಸಂಭವಿಸಿದೆ. ಕಳೆದ 24 ಗಂಟೆಗಳಲ್ಲಿ 9,925 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದ್ದು, ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 5,44,942ಕ್ಕೆ ಏರಿಕೆಯಾಗಿದೆ. ಒಂದು ದಿನದಲ್ಲಿ 54 ಮಂದಿ ಕೊವಿಡ್-19 ಸೋಂಕಿನಿಂದ ಪ್ರಾಣ ಬಿಟ್ಟಿದ್ದಾರೆ. ಮುಂಬೈನಲ್ಲಿ 87,443 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ.