ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಹಾರಾಷ್ಟ್ರದಲ್ಲಿ ಒಂದೇ ದಿನ 63,309 ಮಂದಿಗೆ ಕೊರೊನಾವೈರಸ್!

|
Google Oneindia Kannada News

ಮುಂಬೈ, ಏಪ್ರಿಲ್ 28: ಮಹಾರಾಷ್ಟ್ರದಲ್ಲಿ ಮಂಗಳವಾರ ದೃಢಪಟ್ಟ ಕೊರೊನಾವೈರಸ್ ಸೋಂಕಿತ ಪ್ರಕರಣಗಳಿಗೆ ಹೋಲಿಸಿದರೆ ಕಳೆದ 24 ಗಂಟೆಗಳಲ್ಲಿ 3000ಕ್ಕೂ ಹೆಚ್ಚು ಸೋಂಕಿತ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆಯಾಗಿದೆ.

ಮಹಾರಾಷ್ಟ್ರದಲ್ಲಿ ಒಂದೇ ದಿನ 63,309 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಕಳೆದ 24 ಗಂಟೆಗಳಲ್ಲಿ 985 ಜನರು ಮಹಾಮಾರಿಗೆ ಬಲಿಯಾಗಿದ್ದು, ಇದೇ ಅವಧಿಯಲ್ಲಿ 61,181 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ.

ನಿಮ್ಮ ಧ್ವನಿ ಬದಲಾವಣೆಯೂ ಕೊರೊನಾ ಸೋಂಕಿನ ಒಂದು ಲಕ್ಷಣನಿಮ್ಮ ಧ್ವನಿ ಬದಲಾವಣೆಯೂ ಕೊರೊನಾ ಸೋಂಕಿನ ಒಂದು ಲಕ್ಷಣ

ಬುಧವಾರದ ಅಂಕಿ-ಅಂಶಗಳ ಪ್ರಕಾರ, ರಾಜ್ಯದಲ್ಲಿ ಒಟ್ಟು 44,73,394 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ವರದಿಯಾಗಿವೆ. ಈವರೆಗೂ 37,30,729 ಸೋಂಕಿತರು ಗುಣಮುಖರಾಗಿದ್ದು, 6,73,481 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

 63309 New Coronavirus Cases Reported in Maharashtra in the Last 24 Hours

ಮುಂಬೈನಲ್ಲೇ 4,966 ಮಂದಿಗೆ ಕೊರೊನಾ:

ಮಹಾರಾಷ್ಟ್ರದ ಮುಂಬೈನಲ್ಲಿ ಕೊವಿಡ್-19 ಸೋಂಕಿತ ಪ್ರಕರಣಗಳ ಸಂಖ್ಯೆಯಲ್ಲಿ ಮತ್ತೊಮ್ಮೆ ಏರಿಕೆ ಕಂಡಿದೆ. ಕಳೆದ 24 ಗಂಟೆಗಳಲ್ಲಿ 4,966 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದ್ದು, ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 6,40,507ಕ್ಕೆ ಏರಿಕೆಯಾಗಿದೆ. ಒಂದು ದಿನದಲ್ಲಿ 78 ಮಂದಿ ಕೊವಿಡ್-19 ಸೋಂಕಿನಿಂದ ಪ್ರಾಣ ಬಿಟ್ಟಿದ್ದು, ಸಾವಿನ ಸಂಖ್ಯೆ 12954ಕ್ಕೆ ಏರಿಕೆಯಾಗಿದೆ. ಮುಂಬೈನಲ್ಲಿ 67984 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ.

English summary
63309 New Coronavirus Cases Reported in Maharashtra in the Last 24 Hours.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X