18 ವರ್ಷದ ಬಳಿಕ ಪಾಕಿಸ್ತಾನ ಜೈಲಿನಿಂದ ಬಿಡುಗಡೆಯಾಗಿ ಭಾರತಕ್ಕೆ ಮರಳಿದ ಮಹಿಳೆ
ಔರಂಗಾಬಾದ್, ಜನವರಿ 27: ಸುಮಾರು 18 ವರ್ಷಗಳ ಹಿಂದೆ ತಮ್ಮ ಪತಿಯ ಸಂಬಂಧಿಕರನ್ನು ಭೇಟಿ ಮಾಡಲು ಪಾಕಿಸ್ತಾನಕ್ಕೆ ತೆರಳಿ ಅಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿದ್ದ 65 ವರ್ಷದ ಮಹಿಳೆ ಕೊನೆಗೂ ಮಂಗಳವಾರ ತಾಯ್ನಾಡಿಗೆ ಮರಳಿದ್ದಾರೆ. ಪಾಕಿಸ್ತಾನಕ್ಕೆ ತೆರಳಿದ್ದಾಗ ತಮ್ಮ ಪಾಸ್‌ಪೋರ್ಟ್ ಕಳೆದುಕೊಂಡಿದ್ದೇ ಅವರ ಬದುಕು ನರಕವಾಗಲು ಕಾರಣವಾಗಿತ್ತು. ಮಹಿಳೆ 'ನಾಪತ್ತೆ'ಯಾಗಿದ್ದಾರೆ ಎಂದು ಔರಂಗಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪಾಕಿಸ್ತಾನದಲ್ಲಿ ಸೆರೆವಾಸ ಅನುಭವಿಸಿ 18 ವರ್ಷದ ಬಳಿಕ ಮಹಾರಾಷ್ಟ್ರದ ಔರಂಗಾಬಾದ್‌ನಲ್ಲಿನ ತಮ್ಮ ಮನೆಗೆ ಮರಳಿದ ಹಸೀನಾ ಬೇಗಂ ಅವರನ್ನು ಕುಟುಂಬದ ಸದಸ್ಯರು ಮತ್ತು ಔರಂಗಾಬಾದ್ ಪೊಲೀಸರು ಸಂಭ್ರಮದಿಂದ ಸ್ವಾಗತಿಸಿದರು.
'ನಾನು ಬಹಳ ಸಂಕಷ್ಟಗಳನ್ನು ಎದುರಿಸಿದೆ. ನನ್ನ ದೇಶಕ್ಕೆ ವಾಪಸಾದ ಬಳಿಕ ನನಗೆ ನೆಮ್ಮದಿ ಸಿಕ್ಕಂತಾಗಿದೆ. ನನಗೆ ನಾನು ಸ್ವರ್ಗದಲ್ಲಿದ್ದೇನೆ ಎನಿಸುತ್ತಿದೆ. ಪಾಕಿಸ್ತಾನದಲ್ಲಿ ಬಲವಂತವಾಗಿ ಜೈಲಿಗೆ ಹಾಕಲಾಗಿತ್ತು' ಎಂದು ಹಸೀನಾ ಬೇಗಂ ಭಾವುಕರಾಗಿ ಹೇಳಿದ್ದಾರೆ.

ಪತಿಯ ಸಂಬಂಧಿಕರನ್ನು ಭೇಟಿ ಮಾಡುವ ಸಲುವಾಗಿ ಪಾಕಿಸ್ತಾನಕ್ಕೆ ತೆರಳಿದ್ದ ಅವರು, ಲಾಹೋರ್‌ನಲ್ಲಿದ್ದಾಗ ಆಕಸ್ಮಿಕವಾಗಿ ತಮ್ಮ ಪಾಸ್‌ಪೋರ್ಟ್ ಕಳೆದುಕೊಂಡರು. ಆಕೆಯನ್ನು ಅಲ್ಲಿನ ಅಧಿಕಾರಿಗಳು ಬಲವಂತವಾಗಿ ಜೈಲಿಗೆ ಕಳುಹಿಸಿದರು. ತಾವು ಮುಗ್ಧೆ, ಬಿಡುಗಡೆ ಮಾಡಿ ಎಂದು ಪರಿಪರಿಯಾಗಿ ಬೇಡಿಕೊಂಡರೂ ಅಧಿಕಾರಿಗಳ ಮನಸು ಕರಗಿರಲಿಲ್ಲ. ಹೀಗೆ ಜೈಲಿನಲ್ಲಿ ಅನ್ಯಾಯವಾಗಿ 18 ವರ್ಷಗಳನ್ನು ಕಳೆಯುವಂತಾಗಿತ್ತು.
ಔರಂಗಾಬಾದ್ ಪೊಲೀಸರು ತಮ್ಮ ಸಿಟಿ ಚೌಕ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿನ ರಶೀದ್‌ಪುರ ಎಂಬಲ್ಲಿ ಹಸೀನಾ ಅವರ ಮನೆ ಇದೆ ಎಂಬ ದಾಖಲಾತಿಗಳನ್ನು ಒಳಗೊಂಡ ವರದಿಯನ್ನು ಕಳುಹಿಸಿದ ಬಳಿಕವಷ್ಟೇ ಪಾಕಿಸ್ತಾನದ ಅಧಿಕಾರಿಗಳ ಅದರ ಬಗ್ಗೆ ಗಮನ ಹರಿಸಿದ್ದರು. 'ಈ ವಿಚಾರದಲ್ಲಿ ವರದಿ ಸಲ್ಲಿಸಿದ್ದಕ್ಕಾಗಿ ಔರಂಗಾಬಾದ್ ಪೊಲೀಸರಿಗೆ ನಾನು ಧನ್ಯವಾದ ಅರ್ಪಿಸುತ್ತೇನೆ' ಎಂದು ಹಸೀನಾ ತಿಳಿಸಿದ್ದಾರೆ.
ಉತ್ತರ ಪ್ರದೇಶದ ಸಹರಾನ್‌ಪುರ ನಿವಾಸಿ ದಿಲ್ಶಾದ್ ಅಹ್ಮದ್ ಎಂಬುವವರೊಂದಿಗೆ ಹಸೀನಾ ಮದುವೆಯಾಗಿತ್ತು. ಕಳೆದ ವಾರ ಅವರನ್ನು ಬಿಡುಗಡೆ ಮಾಡಿದ್ದ ಪಾಕಿಸ್ತಾನ, ಭಾರತದ ಅಧಿಕಾರಿಗಳಿಗೆ ಹಸ್ತಾಂತರಿಸಿತ್ತು.
-
Sri Rama Navami 2026: ಶ್ರೀ ರಾಮನವಮಿ; ಧರ್ಮದ ಜಯದ ದಿವ್ಯ ಸಂದೇಶ -
Petrol Diesel Shortage: ಪೆಟ್ರೋಲ್, ಡೀಸೆಲ್ ಖಾಲಿಯಾಗುತ್ತೆ ಅನ್ನೋ ಸುಳ್ಳು ವದಂತಿಗಳಿಗೆ ಕಿವಿಕೊಡಬೇಡಿ; ಇಂಡಿಯನ್ ಆಯಿಲ್ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL












Click it and Unblock the Notifications