ಮುಂಬೈ ಬಹುಮಹಡಿ ಅಗ್ನಿ ದುರಂತ; 6 ಸಾವು, 28 ಮಂದಿಗೆ ಗಾಯ

ಮುಂಬೈ, ಜನವರಿ 22: ಮುಂಬೈನ ಭಾಟಿಯಾ ಆಸ್ಪತ್ರೆ ಬಳಿಯ 20 ಮಹಡಿ ಕಟ್ಟದಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಮೃತಪಟ್ಟವರ ಸಂಖ್ಯೆ 6ಕ್ಕೆ ಏರಿಕೆಯಾಗಿದೆ. ಅಗ್ನಿ ದುರಂತದಲ್ಲಿ 28ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಮುಂಬೈ ನಗರದ ಟಾರ್ಡಿಯೊ ಪ್ರದೇಶದ ನಾನಾ ಚೌಕ್‌ನಲ್ಲಿರುವ ಕಮಲಾ ಬಿಲ್ಡಿಂಗ್‌ನ 18ನೇ ಮಹಡಿಯಲ್ಲಿ ಶನಿವಾರ ಬೆಳಗ್ಗೆ 7:30ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ ಎಂದು ಪ್ರಾಥಮಿಕ ವರದಿಗಳಿಂದ ಗೊತ್ತಾಗಿದೆ.

ಮುಂಬೈ ಅಗ್ನಿಶಾಮಕ ದಳ ಇದನ್ನು ಲೆವೆಲ್-3 ಬೆಂಕಿ ಎಂದು ತಿಳಿಸಿದೆ. ಸ್ಥಳದಲ್ಲಿ 13 ಅಗ್ನಿಶಾಮಕ ದಳ ವಾಹನದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸುತ್ತಿದ್ದು, ಐದು ಆಂಬುಲೆನ್ಸ್ ಮೂಲಕ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗಳಿಗೆ ರವಾನಿಸುವ ಕೆಲಸ ಮಾಡಲಾಗುತ್ತಿದೆ. ಗಾಯಗೊಂಡವರ ಪೈಕಿ ಏಳು ಮಂದಿಯನ್ನು ನಾಯರ್ ಆಸ್ಪತ್ರೆಗೆ ರವಾನಿಸಲಾಗಿದ್ದು, ಮಾರ್ಗ ಮಧ್ಯದಲ್ಲೇ ಇಬ್ಬರು ಮೃತಪಟ್ಟಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ. ಉಳಿದ ಮೂವರು ಗಂಭೀರವಾಗಿ ಗಾಯಗೊಂಡಿದ್ದರೆ, ಇಬ್ಬರ ಸ್ಥಿತಿ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

6 Dead, 28 injured in massive Fire incident Mumbai multi-storey Building

ಭಾಟಿಯಾ ಆಸ್ಪತ್ರೆಗೆ 15 ಗಾಯಾಳುಗಳು ದಾಖಲು:

ಮುಂಬೈ ಬಹುಮಹಡಿ ಕಟ್ಟಡದ ಅಗ್ನಿ ದುರಂತದಲ್ಲಿ ಗಾಯಗೊಂಡ 15 ಮಂದಿಯನ್ನು ಸಮೀಪದ ಭಾಟಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂವರು ರೋಗಿಗಳ ಸ್ಥಿತಿ ಚಿಂತಾಜನಕವಾಗಿದ್ದು, ಇತರರು ಸಾಮಾನ್ಯ ವಾರ್ಡ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಕಸ್ತೂರ್ ಬಾ ಆಸ್ಪತ್ರೆಗೆ ಇಬ್ಬರನ್ನು ದಾಖಲಿಸಲಾಗಿದ್ದು, ಈ ಪೈಕಿ ಒಬ್ಬರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಅಗ್ನಿ ದುರಂತದ ಬಗ್ಗೆ ಅಧಿಕಾರಿಗಳಿಂದ ಮಾಹಿತಿ:

ಮಹಾರಾಷ್ಟ್ರ ಸಚಿವ ಆದಿತ್ಯ ಠಾಕ್ರೆ ಅವರು ಅಗ್ನಿಶಾಮಕ ಮತ್ತು ರಕ್ಷಣಾ ಕಾರ್ಯಾಚರಣೆ ಮೇಲೆ ನಿಗಾ ವಹಿಸುತ್ತಿರುವುದಾಗಿ ಹೇಳಿದ್ದಾರೆ. "ಟಾರ್ಡಿಯೊದಲ್ಲಿನ ಕಮಲಾ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿರುವ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ಮಾಹಿತಿ ಪಡೆದುಕೊಳ್ಳುತ್ತಿದ್ದೇನೆ. ಅಗ್ನಿಶಾಮಕ ದಳ ಸಿಬ್ಬಂದಿ ಮತ್ತು ಪೊಲೀಸರು ಸ್ಥಳದಲ್ಲಿದ್ದು, ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ಅವರು ಟ್ವೀಟ್ ಮಾಡಿದ್ದಾರೆ.

ಅಗ್ನಿ ಅವಘಡಕ್ಕೆ ಏನು ಕಾರಣ?:

ಕಟ್ಟಡದ ವಿದ್ಯುತ್ ನಾಳದಲ್ಲಿನ ಕೆಲವು ಕೇಬಲ್‌ಗಳು ಕರಗಿದ ನಂತರ ಬೆಂಕಿ ಕಾಣಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವಿದ್ಯುತ್ ನಾಳದ ಹೊಗೆ ಬಹು ಮಹಡಿಗೆ ಹರಡಿದ್ದು, ಕಟ್ಟಡವು ಅಗ್ನಿಶಾಮಕ ವ್ಯವಸ್ಥೆಯನ್ನು ಹೊಂದಿದ್ದರೂ ಅದು ಕಾರ್ಯನಿರ್ವಹಿಸಲು ವಿಫಲವಾಗಿದೆ. ಕಟ್ಟಡದ ಎಲ್ಲಾ ಮಹಡಿಗಳಿಂದ ಜನರನ್ನು ತೆರವುಗೊಳಿಸಲಾಗಿದ್ದು, ಹೊಗೆಯಿಂದ ಉಸಿರಾಟ ಸಮಸ್ಯೆ ಎದುರಿಸುತ್ತಿರುವ ಜನರನ್ನು ಆಸ್ಪತ್ರೆಗಳಿಗೆ ರವಾನಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+