ಮಹಾರಾಷ್ಟ್ರದಲ್ಲಿ ಒಂದೇ ದಿನ 66358 ಮಂದಿಗೆ ಕೊರೊನಾವೈರಸ್
ಮುಂಬೈ, ಏಪ್ರಿಲ್ 27: ಭಾರತದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಅಲೆಯ ಹರಡುವಿಕೆ ವೇಗ ಹೆಚ್ಚುತ್ತಿದೆ. ದೇಶದಲ್ಲಿ ಪ್ರತಿನಿತ್ಯ ದಾಖಲಾಗುತ್ತಿರುವ ಹೊಸ ಪ್ರಕರಣಗಳ ಪೈಕಿ ಸಿಂಹಪಾಲು ಮಹಾರಾಷ್ಟ್ರಕ್ಕೆ ಸೇರಿದೆ. ಕಳೆದ 24 ಗಂಟೆಗಳಲ್ಲೂ ಕೂಡಾ ಸೋಂಕಿತ ಪ್ರಕರಣಗಳ ಸಂಖ್ಯೆ 60 ಸಾವಿರದ ಗಡಿ ದಾಟಿದೆೆ.
ಮಹಾರಾಷ್ಟ್ರದಲ್ಲಿ ಒಂದೇ ದಿನ 66358 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಒಂದೇ ದಿನ 895 ಮಂದಿ ಪ್ರಾಣ ಬಿಟ್ಟಿದ್ದು, 67,752 ಸೋಂಕಿತರು ಗುಣಮುಖರಾಗಿದ್ದಾರೆ.
ಭಾನುವಾರದ ಅಂಕಿ-ಅಂಶಗಳ ಪ್ರಕಾರ, ರಾಜ್ಯದಲ್ಲಿ ಒಟ್ಟು 44,100,85 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ವರದಿಯಾಗಿವೆ. ಈವರೆಗೂ 36,69,548 ಸೋಂಕಿತರು ಗುಣಮುಖರಾಗಿದ್ದು, 6,72,434 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಮುಂಬೈನಲ್ಲೇ 4,014 ಮಂದಿಗೆ ಕೊರೊನಾ:
ಮಹಾರಾಷ್ಟ್ರದ ಮುಂಬೈನಲ್ಲಿ ಕೊವಿಡ್-19 ಸೋಂಕಿತ ಪ್ರಕರಣಗಳ ಸಂಖ್ಯೆಯಲ್ಲಿ ಕೊಂಚ ಇಳಿಮುಖವಾಗಿದೆ. ಕಳೆದ 24 ಗಂಟೆಗಳಲ್ಲಿ 4,014 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಒಂದು ದಿನದಲ್ಲಿ 59 ಮಂದಿ ಕೊವಿಡ್-19 ಸೋಂಕಿನಿಂದ ಪ್ರಾಣ ಬಿಟ್ಟಿದ್ದು, ಸಾವಿನ ಸಂಖ್ಯೆ 12920ಕ್ಕೆ ಏರಿಕೆಯಾಗಿದೆ. ಮುಂಬೈನಲ್ಲಿ 68603 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ.












Click it and Unblock the Notifications