ಮುಂಬೈನಲ್ಲಿ ಕೋವಿಡ್ ಸಾವಿನ ಸಂಖ್ಯೆ ಒಂದಂಕಿಗೆ ಇಳಿಕೆ
ಮುಂಬೈ, ಜೂನ್ 09; ಮುಂಬೈ ನಗರದಲ್ಲಿ ಮಂಗಳವಾರ 7 ಕೋವಿಡ್ ಸೋಂಕಿತರು ಮೃತಪಟ್ಟಿದ್ದಾರೆ. ಮಾರ್ಚ್ 20ರ ಬಳಿಕ ಮೊದಲ ಬಾರಿಗೆ ನಗರದಲ್ಲಿ ಮೃತಪಟ್ಟವರ ಸಂಖ್ಯೆ ಒಂದಂಕಿಗೆ ಇಳಿಕೆಯಾಗಿದೆ. ಇದುವರೆಗೂ 15 ಸಾವಿರ ಜನರು ನಗರದಲ್ಲಿ ಮೃತಪಟ್ಟಿದ್ದಾರೆ.
ಮಂಗಳವಾರ 682 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿದ್ದು, 7 ಜನರು ಮೃತಪಟ್ಟಿದ್ದಾರೆ. ನಗರದಲ್ಲಿ ಎರಡೂವರೆ ತಿಂಗಳ ಬಳಿಕ ಸಾವಿನ ಸಂಖ್ಯೆ ಒಂದಂಕಿಗೆ ಬಂದಿದೆ.
15 ದಿನಗಳ ಬಳಿಕ ನಗರದಲ್ಲಿನ ಹೊಸ ಪ್ರಕರಣಗಳ ಸಂಖ್ಯೆ 900-1000ದಿಂದ 600ಕ್ಕೆ ಇಳಿಕೆಯಾಗಿದೆ. ನಗರದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 15,000. ಕಳೆದ ಕೆಲವು ದಿನಗಳಿಂದ ಪಾಸಿಟಿವಿಟಿ ದರ ಶೇ 3ಕ್ಕಿಂತ ಕಡಿಮೆ ಇದೆ.

ಪುಣೆ ಮತ್ತು ನಾಗ್ಪುರದಲ್ಲಿ ಸಾವಿನ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಮಂಗಳವಾರ ಪುಣೆಯಲ್ಲಿ 37, ನಾಗ್ಪುರದಲ್ಲಿ 18 ಜನರು ಮೃತಪಟ್ಟಿದ್ದಾರೆ. ಮಹಾರಾಷ್ಟ್ರದಲ್ಲಿ ಮಂಗಳವಾರ 702 ಜನರು ಸಾವನ್ನಪ್ಪಿದ್ದಾರೆ.
ರಾಜ್ಯದಲ್ಲಿನ ಹೊಸ ಕೋವಿಡ್ ಪ್ರಕರಣಗಳ ಸಂಖ್ಯೆ ಹಾಗೆಯೇ ಮುಂದುವರೆದಿದೆ. ಮಂಗಳವಾರ ರಾಜ್ಯದಲ್ಲಿ 10,891 ಹೊಸ ಪ್ರಕರಣ ದಾಖಲಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 1.67 ಲಕ್ಷ. ಒಟ್ಟು ಮೃತಪಟ್ಟವರು 1.01 ಲಕ್ಷ.
ಹೊಸ ಪ್ರಕರಣಗಳ ಸಂಖ್ಯೆ ಕಡಿಮೆಯಾದ ಹಿನ್ನಲೆಯಲ್ಲಿ ಮುಂಬೈ ಮಹಾನಗರ ಪಾಲಿಕೆ ಕೋವಿಡ್ ಕೇರ್ ಸೆಂಟರ್‌ಗಳಲ್ಲಿನ ಸಿಬ್ಬಂದಿಯನ್ನು ಕಡಿಮೆ ಮಾಡಿದೆ. ಪುನಃ ಸಿಬ್ಬಂದಿ ಬೇಕಾದರೆ ಮತ್ತೆ ನೇಮಕ ಮಾಡಿಕೊಳ್ಳಲಾಗುತ್ತದೆ ಎಂದು ಹೇಳಿದೆ.












Click it and Unblock the Notifications