ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಹಾರಾಷ್ಟ್ರದಲ್ಲಿ ಒಂದೇ ದಿನ 58993 ಮಂದಿಗೆ ಕೊರೊನಾವೈರಸ್

|
Google Oneindia Kannada News

ಮುಂಬೈ, ಏಪ್ರಿಲ್ 09: ಮಹಾರಾಷ್ಟ್ರದಲ್ಲಿ ಕೊರೊನಾವೈರಸ್ ಸೋಂಕಿನ ಹರಡುವಿಕೆಗೆ ಕಡಿವಾಣವೇ ಇಲ್ಲದಂತಾಗಿದೆ. ರಾಜ್ಯದಲ್ಲಿ ಒಂದೇ ದಿನ 58993 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ.

ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 45,391 ಕೊರೊನಾವೈರಸ್ ಸೋಂಕಿತರು ಗುಣಮುಖರಾಗಿದ್ದು, ಮಹಾಮಾರಿಗೆ ಒಂದೇ ದಿನ 301 ಮಂದಿ ಪ್ರಾಣ ಬಿಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಲಸಿಕೆ ಅಭಾವ: ಮೋದಿಗೆ ಪ್ರಚಾರದ ಹುಚ್ಚು ಎಂದು ಕಾಂಗ್ರೆಸ್ ಸುಳ್ಳು ಮಾಹಿತಿ ನೀಡಿತೇ?ಲಸಿಕೆ ಅಭಾವ: ಮೋದಿಗೆ ಪ್ರಚಾರದ ಹುಚ್ಚು ಎಂದು ಕಾಂಗ್ರೆಸ್ ಸುಳ್ಳು ಮಾಹಿತಿ ನೀಡಿತೇ?

ಶುಕ್ರವಾರದ ಅಂಕಿ-ಅಂಶಗಳ ಪ್ರಕಾರ, ಮಹಾರಾಷ್ಟ್ರದಲ್ಲಿ ಒಟ್ಟು ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ 32,88,540ಕ್ಕೆ ಏರಿಕೆಯಾಗಿದೆ. ಈವರೆಗೂ 26,95,148 ಸೋಂಕಿತರು ಗುಣಮುಖರಾಗಿದ್ದು, ಮಹಾಮಾರಿಗೆ ಒಟ್ಟು 57,329 ಮಂದಿ ಪ್ರಾಣ ಬಿಟ್ಟಿದ್ದಾರೆ. ಉಳಿದಂತೆ ರಾಜ್ಯದಲ್ಲಿ 5,34,603 ಸಕ್ರಿಯ ಪ್ರಕರಣಗಳಿವೆ.

58993 New Coronavirus Cases Reported in Maharashtra in the Last 24 Hours

ಮುಂಬೈನಲ್ಲೇ 9,200 ಮಂದಿಗೆ ಕೊರೊನಾ:

ಮಹಾರಾಷ್ಟ್ರದ ಮುಂಬೈನಲ್ಲಿ ಕೊವಿಡ್-19 ಸೋಂಕಿನ ಸ್ಫೋಟ ಸಂಭವಿಸಿದೆ. ಕಳೆದ 24 ಗಂಟೆಗಳಲ್ಲಿ 9,200 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದ್ದು, ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 5,00,898ಕ್ಕೆ ಏರಿಕೆಯಾಗಿದೆ. ಒಂದು ದಿನದಲ್ಲಿ 35 ಮಂದಿ ಕೊವಿಡ್-19 ಸೋಂಕಿನಿಂದ ಪ್ರಾಣ ಬಿಟ್ಟಿದ್ದಾರೆ. ಮುಂಬೈನಲ್ಲಿ 90,333 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ.

English summary
58993 New Coronavirus Cases Reported in Maharashtra in the Last 24 Hours.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X