ಮಹಾರಾಷ್ಟ್ರದಲ್ಲಿ ಒಂದೇ ದಿನ 63294 ಮಂದಿಗೆ ಕೊರೊನಾವೈರಸ್!
ಮುಂಬೈ, ಏಪ್ರಿಲ್ 12: ಮಹಾರಾಷ್ಟ್ರದಲ್ಲಿ ಕೊರೊನಾವೈರಸ್ ಎರಡನೇ ಅಲೆ ಮೇಲಿಂದ ಮೇಲೆ ಹೊಡೆತ ಕೊಡುತ್ತಿದೆ. ಒಂದೇ ದಿನದಲ್ಲಿ ಅತಿಹೆಚ್ಚು ಕೊವಿಡ್-19 ಸೋಂಕಿತ ಪ್ರಕರಣಗಳು ಇದೊಂದೇ ರಾಜ್ಯದಲ್ಲಿ ವರದಿಯಾಗಿದೆ.
ಕಳೆದ 24 ಗಂಟೆಗಳಲ್ಲಿ ಮಹಾರಾಷ್ಟ್ರದಲ್ಲಿ 63,294 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಒಂದು ದಿನದಲ್ಲಿ 34,008 ಸೋಂಕಿತರು ಗುಣಮುಖರಾಗಿದ್ದು, ಮಹಾಮಾರಿಗೆ 349 ಮಂದಿ ಪ್ರಾಣ ಬಿಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ರಾಜ್ಯದಲ್ಲಿ ಒಟ್ಟು ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ 34,07,245ಕ್ಕೆ ಏರಿಕೆಯಾಗಿದೆ. ಈವರೆಗೂ 27,82,161 ಸೋಂಕಿತರು ಗುಣಮುಖರಾಗಿದ್ದು, ಮಹಾಮಾರಿಗೆ ಒಟ್ಟು 57,987 ಮಂದಿ ಪ್ರಾಣ ಬಿಟ್ಟಿದ್ದಾರೆ. ಉಳಿದಂತೆ ರಾಜ್ಯದಲ್ಲಿ 5,65,587 ಸಕ್ರಿಯ ಪ್ರಕರಣಗಳಿವೆ.

ಪುಣೆಯಲ್ಲೇ 12,377 ಮಂದಿಗೆ ಕೊರೊನಾ:
ಮಹಾರಾಷ್ಟ್ರದ ಪುಣೆಯಲ್ಲಿ ಕೊವಿಡ್-19 ಸೋಂಕಿನ ಸ್ಫೋಟವಾಗಿದೆ. ಕಳೆದ 24 ಗಂಟೆಗಳಲ್ಲಿ 12,377 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಒಂದು ದಿನದಲ್ಲಿ 87 ಮಂದಿ ಕೊವಿಡ್-19 ಸೋಂಕಿನಿಂದ ಪ್ರಾಣ ಬಿಟ್ಟಿದ್ದು, ಸಾವಿನ ಸಂಖ್ಯೆ 10,710ಕ್ಕೆ ಏರಿಕೆಯಾಗಿದೆ. ಉಳಿದಂತೆ ಪುಣೆಯಲ್ಲಿ 98,422 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ.












Click it and Unblock the Notifications