ಮಹಾರಾಷ್ಟ್ರದಲ್ಲಿ ಒಂದೇ ದಿನ 68,000ಕ್ಕೂ ಹೆಚ್ಚು ಕೊರೊನಾ ಕೇಸ್!
ಮುಂಬೈ, ಏಪ್ರಿಲ್ 18: ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಎರಡನೇ ಅಲೆಗೆ ಮಹಾರಾಷ್ಟ್ರ ತತ್ತರಿಸಿ ಹೋಗಿದೆ. ಪ್ರತಿನಿತ್ಯ ಇಡೀ ದೇಶದಲ್ಲಿ ಅತಿಹೆಚ್ಚು ಸೋಂಕಿತ ಪ್ರಕರಣಗಳು ಇದೊಂದೇ ರಾಜ್ಯದಲ್ಲಿ ವರದಿಯಾಗುತ್ತಿವೆ.
ಮಹಾರಾಷ್ಟ್ರದಲ್ಲಿ ಕಳೆದ 24 ಗಂಟೆಗಳಲ್ಲಿ 68631 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಒಂದೇ ದಿನ 503 ಮಂದಿ ಪ್ರಾಣ ಬಿಟ್ಟಿದ್ದು, 45,654 ಸೋಂಕಿತರು ಗುಣಮುಖರಾಗಿದ್ದಾರೆ.
Explainer: ಕೊರೊನಾವೈರಸ್ ಅಲೆಗಳ ಆಯುಷ್ಯದ ಮೇಲೆ ಭಾರತದ ಭವಿಷ್ಯ!?
ಭಾನುವಾರದ ಅಂಕಿ-ಅಂಶಗಳ ಪ್ರಕಾರ, ರಾಜ್ಯದಲ್ಲಿ ಒಟ್ಟು 31,06,828 ಕೊರೊನಾವೈರಸ್ ಸೋಂಕಿತರು ಗುಣಮುಖರಾಗಿದ್ದಾರೆ. 6,70,388 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ. ಮಹಾರಾಷ್ಟ್ರದಲ್ಲಿ ಕೊರೊನಾವೈರಸ್ ಮಹಾಮಾರಿಗೆ 60,473 ಜನರು ಪ್ರಾಣ ಬಿಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಮುಂಬೈನಲ್ಲೇ 8479 ಮಂದಿಗೆ ಕೊರೊನಾ:
ಮಹಾರಾಷ್ಟ್ರದ ಮುಂಬೈನಲ್ಲಿ ಕೊವಿಡ್-19 ಸೋಂಕಿನ ಸ್ಫೋಟ ಸಂಭವಿಸಿದೆ. ಕಳೆದ 24 ಗಂಟೆಗಳಲ್ಲಿ 8479 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಒಂದು ದಿನದಲ್ಲಿ 53 ಮಂದಿ ಕೊವಿಡ್-19 ಸೋಂಕಿನಿಂದ ಪ್ರಾಣ ಬಿಟ್ಟಿದ್ದು, ಸಾವಿನ ಸಂಖ್ಯೆ 12347ಕ್ಕೆ ಏರಿಕೆಯಾಗಿದೆ. ಮುಂಬೈನಲ್ಲಿ 87698 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ.












Click it and Unblock the Notifications