ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಹಾರಾಷ್ಟ್ರದಲ್ಲಿ 5 ಲಕ್ಷ ಮೀರಿದ ಕೊರೊನಾವೈರಸ್ ಸಕ್ರಿಯ ಪ್ರಕರಣ

|
Google Oneindia Kannada News

ಮುಂಬೈ, ಏಪ್ರಿಲ್ 07: ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಹರಡುವಿಕೆಗೆ ಕಡಿವಾಣ ಹಾಕುವಲ್ಲಿ ಮಹಾರಾಷ್ಟ್ರ ಸರ್ಕಾರ ಸಂಪೂರ್ಣ ವಿಫಲವಾಗುತ್ತಿದೆ ಎಂಬುದು ಅಂಕಿ-ಅಂಶಗಳಿಂದ ಸ್ಪಷ್ಟವಾಗಿ ಗೋಚರಿಸುತ್ತಿದೆ. ಪ್ರತಿನಿತ್ಯ ಕೊವಿಡ್-19 ಹೊಸ ಪ್ರಕರಣಗಳ ಸಂಖ್ಯೆ ಜನರಲ್ಲಿ ಭಯವನ್ನು ಹೆಚ್ಚಿಸುತ್ತಿದೆ.

ಮಹಾರಾಷ್ಟ್ರದಲ್ಲಿ ಒಂದೇ ದಿನದಲ್ಲಿ 59,907 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಕಳೆದ 24 ಗಂಟೆಗಳಲ್ಲಿ 322 ಮಂದಿ ಕೊವಿಡ್-19 ಸೋಂಕಿನಿಂದ ಪ್ರಾಣ ಬಿಟ್ಟಿದ್ದರೆ, 30,296 ಸೋಂಕಿತರು ಗುಣಮುಖರಾಗಿದ್ದಾರೆ.

ಲಸಿಕೆ ಪಡೆದ ಬಳಿಕ ಕೊರೊನಾ ಸೋಂಕು: ಕೇಂದ್ರದಿಂದ ಅಧ್ಯಯನಲಸಿಕೆ ಪಡೆದ ಬಳಿಕ ಕೊರೊನಾ ಸೋಂಕು: ಕೇಂದ್ರದಿಂದ ಅಧ್ಯಯನ

ರಾಜ್ಯದಲ್ಲಿ ಒಟ್ಟು 31,73,261 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ವರದಿಯಾಗಿವೆ. ಈ ಪೈಕಿ 26,13,627 ಸೋಂಕಿತರು ಗುಣಮುಖರಾಗಿದ್ದು, 56,652 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಇದರ ಹೊರತಾಗಿ 5,01,559 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

59907 New Coronavirus Cases Reported in Maharashtra in the Last 24 Hours

ಮುಂಬೈನಲ್ಲೇ 10,428 ಮಂದಿಗೆ ಕೊರೊನಾವೈರಸ್:

ಮಹಾರಾಷ್ಟ್ರದ ಮುಂಬೈನಲ್ಲಿ ಮತ್ತೊಮ್ಮೆ ಕೊವಿಡ್-19 ಸೋಂಕಿನ ಸ್ಫೋಟ ಸಂಭವಿಸಿದೆ. ಕಳೆದ 24 ಗಂಟೆಗಳಲ್ಲಿ 10,428 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದ್ದು, ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 4,82,760ಕ್ಕೆ ಏರಿಕೆಯಾಗಿದೆ. ಒಂದು ದಿನದಲ್ಲಿ 23 ಮಂದಿ ಕೊವಿಡ್-19 ಸೋಂಕಿನಿಂದ ಪ್ರಾಣ ಬಿಟ್ಟಿದ್ದು, ಸಾವಿನ ಸಂಖ್ಯೆ 11,851ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 6007 ಕೊರೊನಾವೈರಸ್ ಸೋಂಕಿತರು ಗುಣಮುಖರಾಗಿದ್ದು, ಒಟ್ಟು ಸಂಖ್ಯೆ 3,88,011ಕ್ಕೆ ಏರಿಕೆಯಾಗಿದೆ. ಉಳಿದಂತೆ ಮುಂಬೈನಲ್ಲಿ 81,886 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ.

English summary
59907 New Coronavirus Cases Reported in Maharashtra in the Last 24 Hours.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X